ಬಂಜಾರ ಸಮುದಾಯದ ಆಕ್ರೋಶ
ಕಲಬುರ್ಗಿಯಲ್ಲಿ ವಿಮಾನ ನಿಲ್ದಾಣಕ್ಕಾಗಿ ಸೇವಾಲಾಲ್ ದೇಗುಲ ಧ್ವಂಸ ಪ್ರತಿಧ್ವನಿ
Team Udayavani, Nov 30, 2019, 6:43 PM IST
ಕಡೂರು: ಕಲಬುರಗಿ ಜಿಲ್ಲೆಯ ಮಾದಿಹಾಳ್ ತಾಂಡಾದ ಸಂತ ಸೇವಾಲಾಲ್ ದೇವಾಲಯವನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಧ್ವಂಸಗೊಳಿಸಿದೆ ಎಂದು ಆರೋಪಿಸಿ ಕಡೂರು ಬಂಜಾರ ಸಂಘ ಮತ್ತು ಜಿಲ್ಲಾ ಘಟಕದ ಸದಸ್ಯರು ಶುಕ್ರವಾರ ಪಟ್ಟಣದಲ್ಲಿ ಭಾರೀ ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ್ ನಾಯ್ಕ ಮತ್ತು ತಾಲೂಕು ಅಧ್ಯಕ್ಷ ದೇವರಾಜ ನಾಯ್ಕ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಬಂಜಾರ ಸಮಾಜದ ನೂರಾರು ಜನರು, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಾಲೂಕು ಕಚೇರಿಗೆ ತಲುಪಿದರು. ಮೆರವಣಿಗೆಯಲ್ಲಿ ವಿಮಾನ ನಿಲ್ದಾಣ ಪ್ರಾ ಧಿಕಾರದ ವಿರುದ್ಧ ಘೋಷಣೆ ಕೂಗಿದರು.
ನಂತರ ತಾಲೂಕು ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಂಜಾರ ಸಮಾಜದ ಜಿಲ್ಲಾಧ್ಯಕ್ಷ ಲಕ್ಷ್ಮಣ್ ನಾಯ್ಕ, ಸಂತ ಸೇವಾಲಾಲ್ ಬಂಜಾರ ಸಮುದಾಯದ ಆರಾಧ್ಯ ದೈವ. ಜಾಗೃತಿ ಮೂಡಿಸಿದ ಹರಿಕಾರ. ಬ್ರಿಟಿಷರ ವಿರುದ್ಧ ಹೋರಾಡಿ ಬಂಜಾರ ಸಮುದಾಯವನ್ನು ಸಂಘಟಿಸಿದ ಚತುರ. ಇಂತಹ ಮಹಾನ್ ಜ್ಞಾನಿಯ ದೇವಾಲಯವನ್ನು ವಿಮಾನ ನಿಲ್ದಾಣ ಪ್ರಾಧಿ ಕಾರ ವಿಮಾನ ನಿಲ್ದಾಣ ನಿರ್ಮಿಸುವಾಗ ಧ್ವಂಸ ಮಾಡಿರುವುದು ಅಕ್ಷಮ್ಯ ಎಂದು ದೂರಿದರು.
ಸಂಘದ ತಾಲೂಕು ಅಧ್ಯಕ್ಷ ದೇವರಾಜ ನಾಯ್ಕ ಮಾತನಾಡಿ, ಘಟನೆ ಕುರಿತಂತೆ ಈಗಾಗಲೇ ರಾಜ್ಯಾದ್ಯಂತ ಬಂಜಾರ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿದೆ. ರಾಜ್ಯ ಸರಕಾರ ಈ ಕೂಡಲೇ ದೇವಾಲಯದ ಮರುನಿರ್ಮಾಣ ಮಾಡಬೇಕು ಮತ್ತು ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್ ಹೆಸರನ್ನು ಇಡಬೇಕೆಂದು ಒತ್ತಾಯಿಸಿದರು.
ಸರ್ಕಾರಿ ಉದ್ಯೋಗ ನೀಡಿ: ಸಮಾಜದ ಹಿರಿಯ ಮುಖಂಡ ಬಿ.ಟಿ.ಗಂಗಾಧರ ನಾಯ್ಕ ಮಾತನಾಡಿ, ಕಲಬುರ್ಗಿ ವಿಮಾನ ನಿಲ್ದಾಣ ನಿರ್ಮಿಸಲು ಬಂಜಾರರ ಜೀವನೋಪಾಯದ 756 ಎಕರೆ ಭೂಮಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಇದರಿಂದ ಭೂಮಿ ಕಳೆದುಕೊಂಡ ಲಂಬಾಣಿಗರಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.
ತಾಪಂ ಸದಸ್ಯ ಆನಂದ ನಾಯ್ಕ ಮಾತನಾಡಿ, ಸೇವಾಲಾಲ್ ದೇವಾಲಯದ ಧ್ವಂಸಕ್ಕೆ ಪ್ರೇರಣೆ ನೀಡಿದವರು ಮತ್ತು ಭಾಗಿಯಾದವರನ್ನು ವಿರುದ್ಧ ಪೊಲೀಸರು ತಕ್ಷಣ ಬಂಧಿ ಸಬೇಕೆಂದರು. ಸಂಘದ ತಾಲೂಕು ಕಾರ್ಯದರ್ಶಿ ಚಿಕ್ಕಂಗಳ ಎಂ. ಪ್ರಕಾಶ್ ನಾಯ್ಕ ಮಾತನಾಡಿ, ರಾಜ್ಯ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನದಲ್ಲಿ ಪ್ರತಿಭಟನೆ ಉಗ್ರರೂಪ ತಾಳಲಿದೆ. ಬಂದ್ ಕರೆ ಕೊಡುವುದಕ್ಕೂ ಸಮಾಜ ಹಿಂದೆ ಬೀಳುವುದಿಲ್ಲ, ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಲಿದೆ ಎಂದರು. ಜಿಪಂ ಸದಸ್ಯೆ ಲೋಲಾಕ್ಷಿಬಾಯಿ, ತಾಪಂ ಸದಸ್ಯೆ ಪ್ರೇಮ ಕೃಷ್ಣ ಮೂರ್ತಿ, ತಂಗಲಿ ಶ್ರೀನಿವಾಸ ನಾಯ್ಕ, ಸೋಮನ ಹಳ್ಳಿ ಕುಮಾರನಾಯ್ಕ, ವಕೀಲ ರಾಮಚಂದ್ರ ನಾಯ್ಕ, ಫ್ಲೆಕ್ಸ್ ಕುಮಾರ ನಾಯ್ಕ, ಕೋಡಿಹಳ್ಳಿ ಶ್ರೀನಿವಾಸ ನಾಯ್ಕ, ಎಮ್ಮೆದೊಡ್ಡಿ ರಮೇಶ್, ಕೃಷ್ಣನಾಯ್ಕ, ಮಂಜುನಾಥ್ ನಾಯ್ಕ, ಮಿಥುನ್ ನಾಯ್ಕ ಮುಂತಾದವರು ಹಾಜರಿದ್ದರು. ತಹಶೀಲ್ದಾರ್ ಉಮೇಶ್ ಅವರು ಮನವಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Bantwal: ಕೆಎಸ್ಆರ್ಟಿಸಿ ಬಸ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.