ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ : ಇಬ್ಬರ ಬಂಧನ
Team Udayavani, Dec 4, 2019, 3:13 PM IST
ಸಾಗರ: ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ನಕಲಿ ನಾಣ್ಯಗಳನ್ನು ನೀಡಿದ ಆರೋಪದ ಮೇಲೆ ಇಬ್ಬರನ್ನು ಪೋಲೀಸರು ಬಂಧಿಸಿದ ಘಟನೆ ಸಾಗರದಲ್ಲಿ ನಡೆದಿದೆ.
ಹೊಸದುರ್ಗದ ಸತೀಶ್ (28),ಕಡೂರಿನ ಮಂಜು (25) ಬಂಧಿತ ಆರೋಪಿಗಳು. ನಿತ್ಯಾನಂದ ಎಂಬುವವರಿಗೆ ಬಂಗಾರದ ನಾಣ್ಯ ನೀಡುವುದಾಗಿ 1.30.000 ರೂ.ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಇಂದು ಬೆಳಗ್ಗೆ ತ್ಯಾಗರ್ತಿ ಕ್ರಾಸ್ ಬಳಿ ಇಬ್ಬರನ್ನು ವಶಕ್ಕೆ ಪಡೆದಿದ್ದು ,ಬಂಧಿತರಿಂದ 1ಲಕ್ಷ ನಗದು ಹಣ,3 ಲಕ್ಷ ಬೆಲೆಯ ಟಾಟಾ ಏಸ್ ವಾಹನ ಹಾಗೂ ನಕಲಿ ಬಂಗಾರವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಚ್.ಟಿ ಶೇಖರ್ ಇವರ ಮಾರ್ಗದರ್ಶನದಲ್ಲಿ,ಸಾಗರ ಸಹಾಯಕ ಪೊಲೀಸ್ ಅಧೀಕ್ಷಕ ಯತೀಶ್ ಸೂಚನೆಯಂತೆ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.
ಕಾರ್ಯಾಚರಣೆಯಲ್ಲಿ ಸಾಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಸುನೀಲ್ ಕುಮಾರ್,ಪಿಎಸ್ಐ ಭರತ್ ಕುಮಾರ್, ಸುಜಾತ, ಪ್ರೋಬೇಷನರಿ ಪಿಎಸ್ಐ ಸಂತೋಷ್ ಸಿಬ್ಬಂದಿಗಳಾದ ಫೈರೋಜ್ ಅಹಮದ್,ಪರಶುರಾಮ್,ಗಿರೀಶ್,ಶಿವನಗೌಡ,ಸನಾವುಲ್ಲಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.