ಏಡ್ಸ್ ದೂರವಿಡಿ-ರೋಗಿಯನ್ನಲ್ಲ
ಏಡ್ಸ್‌ನಿಂದ ರಕ್ಷಣೆಗೆ ಮುಂಜಾಗ್ರತೆಯೇ ಔಷಧ ರೋಗ ಪೀಡಿತರನ್ನು ಕನಿಷ್ಠವಾಗಿ ನೋಡದಿರಿ
Team Udayavani, Dec 4, 2019, 3:25 PM IST
ಬೀದರ: ಸಮಾಜದಲ್ಲಿ ಏಡ್ಸ್ ರೋಗ ಪೀಡಿತರನ್ನು ಕನಿಷ್ಠವಾಗಿ ನೋಡುವ ವಾತಾವರಣ ನಿರ್ಮಾಣವಾಗಿದೆ. ನಮ್ಮ ಸುತ್ತಲಿನಲ್ಲಿ ಏಡ್ಸ್ ಪೀಡಿತರು ಕಾಣಿಸಿದಾಗ ಅವರನ್ನು ಕಡೆಗಣನೆಯ ದೃಷ್ಟಿಯಿಂದ ನೋಡದೇ ರೋಗ ನಿವಾರಿಸಲು ಸಹಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ.ಹೇಳಿದರು.
ನಗರದ ಬ್ರಿಮ್ಸ್ ಆಸ್ಪತ್ರೆಯ ಹಾಲ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಡ್ಸ್ ರೋಗಕ್ಕೆ ಔಷಧ ಇಲ್ಲ. ಮುಂಜಾಗ್ರತೆಯೇ ದಿವ್ಯ ಔ ಷಧ ಎಂದರು.
ವೈದ್ಯಕೀಯ ಅಧಿಧೀಕ್ಷಕ ಡಾ| ವಿಜಯಕುಮಾರ ಅಂತಪ್ಪನೋರ ಮಾತನಾಡಿ, ಎಚ್‌ಐವಿ ಸೋಂಕಿತರು ತಮ್ಮ ಆರೋಗ್ಯದ ಸ್ಥಿತಿ ಸುಧಾರಣೆಗಾಗಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಸರಿಯಾದ ರೀತಿಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿ ಕಾರಿ ಡಾ|ದೀಪಾ ಖಂಡ್ರೆ ಮಾತನಾಡಿ, ಸಮುದಾಯಗಳು ಬದಲಾವಣೆಯನ್ನುಂಟು ಮಾಡುತ್ತವೆ ಎಂಬ ಘೊಷವಾಕ್ಯದೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಸೇವಾ ಸೌಲಭ್ಯ ಹಾಗೂ ಎಚ್‌ಐವಿ/ಏಡ್ಸ್ ರೋಗದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಿದರು.
ಆರ್‌ಎನ್‌ಟಿಸಿಪಿ ನೋಡಲ್ ಅಧಿಕಾರಿ ಡಾ|ಮಹೇಶ ತೊಂಡಾರೆ ಉಪನ್ಯಾಸ ನೀಡಿ, ಏಡ್ಸ್ ರೋಗದ ಲಕ್ಷಣಗಳು ಮತ್ತು ನಿಯಂತ್ರಣ ಕ್ರಮಗಳ ಬಗ್ಗೆ ವಿವರಣೆ ನೀಡಿದರು. ಬ್ರಿಮ್ಸ್ ನಿರ್ದೇಶಕ ಡಾ| ಚಂದ್ರಕಾಂತ ಚಿಲ್ಲರ್ಗಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಕೃಷ್ಣಾ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಟ್ಟದ ಕಾರ್ಯಕ್ರಮ ಅಧಿಕಾರಿಗಳಾದ ಡಾ|ರಾಜಶೇಖರ ಪಾಟೀಲ, ಡಾ|ಇಂದುಮತಿ ಪಾಟೀಲ, ಡಾ|ಅನೀಲಕುಮಾರ ಚಿಂತಾಮಣಿ, ಐಸಿಟಿಸಿ, ಎಆರ್‌ಟಿ, ಬ್ಲಿಡ್ ಬ್ಯಾಂಕ್, ಶರಣ ತತ್ವ, ಪ್ರವರ್ಧ, ಎಲ್‌ಬಿಇಎಸ್, ಬೆಳದಿಂಗಳು, ನೆಟ್‌ವರ್ಕ, ಜಿಲ್ಲಾ ಕ್ಷಯರೋಗ ಸಿಬ್ಬಂದಿ ಹಾಗೂ ಡ್ಯಾಪ್ಕು ಕಾರ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ಎಚ್‌ಐವಿ/ಏಡ್ಸ್ ನಿಯಂತ್ರಣ ಕ್ಷೇತ್ರದಲ್ಲಿ ಉತ್ತವಾಗಿ ಕರ್ತವ್ಯ ನಿರ್ವಹಿಸಿದ ಎಆರ್‌ಟಿ ಕೇಂದ್ರದ ಹಿರಿಯ ವೈದ್ಯಾಧಿ ಕಾರಿ ಡಾ| ಭೀಮರಾವ್ ಸಿಂಗೊಡೆ, ಪ್ರವರ್ಧ ಸಂಸ್ಥೆಯ ಆಪ್ತ ಸಮಾಲೋಚಕ ಕಲ್ಲಪ್ಪ, ಐಸಿಟಿಸಿ ಸಾರ್ವಜನಿಕ ಆಸ್ಪತ್ರೆ ಬಸವಕಲ್ಯಾಣ ಆಪ್ತ ಸಮಾಲೋಚಕಿ ಶಿವಲೀಲಾ, ಐಸಿಟಿಸಿ ಸಾರ್ವಜನಿಕ ಆಸ್ಪತ್ರೆ ಔರಾದ ತಂತ್ರಜ್ಞ ಮಹಾಂತೇಶ ಹಾಗೂ ಬೆಳದಿಂಗಳು ಸಂಸ್ಥೆಯ ನಾಗೇಂದ್ರ ಅವರಿಗೆ ನೆನಪಿನ ಕಾಣಿಕೆ, ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.
ಜಾಗೃತಿ ಜಾಥಾ: ಇದಕ್ಕೂ ಮುನ್ನ ಏಡ್ಸ್ ದಿನಾಚರಣೆಯ ನಿಮಿತ್ತ ಆರೋಗ್ಯ ಇಲಾಖೆಯಿಂದ ಜಾಗೃತಿ ಜಾಥಾ ನಡೆಸಲಾಯಿತು. ನಗರದ ಡಿಎಚ್‌ಒ ಕಚೇರಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ ಟಿ.ಪಿ. ಅವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಾನಪದ ಕಲಾ ತಂಡದವರು ಜಾನಪದ ಗೀತೆಯ ಮೂಲಕ ಏಡ್ಸ್ ಕುರಿತು ತಿಳಿವಳಿಕೆ ಮೂಡಿಸಿದರು. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ನರ್ಸಿಂಗ್ ಕಾಲೇಜು ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಮತ್ತು ಎನ್‌ಜಿಒ ಸಿಬ್ಬಂದಿಯಿಂದ ಕೂಡಿದ ಜಾಥಾ ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳ ಮೂಲಕ ಬ್ರಿಮ್ಸ್ ಜಿಲ್ಲಾ ಆಸ್ಪತ್ರೆಯ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.