ದೇಶೀಯ ಕಲೆ ಉಳಿವಿಗೆ ಸಾಂಘಿಕ ಪ್ರಯತ್ನಅಗತ್ಯ

Team Udayavani, Dec 2, 2019, 3:31 PM IST

2-December-20

ಸಾಗರ: ದೇಶೀಯ ಕಲೆಯ ಉಳಿವಿಗೆ ಸಾಂಘಿಕ ಪ್ರಯತ್ನದ ಅಗತ್ಯತೆ ಇದೆ. ಯುವ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯುವ ಸೌರಭಗಳ ಮೂಲಕ ವೇದಿಕೆ ನಿರ್ಮಿಸಿಕೊಡುತ್ತಿದೆ. ಕಲೆಗಳು ಮತ್ತು ಕಲಾವಿದರ ಮುಖಾಮುಖೀಯಾದರೆ ಹೊಸ ಪ್ರಯತ್ನಗಳಿಗೆ ಪೂರಕವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಎನ್‌. ಚೆಲುವಾದಿ ಹೇಳಿದರು.

ನಗರದಲ್ಲಿ ಶನಿವಾರ ಪರಿಣಿತಿ ಕಲಾಕೇಂದ್ರ ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಹಕಾರದೊಂದಿಗೆ ಏರ್ಪಡಿಸಿರುವ 5ನೇ ರಾಷ್ಟ್ರೀಯ ಸಂಗೀತ ನೃತ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶದ ಕಲೆಗೆ ಬಹು ಬೇಡಿಕೆ ಇದೆ. ಅದರಲ್ಲಿಯೂ ನೃತ್ಯ ಮತ್ತು ಸಂಗೀತ ಪ್ರಾಚೀನ ಕಲೆಗಳು. ಇವುಗಳ ಅಭ್ಯಾಸಕ್ಕೆ ನಮ್ಮಲ್ಲಿ ಗುರುಕುಲ ಮಾದರಿಯ ಶಿಕ್ಷಣ ಇಂದಿಗೂ ಜಾರಿಯಲ್ಲಿದೆ. ಕಲಾವಿದ ನಿರಂತರ ಕಲಿಕೆಯ ಮೂಲಕ ಬೆಳೆಯಬೇಕು. ಆಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ರಾಷ್ಟ್ರೀಯ ಉತ್ಸವಗಳ ಮೂಲಕ ಬೇರೆ ಬೇರೆ ರಾಜ್ಯದ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ತಂದು ಪರಿಚಯಿಸುವ ಪ್ರಯೋಗಾತ್ಮಕ ಪ್ರಯತ್ನ ಒಳ್ಳೆಯ ಬೆಳವಣಿಗೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಯುವ ಕಲಾವಿದರಿಗೆ ಮತ್ತು ಸಂಘಟನೆಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ ಎಂದರು. ಪರಿಣಿತಿ ಕೇಂದ್ರದ ಕಾರ್ಯದರ್ಶಿ ವಿದ್ವಾನ್‌ ಎಂ. ಗೋಪಾಲ್‌ ಮಾತನಾಡಿ, ಕಲಿಕೆಗೆ ಕೊನೆ ಇಲ್ಲ. ಅದರಲ್ಲಿಯೂ ನೃತ್ಯದಂತಹ ಕಲೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ಪ್ರಕಾರಗಳನ್ನು ಹೊಂದಿದೆ. ಪುರಾಣದ ಕಥಾನಕಗಳನ್ನು ಜೀವಂತವಾಗಿಡುವಲ್ಲಿ ನಾಟ್ಯಶಾಸ್ತ್ರದ ಕೊಡುಗೆ ಬಹು ದೊಡ್ಡದು. ಒಂದು ಕಾಲದಲ್ಲಿ ರಾಜಾಶ್ರಯದಲ್ಲಿದ್ದ ಕಲೆ ಈಗ ಉತ್ಸವಗಳ ಮೂಲಕ ಅವುಗಳನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆದಿದೆ. ಸರ್ಕಾರ ಈ ಕಲೆಗಳನ್ನು ಉಳಿಸುವಲ್ಲಿ ಹೆಚ್ಚಿನ ಸಹಕಾರ ನೀಡಬೇಕು ಎಂದರು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಅರುಣ್‌ ಘಾಟೆ, ಶ್ರುತಿ ಶ್ರೀನಾಥ್‌, ಸೃಷ್ಟಿ ಅವರಿಗೆ ಪರಿಣಿತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಷ್ಟ್ರೀಯ ನೃತ್ಯೋತ್ಸವದ ಅಧ್ಯಕ್ಷ ಎಸ್‌.ಎಸ್‌. ರಮೇಶ್‌, ಸುಗಮ ಸಂಗೀತ ಕಲಾವಿದ ಆನಂದ ಮಾದಲಗೆರೆ, ನಗರಸಭಾ ಸದಸ್ಯರಾದ ಅರವಿಂದ ರಾಯ್ಕರ್‌, ಎನ್‌. ಶ್ರೀನಿವಾಸ್‌, ಕೃಷ್ಣಮೂರ್ತಿ ಭಂಡಾರಿ, ಸಾಯಿ ಆರ್ಟ್ಸ್ಇಂ ಟರ್‌ನ್ಯಾಶನಲ್‌ನ ಸಾಯಿ ವೆಂಕಟೇಶ್‌, ಪಿ.ಆರ್‌. ವಿಕ್ರಮ್‌ ಕುಮಾರ್‌, ಉದ್ಯಮಿ ಸುರೇಶ ಎನ್‌. ಸಾಗರ್‌ ಇತರರು ಇದ್ದರು.

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.