5-6 ರಂದು ಮಾರಮ್ಮ ದೇವಿ ದೇಗುಲ ಲೋಕಾರ್ಪಣೆ
Team Udayavani, Dec 3, 2019, 4:53 PM IST
ಭರಮಸಾಗರ: ಚಿತ್ರದುರ್ಗ ತಾಲೂಕಿನ ಐನಹಳ್ಳಿ ಕುರುಬರಹಟ್ಟಿ ಗ್ರಾಮದಲ್ಲಿ ಡಿ. 5 ಮತ್ತು 6 ರಂದು ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಾರಮ್ಮ ದೇವಿಯ ದೇಗುಲ ಲೋಕಾರ್ಪಣೆ ಮತ್ತು ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ.
ಡಿ. 5 ರಂದು ಬೆಳಿಗ್ಗೆ 5 ರಿಂದ 10:30 ರವರೆಗೆ ಗಂಗಾಪೂಜೆ, ಪುಣ್ಯಾಹ, ರಕ್ಷಾಬಂಧನ, ಸರ್ವದೇವತೆಗಳ ಅವಾಹನೆ, ಕಳಸಾರೋಹಣ, ಹೋಮಾದಿಗಳು,ಮಹಾಮಂಗಳಾರತಿ ನಡೆಯಲಿದೆ. ಸಂಜೆ 6:30ಕ್ಕೆ ಹೋಮಗಳು, ವಾಸಾದಿಗಳು, ಮಹಾ ಮಂಗಳಾರತಿ ಮತ್ತು ರಾತ್ರಿ 10:30ಕ್ಕೆ ಪ್ರತಿಷ್ಠಾಪನಾ ಪೂರ್ವ ಸಿದ್ಧತೆ ಕಾರ್ಯಗಳಿವೆ.
ಡಿ. 6 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಹೊಸದುರ್ಗ ಕನಕ ಗುರುಪೀಠದ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕಜಿ.ಎಚ್. ತಿಪ್ಪಾರೆಡ್ಡಿ, ಸಂಸದ ಎ. ನಾರಾಯಣಸ್ವಾಮಿ, ಜಿಪಂ ಸದಸ್ಯ ಕೃಷ್ಣಮೂರ್ತಿ, ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ತಾಪಂ ಸದಸ್ಯ ಪರಮೇಶ್,ಗ್ರಾಪಂ ಅಧ್ಯಕ್ಷ ಚಂದ್ರಶೇಖರಪ್ಪ, ಸದಸ್ಯರಾದ ಉಮೇಶ್, ವೆಂಕಟೇಶ್, ಶಿವಮ್ಮ ಪಾಲ್ಗೊಳ್ಳುವರು. ಇದಕ್ಕೂ ಮುನ್ನ ರತ್ನ ನಿಕ್ಷೇಪಾ ಪೀಠಬಂಧ, ಪ್ರಾಣ ಪ್ರತಿಷ್ಠಾಪನೆ, ನೇತ್ರೋನಿಲನ, ಬಿಂಬ ದರ್ಶನ, ಕದಳಿ ಛೇದನ, ಪ್ರತಿಷ್ಠಾ ಹೋಮಾದಿಗಳು, ಪೂರ್ಣಾಹುತಿ, ಬಲಿಹರಣ, ಅಷ್ಟದಿಗಧನ, ಚಿತ್ರಾರತಿ,ಕುಂಭಾಭಿಷೇಕ, ಪಂಚಾಮೃತಾಭಿಷೇಕ, ಮಹಾಪೂಜೆ,ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.