ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಆಗ್ರಹ
ಅಂಗನವಾಡಿ ನೌಕರರ ಮುಷ್ಕರ; ಬೃಹತ್ ಜಾಥಾ, ಧರಣಿ ಸಭೆ
Team Udayavani, Dec 5, 2019, 4:10 AM IST
ಉಡುಪಿ: ಕೇಂದ್ರ ಸರಕಾರ ಅಂಗನವಾಡಿಗಳಿಗೆ 60:40ರ ಅನು ಪಾತದಲ್ಲಿ ಅನುದಾನ ನೀಡಲು ನಿರ್ಧರಿ ಸಿದ ಬಳಿಕ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕೆಂದು ಆಗ್ರಹಿಸಿ ಡಿ. 10ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಯಮುನಾ ಗಾಂವ್ಕರ್ ಹೇಳಿದರು.
ಬುಧವಾರ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ನಡೆದ ಬೃಹತ್ ಜಾಥಾ ಮತ್ತು ಧರಣಿ ಸಭೆಯಲ್ಲಿ ಅವರು ಮಾತನಾಡಿದರು.
ಬೆಂಗಳೂರಿಗೆ ಪಾದಯಾತ್ರೆ
ಸಿಐಟಿಯು ಜಿಲ್ಲಾಧ್ಯಕ್ಷ ಕೆ. ಶಂಕರ್ ಮಾತನಾಡಿ, ಡಿ. 10ರಂದು ತುಮಕೂರಿನಲ್ಲಿ 30 ಸಾವಿರ ಮಂದಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇರಲಿದ್ದಾರೆ. ಅನಂತರ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ನಮ್ಮ ಬೇಡಿಕೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಮಾತನಾಡಿ, ಅಂಗನವಾಡಿಗಳನ್ನು ಖಾಸಗೀಕರಣ ಮಾಡಬಾರದು. ಅಂಗನವಾಡಿ ವ್ಯವಸ್ಥೆ ಬದಲಾಯಿಸುವ ಕೆಲಸಕ್ಕೆ ಸರಕಾರ ಕೈ ಹಾಕಬಾರದು ಎಂದು ಆಗ್ರಹಿಸಿದರು. ಸಿಐಟಿಯು ಕಾರ್ಯದರ್ಶಿ ಕವಿರಾಜ್, ಪ್ರಮುಖರಾದ ಸುಶೀಲಾ, ಪ್ರೇಮಾ, ವಾಣಿ, ಅಂಬಿಕಾ, ಪುಷ್ಪಾ, ಪ್ರಮೀಳಾ, ಜಯಲಕ್ಷ್ಮೀ, ಸರೋಜಾ, ಸರೋಜಿನಿ, ಆಶಾಲತಾ, ಶಾಂತಾ, ಭಾಗ್ಯ, ಜಯಲಕ್ಷ್ಮೀ, ವಿದ್ಯಾರಾಜ್ ಮತ್ತಿತರರು ಉಪಸ್ಥಿತರಿದ್ದರು.
ಗೌರವ ಕಳೆದುಕೊಳ್ಳುವ ಭೀತಿ
ಉದಾರೀಕರಣ ನೀತಿಯಿಂದ ಅಂಗವಾಡಿಗಳನ್ನು ಖಾಸಗಿಗೆ ವಹಿಸಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ. ಆಹಾರ, ಆರೋಗ್ಯ, ಶಿಕ್ಷಣವನ್ನು ನೀಡುತ್ತಿರುವ ಅಂಗನವಾಡಿ ನೌಕರರಿಗೆ ಕನಿಷ್ಠ 21 ಸಾವಿರ ರೂ. ವೇತನ ಜಾರಿ ಮಾಡಬೇಕು. ಮಾತೃಪೂರ್ಣ ಯೋಜನೆ ಸಹಾಯಕಿಯರ ಕೆಲಸಕ್ಕಾಗಿ ನೀಡುವ ಗೌರವ ಧನ ಹೆಚ್ಚಿಸಬೇಕು. ನಿವೃತ್ತರಾದವರಿಗೆ ಕನಿಷ್ಠ 6 ಸಾವಿರ ರೂ. ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು. ಅಂಗನವಾಡಿ ನೌಕರರು ಗೌರವ ಧನದ ಹೆಸರಿನಲ್ಲಿ ಗೌರವ ಕಳೆದು ಕೊಳ್ಳುತ್ತಿದ್ದಾರೆ. ಈ ಕಾರಣಕ್ಕಾಗಿ ದೇಶದಲ್ಲಿರುವ ಅಂಗನವಾಡಿ ನೌಕರರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.