ಕಾಂಗ್ರೆಸ್, ಜೆಡಿಎಸ್ ಸರ್ಕಾರ ರಚನೆ ಇಲ್ಲ: ಎಚ್‌ಡಿಕೆ
Team Udayavani, Nov 30, 2019, 10:17 PM IST
ಬೆಳಗಾವಿ: ಮತ್ತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯಾಗುವ ಬಗ್ಗೆ ಇದುವರೆಗೆ ನಮ್ಮ ಜತೆ ಯಾವ ನಾಯಕರೂ ಚರ್ಚೆ ನಡೆಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಅಥಣಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶದ ಅನಂತರ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯಲಿವೆ. ಸರಕಾರ ರಚನೆ ವಿಷಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗಳನ್ನು ಗಮನಿಸಿದ್ದೇನೆ. ಈಗ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಯಾವುದೇ ಪಕ್ಷ ಮತ್ತು ನಾಯಕರಿಗೆ ಸಿದ್ಧಾಂತ ಹಾಗೂ ಬದ್ಧತೆ ಮೇಲೆ ನಂಬಿಕೆ ಉಳಿದಿಲ್ಲ. ಪಕ್ಷ ನಿಷ್ಠೆ ಮಾಯವಾಗಿದೆ. ಸಮಯಕ್ಕೆ ತಕ್ಕಂತೆ ನಾಯಕರು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.
ನಾನು ಮೊದಲಿಂದಲೂ ಮಧ್ಯಾಂತರ ಚುನಾವಣೆ ನಡೆಯವುದು ಬೇಡ. ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳುತ್ತಲೇ ಬಂದಿದ್ದೇನೆ. ನಮಗೆ ಜನರ ಸಂಕಷ್ಟ, ಅವರ ನೋವಿಗೆ ಸ್ಪಂದಿಸಬೇಕಿದೆ. ಈಗಲೂ ಮಧ್ಯಾಂತರ ಚುನಾವಣೆಗೆ ಅವಕಾಶ ಮಾಡಿಕೊಡದಂತೆ ಎಲ್ಲ ನಾಯಕರಿಗೆ ಹೇಳುತ್ತಿದ್ದೇನೆ ಎಂದರು.
ತಾರತಮ್ಯ ಮಾಡಿಲ್ಲ
ನಮ್ಮ ಸರಕಾರದ ಅವಧಿಯಲ್ಲಿ ಯಾವ ಕ್ಷೇತ್ರಕ್ಕೂ ತಾರತಮ್ಯ ಮಾಡಿಲ್ಲ. ಅವರ ಬೇಡಿಕೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ ಅಥಣಿ ಕ್ಷೇತ್ರಕ್ಕೂ ಅನುದಾನ ಕೊಟ್ಟಿದ್ದೆ. ಆದರೆ ಮಹೇಶ ಕುಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಪಕ್ಷ ಬಿಟ್ಟು ಹೋದರು ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.