ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ: ಖಾದರ್
ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದಂತೆ ರಾಜ್ಯದಲ್ಲೂ ಮತ್ತೆ ಕಾಂಗ್ರೆಸ್‌ಗೆ ಅಧಿಕಾರ
Team Udayavani, Nov 29, 2019, 9:09 PM IST
ಹೊಸಪೇಟೆ: ಮಹಾರಾಷ್ಟ್ರ ಮತ್ತು ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಒಂದೇ ರೀತಿಯದ್ದು. ಇದರಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಈಗಾಗಲೇ ಯಶ ಕಂಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೂಡ ಯಶಸ್ವಿಯಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ದೇಶದಲ್ಲಿ ರಾತ್ರೋ ರಾತ್ರಿ ಸರ್ಕಾರಗಳು ರಚನೆಯಾಗುತ್ತವೆ. ಬೆಳಗಾಗೋದರೊಳಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ. ಹೀಗಾದರೆ ದೇಶದ ಪರಿಸ್ಥಿತಿ ಏನು ಎಂಬುದೇ ತಿಳಿಯುತ್ತಿಲ್ಲ. ಯಾವುದೇ ಒಂದು ಸರ್ಕಾರ ರಚನೆಯಾದಾಗ ಸಂಭ್ರಮಾಚರಣೆ ಮನೆ ಮಾಡಿರುತ್ತದೆ. ಆದರೆ ಬಿಜೆಪಿಯವರು ಅಧಿಕಾರ ಹಿಡಿಯಲೇಬೇಕೆಂದು ತರಾತುರಿಯಲ್ಲಿ ಜನ ನಿದ್ರೆಯಲ್ಲಿದ್ದಾಗ ಅಧಿಕಾರ ಸ್ವೀಕಾರ ಮಾಡಿದರು. ಆದರೂ ಪ್ರಜಾಪ್ರಭುತ್ವದಲ್ಲಿ ನಮಗೆ ವಿಶ್ವಾಸವಿತ್ತು. ಶಿವಸೇ ನೆಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿ ಕೊಂಡೆವು. ಅದೇ ರೀತಿ ಮುಂದೊಮ್ಮೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿ ದ್ದೇವೆ ಎಂದರು.
ಚುನಾವಣೆ ಸಂದರ್ಭದಲ್ಲಿ ಅನುದಾನ ಬಿಡುಗಡೆ ಹಾಗೂ ಆನಂದ ಸಿಂಗ್ ಅವರನ್ನು ಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಬಿಜೆಪಿ ಮತದಾರಿಗೆ ಭರವಸೆ ನೀಡುತ್ತಿದೆ. ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಒಂದು ವೇಳೆ ಚುನಾವಣಾ ಆಯೋಗ ನಿರ್ಲಕ್ಷ್ಯವಹಿಸಿದರೆ ಅದರ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.