ಕೆರೆ ಅತಿಕ್ರಮಣ ತೆರವಿಗೆ ಕ್ರಮ: ಜಿಲ್ಲಾಧಿಕಾರಿ

Team Udayavani, Dec 1, 2019, 2:52 PM IST

cd-tdy-1

ಚಿತ್ರದುರ್ಗ: ಜಿಲ್ಲೆಯಲ್ಲಿನ ಎಲ್ಲ ಕೆರೆಗಳ ವಿಸ್ತೀರ್ಣ ಅಳತೆ ಮಾಡಿ ಒತ್ತುವರಿ ತೆರವು ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜನಸ್ಪಂದನ ಸಭೆಯಲ್ಲಿ ರೈತ ಮುಖಂಡ ಭೂತಯ್ಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಅವರು, ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಹಾಗೂವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಎಲ್ಲ ಕೆರೆಗಳ ವ್ಯಾಪ್ತಿ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಅಳತೆಮಾಡಿಸಲಾಗುವುದು. ಒಂದು ವೇಳೆ ಒತ್ತುವರಿಕಂಡುಬಂದಲ್ಲಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರೈತ ಮುಖಂಡ ಭೂತಯ್ಯ ಮಾತನಾಡಿ, ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾದ ಕಾರಣ ರೈತರುಸಂತಸಗೊಂಡಿದ್ದಾರೆ. ಶೇಂಗಾ ಬೆಳೆಉತ್ತಮವಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ಲಾಭಸಿಗುವಂತಾಗಲಿ. ಸರ್ಕಾರ ಈಗಾಗಲೆ ಶೇಂಗಾಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಇದರನ್ವಯ ಜಿಲ್ಲೆಯಲ್ಲಿ ಕೂಡಲೆ ಶೇಂಗಾ ಖರೀದಿ ಕೇಂದ್ರ ಪ್ರಾರಂಭಿಸಬೇಕು.

ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗ ಪ್ರಾರಂಭವಾಗಿ ಎರಡು ವರ್ಷಗಳಾಗಿದ್ದರೂ ಒಂದೂ ಹೊಸ ಬಸ್‌ ಬಿಟ್ಟಿಲ್ಲ. ಇರುವ ಹಳೆಯ ಬಸ್‌ಗಳು ಪದೇ ಪದೇಅಪಘಾತಕ್ಕೆ ತುತ್ತಾಗುತ್ತಿವೆ. ಇನ್ನಾದರೂ, ಜಿಲ್ಲೆಗೆ ಹೊಸ ಬಸ್‌ಗಳನ್ನು ಪಡೆಯಲು ಕ್ರಮ ಕೈಗೊಳ್ಳಬೇಕು.2018ನೇ ಸಾಲಿನ ಬೆಳೆ ವಿಮೆ ಇದುವರೆಗೂ ರೈತರ ಕೈಸೇರಿಲ್ಲ. ಬೆಳೆ ನಷ್ಟ ಪರಿಹಾರದ ಇನ್‌ಫುಟ್‌ ಸಬ್ಸಿಡಿ ಮೊತ್ತ ಜಿಲ್ಲೆಯಲ್ಲಿ ಸುಮಾರು ಶೇ. 30 ರಷ್ಟು ರೈತರಿಗೆ ಪಾವತಿಯಾಗಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಸಂಬಂಧಪಟ್ಟರೈತರಿಗೆ ಇನ್‌ಫುಟ್‌ ಸಬ್ಸಿಡಿ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಸೋಮವಾರ ಜಿಲ್ಲಾ ಕಾರ್ಯಪಡೆ ಸಮಿತಿಸಭೆ ನಡೆಯಲಿದೆ. ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿಶೇಂಗಾ ಖರೀದಿ ಕೇಂದ್ರ ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಉಳಿದಂತೆ ಬೆಳೆ ವಿಮೆ ಹಾಗೂಇನ್‌ಫುಟ್‌ ಸಬ್ಸಿಡಿ ಪಾವತಿ ಕುರಿತಂತೆ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಜನಸ್ಪಂದನ ಸಭೆಗೆ ಆಗಮಿಸಿದ್ದ ಬಿ.ಎಸ್‌. ವೀರೇಶ್‌ ಎನ್ನುವವರು ತಾವು ಉಜ್ವಲಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್‌ಪಡೆದುಕೊಂಡಿದ್ದೇವೆ. ತಮ್ಮ ಕುಟುಂಬ ಇದೀಗ ಚಿತ್ರದುರ್ಗದಿಂದ ಚಳ್ಳಕೆರೆಗೆ ಸ್ಥಳಾಂತರಗೊಂಡಿದೆ. ಗ್ಯಾಸ್‌ ಏಜೆನ್ಸಿಯವರು ಸಿಲಿಂಡರ್‌ ಅನ್ನು ಚಳ್ಳಕೆರೆಗೆ ವರ್ಗಾವಣೆ ಮಾಡಿಕೊಡುತ್ತಿಲ್ಲ ಎಂದು ದೂರುನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು,ಸಮಸ್ಯೆಯನ್ನು ಕೂಡಲೆ ಪರಿಹರಿಸಿ. ಸಿಲಿಂಡರ್‌ ಅನ್ನುಚಳ್ಳಕೆರೆಗೆ ವರ್ಗಾಯಿಸಿಕೊಂಡುವಂತೆ ನಗರಸಭೆಪೌರಾಯುಕ್ತರಿಗೆ ಸೂಚನೆ ನೀಡಿದರು.

ಚಿತ್ರದುರ್ಗದ ತಿಪ್ಪಮ್ಮ ಎಂಬುವವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಗರಸಭೆಯಲ್ಲಿ ಅಕ್ರಮವಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವವರದಾಖಲೆ ಪರಿಶೀಲಿಸಿ ಸೇವೆಯಿಂದ ಅಮಾನತು? ಮಾಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಅಕ್ರಮವಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವವರ ವಿರುದ್ಧ ತನಿಖೆ ಕೈಗೊಂಡು ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದರು.

ಚಿತ್ರದುರ್ಗ ಆರ್‌. ವೆಂಕಟೇಶ್‌ ಅವರು ತೋಟಗಾರಿಕೆ ಇಲಾಖೆಯಲ್ಲಿ ಕಾಳು ಮೆಣಸಿನ ಬೆಳೆಗೆ ಸಹಾಯಧನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು. ವೆಂಕಟೇಶ್ವರಸ್ವಾಮಿ ದೇವಾಲಯದ ಸಮಿತಿ ಸದಸ್ಯರು ಹಿರೇಹಳ್ಳಿ ಗೊಲ್ಲರ ಕಪಿಲೆಯ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಸ್ಥಳಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದರು.

ಟಾಪ್ ನ್ಯೂಸ್

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.