ದಲಿತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
Team Udayavani, Dec 3, 2019, 4:29 PM IST
ರಾಯಚೂರು: ಜಿಲ್ಲೆಯಲ್ಲಿ ದಲಿತರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ದಲಿತರ ಮೇಲೆ ಒಂದಲ್ಲ ಒಂದು ಹಲ್ಲೆ, ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಚಂದ್ರಬಂಡಾ ರಸ್ತೆಯಲ್ಲಿನ ಆಶ್ರಯ ಕಾಲೋನಿ ನಿವಾಸಿ ಮಲ್ಲಿಕಾರ್ಜುನ ಮೇಲೆಹಲ್ಲೆ ನಡೆದಿದೆ. ಪಂಚಾಯತ್ ರಾಜ್ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಜಮೀರ ಅಹ್ಮದ್ ವಿರುದ್ಧ ದೂರು ನೀಡಿದ್ದೇ ಘಟನೆಗೆ ಕಾರಣವಾಗಿದೆ. ಜಮೀರ ಅಹಮ್ಮದ್ ಅವರ ಕುಟುಂಬದವರು ಹಾಗೂ ಇತರರು ಸೇರಿ ಹಲ್ಲೆ ಮಾಡಿದ್ದಾರೆ. ದಲಿತರ ಮೇಲೆ ಮಾಡಿದವರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಮುಖಂಡರಾದ ಎಂ.ಮಾರೆಪ್ಪ, ನರಸಿಂಹ, ಹುಸೇನಪ್ಪ ನಾಯಕ, ಎ.ರಾಮು, ಚಂದ್ರು, ವೀರಭದ್ರಯ್ಯ ಸ್ವಾಮಿ, ಆರ್. ಆಂಜನೇಯ, ಮಹೇಶ, ಹುಸೇನ್, ಶಂಶಾವಲಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.