ರಸ್ತೆ ನಿರ್ಮಿಸಲು ಗ್ರಾಮಸ್ಥರ ಆಗ್ರಹ
Team Udayavani, Nov 30, 2019, 4:08 PM IST
ಹಳಿಯಾಳ: ರೈತರ ಜೀವನಾಡಿ ತಾಲೂಕಿನ ಕೇರವಾಡ ಗ್ರಾಮದ ಕೇರವಾಡ- ಮಾಗವಾಡ ರಸ್ತೆ ಬಗ್ಗೆ ರೈತನೊಬ್ಬ ಸಲ್ಲಿಸಿರುವ ದೂರನ್ನು ಇತ್ಯರ್ಥಪಡಿಸಿ, ಜಿಪಂದಿಂದ ಮಂಜೂರಿ ಆಗಿರುವ ಈ ರಸ್ತೆಯನ್ನು ಶೀಘ್ರವೇನಿರ್ಮಿಸಿಕೊಡುವಂತೆ ಕೇರವಾಡ ಗ್ರಾಮಸ್ಥರು ಶುಕ್ರವಾರ ತಹಶೀಲ್ದಾರ್ ಗೆ ಲಿಖೀತ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ.
ಮನವಿಯಲ್ಲಿ ಕೇರವಾಡ- ಮಾಗವಾಡ ರಸ್ತೆ ಜಿಪಂದಿಂದ ಮಂಜೂರಾಗಿ ಕಾಮಗಾರಿ ನಡೆದಿತ್ತು. ಆದರೆ ಈ ಮುಖ್ಯ ರಸ್ತೆ ನಿರ್ಮಾಣಕ್ಕೆ ರೈತ ವಿಠಲ ಈರಪ್ಪಾ ಗೌಡಾ ಎನ್ನುವವರು ತಕರಾರು ಸಲ್ಲಿಸಿ ತಮ್ಮ ಜಾಗೆ ಎಂದು ಹೇಳಿ ಕಾಮಗಾರಿಗೆ ಅಡ್ಡಿಪಡಿಸುತ್ತಿರುವುದು ಖಂಡನೀಯ. ಈ ರಸ್ತೆ ಅನೇಕ ದಶಕಗಳಿಂದ ಇದ್ದು ಇದರಿಂದ ಈ ಭಾಗದ ಭತ್ತ, ಕಬ್ಬು ಇತರ ಬೆಳೆಗಳನ್ನು ಸಾಗಿಸಲು ಅನುಕೂಲವಾಗುತ್ತದೆ ಎಂದಿದ್ದಾರೆ.
ಈ ವರ್ಷ ಭಾರಿ ಮಳೆಯಿಂದರಸ್ತೆ ಸಂಪೂರ್ಣ ಹಾಳಾಗಿದ್ದು ಸದ್ಯ ಮಂಜೂರಾದ ಈ ರಸ್ತೆಯನ್ನು ಶೀಘ್ರದಲ್ಲಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ಮಾಡಬೇಕುಹಾಗೂ ಸಮಸ್ಯೆ ಬಗೆಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜಿಪಂ ಮಾಜಿ ಸದಸ್ಯ ಕೈತಾನ ಬಾರಬೋಜಾ, ಪ್ರಮುಖ ರೈತರಾದಶಾಂತಾರಾಮ, ವಿಠಲ ಟೋಸುರ, ಹೊನ್ನಪ್ಪಾ ಗೌಡಾ, ಪರಶುರಾಮ ಮೇತ್ರಿ, ಶಂಬಾಜಿ ಗೌಡಾ, ನಾಗು ನಿಂಗನಗೌಡ, ಪಾಂಡು ಚಲವಾದಿ,ಮಾರುತಿ ಕಿತ್ತೂರಕರ, ಲಕ್ಷ್ಮಣ ವಡ್ಡರ, ಸುಭಾಷ ಗೌಡಾ, ನಾಗೇಂದ್ರ ಮಡಿವಾಳ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.