ರೈಲ್ವೇ ಕಾರ್ಯಾಚರಣೆ ಅನುಪಾತ ಶೇ. 98.44; 10 ವರ್ಷಗಳಲ್ಲೇ ಕಳಪೆ ಸಾಧನೆ
Team Udayavani, Dec 2, 2019, 10:15 PM IST
ಹೊಸದಿಲ್ಲಿ: ರೈಲುಗಳ ಕಾರ್ಯಾಚರಣೆ ಅನುಪಾತ 2017-18ರಲ್ಲಿ ಶೇಕಡಾ 98.44 ರಷ್ಟನ್ನು ದಾಖಲಾಗಿದೆ. ಇದು 10 ವರ್ಷಗಳಲ್ಲಿ ಅತ್ಯಂತ ಕಳಪೆ ಸಾಧನೆಯಾಗಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಸೋಮವಾರ ಸಂಸತ್ತಿನಲ್ಲಿ ಮಂಡಿಸಿದ ವರದಿಯಲ್ಲಿ ತಿಳಿಸಿದೆ.
ಇದು ಪರೋಕ್ಷವಾಗಿ ಭಾರತೀಯ ರೈಲ್ವೇ ನಷ್ಟದಲ್ಲಿದೆ ಎಂದು ಹೇಳಿದೆ. ಆದಾಯ ಮತ್ತು ಖರ್ಚಿನ ನಡುವಿನ ತುಂಬಾ ಅಂತರವಿಲ್ಲದೇ ಇರುವುದನ್ನು ಈ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖೀಸಲಾಗಿದೆ. ಇದು ದೇಶದಲ್ಲಿ ರೈಲ್ವೇ ಎಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತೋರಿಸುತ್ತದೆ. ಈ ವರದಿಯಲ್ಲಿ ಉಲ್ಲೇಖವಾದಂತೆ 98.44 ಎಂದರೆ 100 ರೂ.ಗಳ ಆದಾಯವನ್ನು ಗಳಿಸಬೇಕಾದರೆ ರೈಲ್ವೇಯು 98.44 ರೂ.ಗಳನ್ನು ಖರ್ಚುಮಾಡಬೇಕಾಗಿದೆ.
ಪ್ರಯಾಣಿಕರ ಸೇವೆಗಳು ಮತ್ತು ಇತರ ಕೋಚಿಂಗ್ ಸೇವೆಗಳ ನಿರ್ವಹಣಾ ವೆಚ್ಚವನ್ನು ಪೂರೈಸಲು ರೈಲ್ವೇಗೆ ಸಾಧ್ಯವಾಗುತ್ತಿಲ್ಲ. ಪ್ರಯಾಣಿಕರ ಮತ್ತು ಇತರ ಕೋಚಿಂಗ್ ಸೇವೆಗಳ ಕಾರ್ಯಾಚರಣೆಯಲ್ಲಿನ ನಷ್ಟವನ್ನು ಸರಿದೂಗಿಸಲು ಸರಕು ಸಾಗಣೆಯಿಂದ ಬರುವ ಲಾಭದ ಸುಮಾರು 95 ಪ್ರತಿಶತವನ್ನು ಇದಕ್ಕೆ ಬಳಸಿಕೊಳ್ಳಲಾಗುತ್ತದೆ. ರೈಲ್ವೇಗಳು ತಮ್ಮ ಆಂತರಿಕ ಆದಾಯವನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಸಿಎಜಿ ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.