ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Dec 1, 2019, 2:42 PM IST
ಚಿಕ್ಕಮಗಳೂರು: ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗೆ ಸಕಾಲಕ್ಕೆ ಸಂಬಳ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅವರನ್ನು ಭೇಟಿ ಮಾಡಿದ ಸಂಘದಪದಾಧಿಕಾರಿಗಳು, ಪಿಯು ಕಾಲೇಜುಗಳಪ್ರಾಚಾರ್ಯರು ಮತ್ತು ಉಪನ್ಯಾಸಕರು ಈ ಸಂಬಂಧ ಮನವಿ ಸಲ್ಲಿಸಿದರು.
ಕಳೆದ 2 ತಿಂಗಳಿನಿಂದ ವೇತನ ನೀಡದಹಿನ್ನೆಲೆಯಲ್ಲಿ ಅದನ್ನೇ ನಂಬಿರುವ ಪ್ರಾಚಾರ್ಯರು ಮತ್ತು ಉಪನ್ಯಾಸಕರುಜೀವನ ನಿರ್ವಹಣೆ ಮಾಡಲಾಗದೆ ಪರದಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗರಾಜ್ಯ ಸರ್ಕಾರ ಮತ್ತು ಪಿಯು ಇಲಾಖೆತುರ್ತು ಕ್ರಮ ಕೈಗೊಳ್ಳದೆ ವಿಳಂಬ ನೀತಿಅನುಸರಿಸುತ್ತಿದೆ ಎಂದು ದೂರಿದರು. ಈ ಸಂಬಂಧ ಪ್ರತಿಭಟನೆಗೆನಿರ್ಧರಿಸಿದ ಉಪನ್ಯಾಸಕರ ವಿರುದ್ಧ ಶಿಕ್ಷಣಇಲಾಖೆ ಕಾನೂನು ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿರುವುದು ಖಂಡನೀಯ. ತಕ್ಷಣ ವೇತನ ಪಾವತಿಸಬೇಕು ಹಾಗೂತಮ್ಮೆಲ್ಲ ಬೇಡಿಕೆ ಈಡೇರಿಸಬೇಕೆಂದು ಅಗ್ರಹಿಸಿದರು.
ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ| ಎಂ.ಡಿ.ಸುದರ್ಶನ್, ಕಾರ್ಯಾಧ್ಯಕ್ಷ ಜಿ. ರೇವಣ್ಣ, ಪ್ರದಾನ ಕಾರ್ಯದರ್ಶಿ ಎಲ್.ಜಿ. ಉದಯಶಂಕರ್, ಖಜಾಂಚಿ ಎಂ.ಡಿ. ಉಮೇಶ್, ಮೂಡಿಗೆರೆ ತಾಲೂಕು ಅಧ್ಯಕ್ಷ ಧರ್ಮ ಶೆಟ್ಟಿ, ಎನ್.ಅರ್. ಪುರ ತಾಲೂಕು ಅಧ್ಯಕ್ಷಎ.ಜೆ.ಡೇವಿನ್, ಕೊಪ್ಪ ತಾಲೂಕು ಅಧ್ಯಕ್ಷ ಎಚ್.ಕೆ. ಚಕ್ರಪಾಣಿ, ತರೀಕೆರೆ ಅಧ್ಯಕ್ಷಎಚ್. ನರಸಿಂಹ ಮೂರ್ತಿ, ಅಜ್ಜಂಪುರಅಧ್ಯಕ್ಷ ಬಸವರಾಜಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.