ರಾಮಸಾಗರಹಟ್ಟಿಯಲ್ಲಿ 100ಕ್ಕೂ ಹೆಚ್ಚು ಜನರಿಗೆ ವಾಂತಿಭೇದಿ
ಕುಡಿಯುವ ನೀರಿನಿಂದ ರೋಗ ಉಲ್ಬಣದ ಶಂಕೆ
Team Udayavani, Dec 2, 2019, 12:54 PM IST
ಕೂಡ್ಲಿಗಿ: ತಾಲೂಕಿನ ಗುಡೇಕೋಟೆ ಸಮೀಪದ ರಾಮಸಾಗರಹಟ್ಟಿ ಗ್ರಾಮದಲ್ಲಿ ಕಳೆದ 3 ದಿನಗಳಿಂದ ಈವರೆಗೆ ಸುಮಾರು 100ಕ್ಕೂ ಹೆಚ್ಚು ಜನರಿಗೆ ವಾಂತಿಭೇದಿ ಕಾಣಿಸಿಕೊಂಡಿದೆ. ಗುಡೇಕೋಟೆ ಆಸ್ಪತ್ರೆ ವೈದ್ಯರ ನೇತೃತ್ವದ ತಂಡ ಗ್ರಾಮದಲ್ಲಿ ಈವರೆಗೆ 97 ಜನರಿಗೆ ಚಿಕಿತ್ಸೆ ನೀಡಿದ್ದು ಉಳಿದವರು ಗುಡೇಕೋಟೆ ಹಾಗೂ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲೂಕಿನ ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯ್ತಿ ಕಚೇರಿ ವ್ಯಾಪಿಯಲ್ಲಿರುವ ರಾಮಸಾಗರಹಟ್ಟಿ ಗ್ರಾಮದಲ್ಲಿ ಕಳೆದ 3 ದಿನಗಳಿಂದ ವಾಂತಿಭೇದಿ ಪ್ರಕರಣ ಬೆಳಕಿಗೆ ಬಂದಿದ್ದೂ ಭಾನುವಾರವೂ ನಿಯಂತ್ರಣಕ್ಕೆ ಬಂದಿಲ್ಲ. ಶುಕ್ರವಾರ 20 ಜನರಲ್ಲಿ ಕಾಣಿಸಿಕೊಂಡಿದ್ದು, ಶನಿವಾರ 50ಕ್ಕೂ ಹೆಚ್ಚು ಜನರಲ್ಲಿ ಕಂಡು ಬಂದಿದೆ. ಭಾನುವಾರ 100ಕ್ಕೂ ಹೆಚ್ಚು ಜನರಲ್ಲಿ ವಾಂತಿಭೇದಿ ಕಂಡುಬಂದಿದೆ. ಚಿಕಿತ್ಸೆ ಪಡೆದುಕೊಂಡಿದ್ದ ರೋಗಿಗಳ ಪೈಕಿ ಮತ್ತೆ 22 ಜನರಿಗೆ ಕಾಣಿಸಿಕೊಂಡುವುದು ವೈದ್ಯರಿಗೆ ಸವಾಲಾಗಿ ಪರಿಣಮಿಸಿದೆ.
ಆಸ್ಪತ್ರೆಯಾದ ಗ್ರಾಮದ ಶಾಲೆ: ರಾಮಸಾಗರಹಟ್ಟಿಯಿಂದ ಗುಡೇಕೋಟೆಗೆ ಯಾವುದೇ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲದ ಕಾರಣ ತಾಲೂಕು ವೈದ್ಯಾಧಿಕಾರಿ ಡಾ| ಷಣ್ಮುಖನಾಯ್ಕ ಅವರ ಮಾರ್ಗದರ್ಶನದಂತೆ ಗ್ರಾಮದ ಶಾಲೆಯೊಂದರ ಕೊಠಡಿಗಳು ಈಗ ಆಸ್ಪತ್ರೆಯ ವಾರ್ಡ್‌ಗಳಾಗಿ ಬದಲಾಗಿವೆ. ಶನಿವಾರದಿಂದ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲಾಗಿದೆ. ಗುಡೇಕೋಟೆ ಆಸ್ಪತ್ರೆ ವೈದ್ಯ ಡಾ| ಶ್ರೀಧರ ಅವರನ್ನು ಇಲ್ಲಿ ನಿಯೋಜಿಸಿದ್ದು 24 ಗಂಟೆಗಳ ಕಾಲ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನೀರಿನಿಂದಾಗಿರುವ ಶಂಕೆ: ಗ್ರಾಮದಲ್ಲಿ ಕುಡಿವ ನೀರುವ ಪೂರೈಸಲು 6 ಕೊಳವೆಬಾವಿಗಳಿದ್ದು ಇವುಗಳಿಂದ ಪೂರೈಸುವ ನೀರಿನಲ್ಲಿ ಕಲುಷಿತ ನೀರು ಸೇರಿರಬಹದು. ಅಲ್ಲದೆ ಆ ನೀರನ್ನು ಜನರು ಕುಡಿದಿರುವುದರಿಂದ ವಾಂತಿಭೇದಿ ಪ್ರಕರಣಗಳು ಕಾಣಿಸಿಕೊಂಡಿರಬಹುದೆಂದು ವೈದ್ಯರು ತಿಳಿಸಿದ್ದಾರೆ. ಸದ್ಯ 3 ಕೊಳವೆ ಬಾವಿಯಿಂದ ವೈದ್ಯರ ಸಲಹೆಯಂತೆ ನೀರು ಪೂರೈಕೆ ಸ್ಥಗಿತವಾಗಿದ್ದು
ಇನ್ನೂ 3 ಕೊಳವೆಬಾವಿ ನೀರು ಪೂರೈಸಲಾಗುತ್ತಿದೆ.
ಶುದ್ಧ ಕುಡಿವ ನೀರಿನ ಘಟಕವಿದ್ದು ಈ ನೀರನ್ನೇ ಬಳಸಬೇಕೆಂದು ಅಥವಾ ಕಾಯಿಸಿದ ಬಿಸಿ ನೀರು ಕುಡಿಯುವಂತೆ ಗ್ರಾಮದ ಜನರಿಗೆ ತಾಲೂಕು ವೈದ್ಯಾಧಿಕಾರಿಗಳು ಗ್ರಾಮ ಪಂಚಾಯ್ತಿ ಮೂಲಕ ಡಂಗುರ ಸಾರಿಸಿದ್ದಾರೆ.
ಸ್ವಚ್ಛತೆಗೆ ಮುಂದಾದ ಗ್ರಾಮ ಪಂಚಾಯ್ತಿ: ಗ್ರಾಮದಲ್ಲಿ ಈ ಪ್ರಕರಣದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಎಚ್ಚೆತ್ತುಕೊಂಡಿದ್ದು ಕುಡಿಯುವ ನೀರಿನ ಪೈಪ್ ಸೋರಿಕೆಯನ್ನು ಪತ್ತೆಮಾಡಲು ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಸಮಸ್ಯೆ ಹೆಚ್ಚಾದ ನಂತರ ಸಿಬ್ಬಂದಿ ಕಾರ್ಯಕ್ಕೆ ಮುಂದಾಗಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀರಿನಿಂದ ವಾಂತಿಭೇದಿ ಕಾಣಿಸಿಕೊಂಡಿರುವ ಶಂಕೆ ಇದೆ. ಹಾಗಾಗಿ ನೀರನ್ನು ಬಳ್ಳಾರಿಗೆ ಪರೀಕ್ಷೆ ಕಳುಹಿಸಿಕೊಡಲಾಗಿದೆ. ಗುಡೇಕೋಟೆಯ ವೈದ್ಯ ಡಾ| ಶ್ರೀಧರ್ ಸೇರಿದಂತೆ 10 ಸಿಬ್ಬಂದಿಯನ್ನು ತಾತ್ಕಾಲಿಕ ಆಸ್ಪತ್ರೆಗೆ ನಿಯೋಜಿಸಲಾಗಿದೆ. ಸದ್ಯ ಇಲ್ಲಿಯವರೆಗೂ ತಾತ್ಕಾಲಿಕ ಆಸ್ಪತ್ರೆಯಲ್ಲಿ 97 ರೋಗಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬೇರೆ ಕಡೆಗಳಲ್ಲೂ ಚಿಕಿತ್ಸೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ಪಡೆಯಲಾಗುವುದು.
ಡಾ.ಷಣ್ಮುಖನಾಯ್ಕ,
ಕೂಡ್ಲಿಗಿ ತಾಲೂಕು ಆರೋಗ್ಯಾಧಿಕಾರಿ
ಗ್ರಾಮ ಪಂಚಾಯ್ತಿಯವರ ನಿರ್ಲಕ್ಷ್ಯದಿಂದ ಕುಡಿಯುವ ನೀರಿನ ಪೈಪ್‌ಲೈನ್ ಸೋರಿಕೆಯಾಗಿದ್ದು ಈ ಮೂಲಕ ವಾಂತಿಭೇದಿಯಾಗಿದ್ದು ಸ್ಥಳೀಯ ಆಡಳಿತ ಉತ್ತಮ ಕುಡಿಯುವ ನೀರನ್ನು ಪೂರೈಸಬೇಕು.
.ತಿಪ್ಪೇಸ್ವಾಮಿ,
ರಾಮಸಾಗರಹಟ್ಟಿ ಗ್ರಾಮದ ಯುವಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.