ಕೆರೆ ತೂಬು ಸರಿಪಡಿಸದಿದ್ದರೆ ಆತ್ಮಹತ್ಯೆ
Team Udayavani, Dec 3, 2019, 4:57 PM IST
ಸಾಗರ: ತಾಲೂಕಿನ ತಾಳಗುಪ್ಪ ಸಮೀಪದ ತಲವಾಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕೆರೆಗೋಳಿ ಕೆರೆಯನ್ನು ದುರಸ್ತಿಗೊಳಿಸಲಾಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಇಲ್ಲಿನ ಕೆರೇಕೈ ಗ್ರಾಮಸ್ಥರು ಸೋಮವಾರ ತಲವಾಟ ಗ್ರಾಪಂಗೆ ಮನವಿ ಸಲ್ಲಿಸಿದ್ದಾರೆ.
ಕೆರೆಯ ತೂಬು ಎತ್ತರವಿರುವ ಕಾರಣ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತೋಟಗಳನ್ನು ರಕ್ಷಿಸಿಕೊಳ್ಳುವುದುಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ದೂರಿದ್ದಾರೆ.
ಸುಮಾರು 15 ಎಕರೆ ತೋಟ ಹಾಗೂ 15 ಎಕರೆ ಗದ್ದೆ ಪ್ರತಿ ವರ್ಷ ಜಲಾವೃತವಾಗುತ್ತಿದ್ದು,ಇದಕ್ಕೆ ಕಾರಣ ಸರ್ವೇ ನಂ. 82ರಲ್ಲಿರುವ ಕೆರೆಯಿಂದ ನೀರು ಹೊರ ಹೋಗುವ ತೂಬು ಎತ್ತರವಿರುವುದೇ ಆಗಿದೆ. ಆದ್ದರಿಂದ ಕೆರೆ ತೂಬು ತಗ್ಗಿಸಿ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದು ಜನರಿಗೆ ಅನಿವಾರ್ಯವಾಗಲಿದೆ ಎಂದು ಪ್ರತಿಪಾದಿಸಿದ್ದಾರೆ.
ಗ್ರಾಪಂ ಮಾಜಿ ಅಧ್ಯಕ್ಷ ಪ್ರಸನ್ನ, ಗ್ರಾಮಸ್ಥರಾದ ಶ್ರೀಧರಭಟ್, ಪ್ರಕಾಶ್, ಶ್ರೀಪಾದ ಎಂ., ಜಯಲಕ್ಷ್ಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.