ಮದುವೆಯಾಗುವುದಾಗಿ 28 ಲಕ್ಷ ವಂಚಿಸಿದ್ದವ ಅಂದರ್
Team Udayavani, Nov 30, 2019, 12:55 PM IST
ಹುಬ್ಬಳ್ಳಿ: ನಗರದ ಮಹಿಳೆಯೊಬ್ಬರಿಗೆ ಮದುವೆ ಯಾಗುವುದಾಗಿ ನಂಬಿಸಿ, ಅವರ ತಾಯಿಯಿಂದ ಅಂದಾಜು 28 ಲಕ್ಷ ರೂ. ಪಡೆದು ವಂಚಿಸಿದ್ದ ಮೈಸೂರಿನ ವ್ಯಕ್ತಿಯನ್ನು ಹಳೇಹುಬ್ಬಳ್ಳಿ ಪೊಲೀಸರು ಶುಕ್ರವಾರ ಬಂಧಿಸಿ 19 ಲಕ್ಷ ರೂ.ವಶಪಡಿಸಿಕೊಂಡಿದ್ದಾರೆ. ಮೈಸೂರಿನ ಪುಟ್ಟಯ್ಯ ಊರ್ಫ್ ರಮೇಶ ಸಿದ್ದಮಾಧು ಎಂಬಾತನೆ ಬಂಧಿತನಾಗಿದ್ದಾನೆ.
ಪ್ರಕರಣದ ಹಿನ್ನೆಲೆ: ಹಳೇಹುಬ್ಬಳ್ಳಿ ಮಗಜಿಕೊಂಡಿ ಪ್ಲಾಟ್ನ ಜಾನಕಿಬಾಯಿ ಕುಂದಗೋಳ ಎಂಬುವರು ತಮ್ಮ ಮಗಳ ಮದುವೆಗಾಗಿ ವರನ ಹುಡುಕಾಟಕ್ಕಾಗಿ 2016ರಲ್ಲಿ ಮಾಸ ಪತ್ರಿಕೆಯೊಂದರ ವೈವಾಹಿಕ ಅಂಕಣದಲ್ಲಿ ಮಾಹಿತಿ ಕೊಟ್ಟಿದ್ದರು. ಅದನ್ನು ಪಡೆದ ಪುಟ್ಟಯ್ಯನು ತಾನು ಕೆಪಿಟಿಸಿಎಲ್ನ ಗುಂಡ್ಲುಪೇಟೆಯಲ್ಲಿ ಎಇಇ ಇದ್ದೇನೆ. ಅವಿವಾಹಿತನಾಗಿದ್ದು, ನಿಮ್ಮ ಮಗಳನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಪರಿಚಯ ಮಾಡಿಕೊಂಡಿದ್ದಾನೆ. ನಂತರ ತನಗೆ ಪ್ರಮೋಶನ್ ಆಗುವುದಿದೆ ಹಾಗೂ ಗುಂಡ್ಲುಪೇಟೆಯಿಂದ ಹುಣಸೂರಗೆ ವರ್ಗಾವಣೆ ಮಾಡಿಸಿಕೊಳ್ಳಲು ಮೇಲಧಿಕಾರಿಗಳಿಗೆ ಹಣ ಕೊಡಬೇಕೆಂದು ನಂಬಿಸಿದ್ದಾನೆ.
2016ರಿಂದ 2018ರ ವರೆಗೆ ಬ್ಯಾಂಕ್ ಖಾತೆಯ ಮೂಲಕ ತನ್ನ ಪರಿಚಯಸ್ಥರ ವಿವಿಧ ಬ್ಯಾಂಕ್ ಖಾತೆಗಳಿಗೆ 28,34,900 ರೂ. ಪಡೆದು, ಮದುವೆ ಮಾಡಿಕೊಳ್ಳದೆ, ಹಣ ವಾಪಸು ಕೊಡದೆ ವಂಚಿಸಿದ್ದ. ಈ ಕುರಿತು ಜಾನಕಿಬಾಯಿ ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಹಳೇಹುಬ್ಬಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಪುಟ್ಟಯ್ಯನನ್ನು ಬಂಧಿಸಿ 19 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.