ಕರ್ತವ್ಯ ಲೋಪ: ತಾ| ಆಸ್ಪತ್ರೆ ವೈದ್ಯಾಧಿಕಾರಿ ಅಮಾನತು

Team Udayavani, Dec 3, 2019, 12:12 AM IST

kundapura

ಕುಂದಾಪುರ: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ರಾಬರ್ಟ್‌ ರೆಬೆಲ್ಲೋ ಅವರನ್ನು ಆರೋಗ್ಯ ಸಚಿವ ಶ್ರೀರಾಮುಲು ಅವರ ಸೂಚನೆಯಂತೆ ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್‌ ಪಾಂಡೆ ಆದೇಶ ಹೊರಡಿಸಿದ್ದಾರೆ.

ಡಾ| ರಾಬರ್ಟ್‌ ರೆಬೆಲ್ಲೋ ಅವರ ವಿರುದ್ಧ ಜನಪ್ರತಿನಿಧಿಗಳು, ಸಾರ್ವಜನಿಕ ರಿಂದ ಹಲವಾರು ದೂರುಗಳು ಬಂದಿವೆ. ಅವರು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದ್ದು, ತತ್‌ಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದು, ಮುಂದಿನ ದಿನಗಳಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ತಿಳಿಸಿದೆ. ಡಾ| ರೆಬೆಲ್ಲೊ ಅವರು 10ಕ್ಕೂ ಅಧಿಕ ವರ್ಷಗಳಿಂದ ಇದೇ ಆಸ್ಪತ್ರೆಯಲ್ಲಿದ್ದರು.

ಅರ್ಧ ವೇತನ
ಡಾ| ರಾಬರ್ಟ್‌ ರೆಬೆಲ್ಲೋ ಅವರನ್ನು ಅಮಾನುತುಗೊಳಿಸಿ, ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ವೇತನ ಲೀನ್‌(ಹುದ್ದೆಯ ಹಕ್ಕು) ಪಡೆಯುವಂತೆ ಬದಲಾವಣೆ ಮಾಡಲಾಗಿದೆ. ಈ ಅವಧಿಯಲ್ಲಿ ಜೀವನಾಂಶ ಭತ್ತೆ ಪಡೆಯಬಹುದು. ತನಿಖೆ ನಡೆದು, ಮುಂದಿನ ಆದೇಶ ಬರುವವರೆಗೆ ಈಗ ಪಡೆಯುತ್ತಿದ್ದ ವೇತನದ ಅರ್ಧ ಭಾಗ ಸಿಗಲಿದೆ. ಆದರೆ ಮೇಲಧಿಕಾರಿಗಳ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎನ್ನುವುದಾಗಿ ಆರೋಗ್ಯ ಇಲಾಖೆಯು ಆದೇಶ ದಲ್ಲಿ ತಿಳಿಸಿದೆ.

ಅಮಾನತಿಗೆ ಕಾರಣವೇನು?
ಆಸ್ಪತ್ರೆಯ ಆವರಣದಲ್ಲಿರುವ ದೇವಸ್ಥಾನದ ಲೆಕ್ಕಪತ್ರಗಳಲ್ಲಿನ ಲೋಪದೋಷ ಕುರಿತಂತೆ ತಾ.ಪಂ. ಸದಸ್ಯರು ಆ. 28ರಂದು ನಡೆದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಿಸಿದ್ದು, ಲೆಕ್ಕಪತ್ರದ ದಾಖಲೆ ನೀಡುವಂತೆ ವೈದ್ಯಾಧಿಕಾರಿಗೆ ಸೂಚಿಸಿದರೂ ನೀಡಿರಲಿಲ್ಲ. ಆ ಬಳಿಕ ದೇಗುಲದ ಹಳೆ ಸಮಿತಿಯನ್ನು ಆಗಿನ ಎಸಿ ಡಾ| ಮಧುಕೇಶ್ವರ್‌ ರದ್ದುಗೊಳಿಸಿ, ವೈದ್ಯ ಡಾ| ವಿಜಯಶಂಕರ್‌ ಅವರನ್ನು ಅಧ್ಯಕ್ಷರನ್ನಾಗಿ ಸೆ. 6ರಂದು ನೇಮಿಸಿದ್ದರು. ಇದಲ್ಲದೆ ಸರಕಾರಿ ಆಸ್ಪತ್ರೆಗೆ ಡಾ| ಜಿ. ಶಂಕರ್‌ ಅವರು 6 ಕೋ.ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಿಕೊಟ್ಟಿದ್ದು, ಅವರು ಕೂಡ ವೈದ್ಯಾಧಿಕಾರಿ ವಿರುದ್ಧ ಮೌಖೀಕ ದೂರು ನೀಡಿದ್ದಾರೆ. ತಾ.ಪಂ. ಸಭೆ, ಜಿ.ಪಂ. ಸಭೆಗಳಲ್ಲಿಯೂ ಹಲವು ಬಾರಿ ವೈದ್ಯಾಧಿಕಾರಿ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.