ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ಮಾಡಲ್ಲ:ಕಮಲಾ ಹ್ಯಾರಿಸ್
Team Udayavani, Dec 4, 2019, 9:06 PM IST
ವಾಷಿಂಗ್ಟನ್: ಮುಂದಿನ ವರ್ಷ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಕಣದಿಂದ ಭಾರತೀಯ-ಅಮೆರಿಕನ್ ಕಮಲಾ ಹ್ಯಾರಿಸ್ ಹಿಂದೆ ಸರಿದಿದ್ದಾರೆ.
ಸೂಕ್ತ ರೀತಿಯಲ್ಲಿ ಆರ್ಥಿಕ ಸಂಪನ್ಮೂಲ ಇಲ್ಲದೇ ಇರುವ ಕಾರಣದಿಂದಾಗಿ ಕೂಡಲೇ ಸ್ಪರ್ಧೆಯಿಂದ ಹಿಂದೆ ಸರಿಯುವೆ ಮತ್ತು ಪ್ರಚಾರ ನಿಲ್ಲಿಸುವುದಾಗಿ ಪ್ರಕಟಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಬೆಂಬಲಿಗರಿಗೆ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದಾರೆ.
“ಪ್ರತಿಯೊಂದು ಹಂತದಿಂದಲೂ ಪರಿಶೀಲನೆ ನಡೆಸಿದಾಗ 2020ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂಬ ಜೀವನದ ಕಠಿಣ ನಿರ್ಧಾರ ಕೈಗೊಳ್ಳಬೇಕಾಗಿದೆ. ಅದಕ್ಕೆ ಪೂರಕವಾಗಿರುವ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಅಸಾಧ್ಯವೆಂದು ಮನಗಂಡಿದ್ದೇನೆ ಮತ್ತು ಅಷ್ಟೊಂದು ಶ್ರೀಮಂತೆಯೂ ಅಲ್ಲ’ ಎಂದು ಬರೆದಿದ್ದಾರೆ.
ಇದುವರೆಗೆ ತಮ್ಮ ಪರವಾಗಿ ಪ್ರಚಾರ ನಡೆಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿಯೂ ಅವರು ಹೇಳಿಕೊಂಡಿದ್ದಾರೆ. ಒಂದು ವೇಳೆ ಕಮಲಾ ಹ್ಯಾರಿಸ್ ಚುನಾವಣೆಯಲ್ಲಿ ನಿಂತು ಗೆಲ್ಲುತ್ತಿದ್ದರೆ ಅಂಥ ಸಾಧನೆ ಮಾಡುತ್ತಿದ್ದ ಮೊದಲ ಅಮೆರಿಕನ್-ಭಾರತೀಯ ಮಹಿಳೆಯ ಸಾಲಿಗೆ ಸೇರುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh Crisis: ಶೇಖ್ ಹಸೀನಾ ಸರಕಾರದಿಂದ ದೇಶ ನಾಶ: ಯೂನುಸ್ ಆರೋಪ
Declaration Of Martial Law: ಗಂಟೆಗಳಲ್ಲೇ ತುರ್ತು ಪರಿಸ್ಥಿತಿ ಹಿಂಪಡೆದ ದಕ್ಷಿಣ ಕೊರಿಯಾ
Bangladesh Crisis: ದೂತಾವಾಸ ಕಚೇರಿ ಮೇಲೆ ದಾಳಿ: ಭಾರತ ವಿರುದ್ಧ ಬಾಂಗ್ಲಾ ಪ್ರತಿಭಟನೆ
Declaration Of Martial Law: ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Puttur: ಎಪ್ರಿಲ್, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್ ಕೇಂದ್ರ
E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್ ಕಡ್ಡಾಯ: ಪ್ರಾಧಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.