ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ ರೂ. ಮಂಜೂರು

Team Udayavani, Nov 30, 2019, 3:43 PM IST

30-November-18

ಸಂಡೂರು: ಜಿಂದಾಲ್‌ನವರ ಸಹಕಾರದಿಂದ ಕ್ರೀಡಾಂಗಣ ನಿರ್ಮಾಣಕ್ಕಾಗಿ 15 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ. ನಾನು ನನ್ನ ತಾಲೂಕಿನ ಮಕ್ಕಳಿಗಾಗಿ ಗುಣಮಟ್ಟದ ಶಿಕ್ಷಣಕ್ಕಾಗಿ ಶ್ರಮಿಸುತ್ತೇನೆಂದು ಶಾಸಕ, ಮಾಜಿ ಸಚಿವ ಈ. ತುಕರಾಂ ತಿಳಿಸಿದರು.

ಅವರು ಶುಕ್ರವಾರ ರೋಟರಿ ಚಿತ್ರಿಕಿಮರಿಬಸಮ್ಮ, ವಿಠ್ಠಲರಾವ್‌ಲಾಡ್‌ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜೀವನದ ಮೌಲ್ಯಗಳನ್ನ ನಾವು ಪರಿಗಣಿಸಬೇಕಾಗಿದೆ. ಶಿಕ್ಷಕರಾದವರು ಮಕ್ಕಳಲ್ಲಿ ಮಕ್ಕಳಾಗಿ ಬೆರೆತು ದೇಶದ ಆಸ್ತಿಯಾಗುವ ಶಿಕ್ಷಣವನ್ನು ಶಿಕ್ಷಕ ಕೊಡಬೇಕಾಗಿದೆ. ಬಳ್ಳಾರಿಯ ಅಂಧೆ ಅಶ್ವಿ‌ನಿ ಇಡೀ ದೇಶವನ್ನೇ ಪುಸ್ತಕ ಮತ್ತು ಪೆನ್ನಿನಿಂದ ಬದಲಾವಣೆ ಮಾಡಿದರು. ಶಾಲೆಗಳು ದೇವಾಲಯವಾಗಬೇಕಾಗಿದ್ದು ನಮ್ಮ ಶಿಕ್ಷಣ ದೇವರ ಗಂಟೆ ಬಾರಿಸಿದ ಹಾಗೆ ಆಗಬೇಕಾಗಿದೆ ಎಂದು ತಿಳಿಸಿದರು.

ಸಂಡೂರಿನ ವಿರಕ್ತಮಠದ ಪ್ರಭುಸ್ವಾಮೀಜಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಕರ್ತವ್ಯ ಅವಶ್ಯ. ಮಕ್ಕಳಿಗೆ ಸ್ಫೂರ್ತಿ ತುಂಬುವ ಕೆಲಸ ಆಗಬೇಕಾಗಿದೆ. ಇಂದಿನ ದಿನಮಾನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಡಬೇಕಾಗಿದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿ ಕಾರಿ ಡಾ| ಐ.ಆರ್‌. ಅಕ್ಕಿ ಮಾತನಾಡಿ, ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಹಿಂದಿನ ಶಿಕ್ಷಣ ಸಚಿವ ದಿ.ಗೋವಿಂದರಾಯರ ಮಾರ್ಗದರ್ಶನದಂತೆ ಕಾರ್ಯಕ್ರಮ ನಡೆಸುತ್ತಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ 9 ವಿಭಾಗಗಳಿಂದ 1764 ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದು 264 ಶಿಕ್ಷಕರು ತೀರ್ಪುಗಾರರಾಗಿದ್ದಾರೆ ಎಂದು ತಿಳಿಸಿದರು. ರೋಟರಿ ಶಾಲಾ ಮಕ್ಕಳಿಂದ ಪ್ರಾರ್ಥನೆ, ಸಂಗೀತ ಶಿಕ್ಷಕಿ ಗೀತಾ ತಂಡದವರು ನಾಡಗೀತೆ ಹಾಡಿದರು.

ಸಭೆಯಲ್ಲಿ ಪತ್ರಕರ್ತ ಅರಳಿ ಕುಮಾರಸ್ವಾಮಿ ಮಾತನಾಡಿ, ಬಂಡ್ರಿ ಗ್ರಾಮದಲ್ಲಿ ಬಾಲಕರ ವಸತಿ ನಿಲಯವಿದ್ದು ಬಾಲಕಿಯರಿಗಾಗಿ ಪ್ರತ್ಯೇಕ ವಸತಿ ಸೌಲಭ್ಯ ಕಲ್ಪಿಸಿಕೊಡಲು ಮನವಿ ಮಾಡಿದರು. ಶಾಸಕರು ಭರವಸೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಬಿ. ಉಮಾಪತಿ ನಿರೂಪಿಸಿದರು. ದೈಶಿಪವೀ ಶಿಕ್ಷಕ ಎಸ್‌.ಡಿ. ಸಂತಿ ಸ್ವಾಗತಿಸಿದರು. ಅಕ್ಷರ ದಾಸೋಹಿ ತೇನಸಿಂಗ ನಾಯಕ ವಂದಿಸಿದರು. ಚಿತ್ರಿಕಿ ಸತೀಶ, ಸಿ.ಕೆ. ವಿಶ್ವನಾಥ, ಚೌಕಳಿ ಪರುಶುರಾಮಪ್ಪ, ಶಿಕ್ಷಣ ಸಂಘದ ಅಧ್ಯಕ್ಷ ಎಂ.ಆರ್‌. ಸುಮನ್‌, ಎಂ.ತಿಪ್ಪೇಸ್ವಾಮಿ, ಎಂ.ಟಿ. ರಾಥೋಡ್‌, ಇಸ್ಮಾಯಿಲ್‌ ಅಲ್ಲದೇ ಹಲವಾರು ಮಹನೀಯರು ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದರು.

ಟಾಪ್ ನ್ಯೂಸ್

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.