ಶೀತ ಪೀಡಿತ ಗ್ರಾಮಕ್ಕೆ ಅಧಿಕಾರಿಗಳ ಭೇಟಿ
Team Udayavani, Dec 1, 2019, 11:28 AM IST
ಹೊಳೆನರಸೀಪುರ: ರಾಜ್ಯ ಹೈಕೋರ್ಟ್ ಸೂಚನೆ ಮೇರೆಗೆ ವಿಭಾಗೀಯ ಆಯುಕ್ತರಾದ ಯಶವಂತ್, ಜಿಲ್ಲಾಧಿಕಾರಿ ಗಿರೀಶ್, ಉಪವಿಭಾಗಾಧಿಕಾರಿ ನವೀನ್ ಭಟ್ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ತಾಲೂಕಿನ ಶೀತ ಪೀಡಿತ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ತೆವಡಳ್ಳಿ, ಬಿಲ್ಲೇನಹಳ್ಳಿ,ಚನ್ನರಾಯಪಟ್ಟಣದ ತಾಲೂಕಿನಸಿಂಗೇಮಹಳ್ಳಿ ಗ್ರಾಮಸ್ಥರು ರಾಜ್ಯ ಹೋಕೋರ್ಟ್‌ಗೆ ಮನವಿ ಸಲ್ಲಿಸಿ ಹೇಮಾವತಿ ಅಣೆಕಟ್ಟೆ ಮತ್ತು ಅದರನಾಲೆಗಳು ನಮ್ಮ ಗ್ರಾಮದ ಸುತ್ತ ಹೋಗಿರುವುದರಿಂದ ನಮ್ಮ ಗ್ರಾಮಗಳು ಶೀತಪೀಡಿತವಾಗಿ ಮನೆಗಳು ಕುಸಿಯುತ್ತಿವೆ. ಆದ್ದರಿಂದ ನಮ್ಮ ಗ್ರಾಮಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಬೇಕು ಹಾಗೂಸರ್ಕಾರದಿಂದ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು.
ಗ್ರಾಮಸ್ಥರು ಸಲ್ಲಿಸಿದ್ದ ಅರ್ಜಿಯನ್ನುಪುರಸ್ಕರಿಸಿದ ನ್ಯಾಯಾಲಯ ಶೀತ ಪೀಡಿತ ಗ್ರಾಮಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು. ನ್ಯಾಯಾಯಲದ ಆದೇಶದ ಮೇರೆಗೆ ಶನಿವಾರ ತಾಲೂಕಿನ ತೆವಡಳ್ಳಿ, ಬಿಲ್ಲೇನಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಪುನರ್ವಸತಿ ಕಲ್ಪಿಸಲು ಒತ್ತಾಯಿಸಿದರು. ತಹಶೀಲ್ದಾರ್ ಕೆ.ಆರ್. ಶ್ರೀನಿವಾಸ್, ಕಾವೇರಿ ನೀರಾವರಿ ನಿಗಮದ ಇಇ ಪುಟ್ಟರಾಜು, ತಾ ಪಂ ಇಒ ಕೆ.ಯೋಗೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.