ಬಾಲಕಿ ಅತ್ಯಾಚಾರಕ್ಕೆ ಸಿಡಿದೆದ್ಧ ಜನತೆ
ಅತ್ಯಾಚಾರಿಗಳನ್ನು ನೇಣಿಗೆ ಹಾಕಲು ಆಗ್ರಹವಿಕೃತ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಲಿ
Team Udayavani, Dec 4, 2019, 10:44 AM IST
ಕಲಬುರಗಿ: ಚಿಂಚೋಳಿ ತಾಲೂಕಿನ ಯಾಕಾಪುರ ಗ್ರಾಮದಲ್ಲಿ ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ದಾರುಣ ಘಟನೆಯನ್ನು ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.
ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ, ಪ್ರಜ್ಞಾ ಕಾನೂನು ಸಲಹಾ ಸಮಿತಿ, ಮಾನವ ಹಕ್ಕುಗಳ ಹೋರಾಟಗಾರರು ಬಾಲಕಿ ಮೇಲೆ ನಡೆಸಿದ ಕೃತ್ಯ ಆಘಾತಕಾರಿಯಾಗಿದ್ದು, ಮಾನವ ಜನಾಂಗ ತಲೆ ತಗ್ಗಿಸುವಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ದೇಶದಲ್ಲಿ ಮಹಿಳೆಯರು, ಮಕ್ಕಳು ಮೇಲೆ ಅತ್ಯಾಚಾರ, ಕೊಲೆಗಳಂತ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ. ಆದರೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಾಗೂ ಮಹಿಳೆಯರ ಮೇಲಿನ ಬಲಾತ್ಕಾರ ತಡೆಯಲು ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ಖಂಡನೀಯವಾಗಿದೆ.
ಮೇಲಾಗಿ ಆಡಳಿತ ವರ್ಗ, ರಾಜಕಾರಣಿಗಳ ಮೇಲೂ ಮಹಿಳಾ ದೌರ್ಜನ್ಯ ಪ್ರಕರಣಗಳು ಅಧಿಕವಾಗುತ್ತಿದ್ದು ನಾಚಿಕೆಗೇಡಿನ ವಿಷಯವೇ ಸರಿ ಎಂದು ಹೋರಾಟಗಾರ್ತಿಯರಾದ ಕೆ. ನೀಲಾ, ನಂದಾದೇವಿ ಮಂಗೊಂಡಿ, ಅಶ್ವಿನಿ ಮದನಕರ್, ಅಮೀನಾ ಬೇಗಂ, ಚಿಂತಕ ಡಾ| ಪ್ರಭು ಖಾನಾಪುರೆ ಮತ್ತಿತರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಧಿಕಾರದಲ್ಲಿರುವ ಅನೇಕ ನಾಯಕರೇ ಅತ್ಯಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿಯೇ ಮಹಿಳಾ ವಿರೋಧಿ ಧೋರಣೆ ಹಾಸು ಹೊಕ್ಕಾಗಿದೆ. ಕೆಲವು ಪ್ರಕರಣಗಳಲ್ಲಿ ತ್ವರಿತ ಶಿಕ್ಷೆ ವಿಧಿಸುವಲ್ಲಿ ವಿಳಂಬವಾಗುತ್ತಿರುವುದರಿಂದಲೇ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಕೃತ್ಯಗಳನ್ನು ತಡೆಗಟ್ಟುವಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆ ಕಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಗಲ್ಲಿಗೆ ಹಾಕಿ: ಜಿಲ್ಲೆಯ ಯಾಕಾಪುರದ ಬಾಲಕಿ ಪ್ರಕರಣ, ಹೈದ್ರಾಬಾದ್‌ನ ಪಶುವೈದ್ಯೆ ಪ್ರಕರಣ ಹಾಗೂ ತಮಿಳುನಾಡಿನ ಯುವತಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ದೇಶದ ನಾಗರಿಕರನ್ನು ಬೆಚ್ಚಿ ಬೀಳಿಸುವಂತೆ ಮಾಡಿವೆ. ಅದರಲ್ಲೂ ಪುಟ್ಟ ಕಂದಮ್ಮಳ ಮೇಲೆ ನಡೆದಿದ್ದು, ಪೈಶಾಚಿಕ ಕೃತ್ಯವಾಗಿದೆ. ಇಂತಹ ಆರೋಪಿಗಳನ್ನು ಗಲ್ಲಿಗೆ ಹಾಕಬೇಕೆಂದು ಮಾನವ ಹಕ್ಕುಗಳ ಹೋರಾಟಗಾರರಾದ ರಿಯಾಜುದ್ದೀನ್ ಹಾಗೂ ಇತರರು ಆಗ್ರಹಿಸಿದ್ದಾರೆ.
ಕಾಮುಕರ ಕುಕೃತ್ಯಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಇವರ ಸಾವಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳ ವಿಚಾರಣೆಯನ್ನು ನ್ಯಾಯಾಲಯಗಳು ಪ್ರಥಮಾದ್ಯತೆ ಮೇರೆಗೆ ನಡೆಸಬೇಕು. ಯಾವುದೇ ಜಾತಿ, ಜನಾಂಗ ನೋಡದೆ, ರಾಜಕೀಯಗೊಳಿಸದೆ ಅತ್ಯಾಚಾರಿಗಳನ್ನು ನೇಣಿಗೇರಿಸಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಗಳಿಗೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.