ಸಮುದಾಯದಲ್ಲಿ ಏಡ್ಸ್ ತಡೆಗೆ ತಿಳಿವಳಿಕೆ ಅಗತ್ಯ
Team Udayavani, Dec 3, 2019, 5:30 PM IST
ಹಿರೇಕೆರೂರ: ಎಚ್‌ಐವಿ ವೈರಸ್ ನಿಂದ ನಮ್ಮನ್ನ ನಾವು ಸುರಕ್ಷತೆ ಮಾಡಿಕೊಳ್ಳೊಬೇಕು. ಇದು ಒಂದು ಭಯಾನಕ ಮಹಾಮಾರಿ ಆಗಿದ್ದು, ಈ ರೋಗ ಹರಡದಂತೆ ನಾವು ಸುರಕ್ಷಿತ ಲೈಂಗಿಕ ಮಾರ್ಗಗಳನ್ನು ಅನುಸರಿಸಬೇಕು ಎಂದು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆಡಳಿತಾ ಧಿಕಾರಿ ಡಾ| ಹೊನ್ನಪ್ಪ ಜೆ.ಎಂ. ಹೇಳಿದರು.
ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆ,ಜಿಲ್ಲಾ ಪ್ರತಿಂಬಂಧಕ ಘಟಕ ಹಾವೇರಿ, ತಾಲೂಕು ಆಸ್ಪತ್ರೆ ಮತ್ತು ಮದಕರಿ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನ ವತಿಯಿಂದ ಪಟ್ಟಣದಲ್ಲಿ ಏರ್ಪಡಿಸಿದ್ದ ಏಡ್ಸ್ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಚ್‌ಐವಿ ಸೋಂಕು ಹರಡುವಿಕೆಯನ್ನು ಸಂಪೂರ್ಣ ತಡೆಗಟ್ಟುವುದು ಮತ್ತು ಏಡ್ಸ್ ಬಗ್ಗೆ ಜಾಗೃತಿ ಮೂಡಿಸುವುದು ಜಾಥಾದ ಉದ್ದೇಶವಾಗಿದೆ. ಪ್ರತಿಯೊಬ್ಬರು ಏಡ್ಸ್ ಬಗ್ಗೆ ತಿಳಿವಳಿಕೆ ಹೊಂದಿರಬೇಕು. ಏಡ್ಸ್ ಸೋಂಕಿತರನ್ನು
ಸಮಾಜದ ಮುಖ್ಯವಾಹಿನಿಗೆ ತರಲು ಸೂಕ್ತ ಮಾರ್ಗದರ್ಶನ ಹಾಗೂ ಮಾಹಿತಿ ನೀಡಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ನೇಹ ಕ್ಲಿನಿಕ್ ಆರಂಭಿಸಿದೆ. ಸಮುದಾಯದಲ್ಲಿ ಈ ಕುರಿತು ಆರೋಗ್ಯ ಶಿಕ್ಷಣ ನೀಡಿ ಎಚ್‌ಐವಿ ಸೋಂಕು ಹರಡುವಿಕೆಯನ್ನು ಸಂಪೂರ್ಣ ತಡೆಗಟ್ಟುವುದು ಜಾಗೃತಿ ಉದ್ದೇಶ ಎಂದು ಹೇಳಿದರು.
ಮದಕರಿ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನ ಪ್ರಾಚಾರ್ಯೆ ಅಂಜುಮ್ ಬ್ಯಾಡಗಿ, ಆಪ್ತ ಸಮಾಲೋಚಕ ಜಯಪ್ಪ ಬಿದರಿ ಸೇರಿದಂತೆ ಆಶಾ ಕಾರ್ಯಕರ್ತೆಯರು, ಕಾಲೇಜು ಮತ್ತು ಆಸ್ಪತ್ರೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.