ರೈಲು ಪ್ರಯಾಣಿಕರು ಇರುವಲ್ಲಿಗೇ ಬರಲಿದೆ ಬಸ್!
Team Udayavani, Dec 6, 2019, 10:20 AM IST
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಗೇಟ್ 1ರ ಮೂಲಕ ನಿತ್ಯ ಒಂದು ಲಕ್ಷಕ್ಕೂ ಹೆಚ್ಚು ಜನ ಪ್ರಯಾಣಿಕರು ಬರುತ್ತಿದ್ದು, ಈ ಭಾಗದಲ್ಲಿ ಸಂಚಾರ ದಟ್ಟಣೆಯೂ ಹೆಚ್ಚಾಗುತ್ತಿದೆ. ಬಸ್ ನಿಲ್ದಾಣಕ್ಕೆ ಪ್ರಯಾಣಿಕರು ತೂಕದ ಬ್ಯಾಗ್ ಹಾಗೂ ಲಗೇಜ್‌ಗಳನ್ನು ಹೊತ್ತು ಸಾಗಬೇಕಾಗಿದೆ. ಅಲ್ಲದೆ, ಮಕ್ಕಳು, ಗರ್ಭಿಣಿಯರು ರೈಲು ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ಹೋಗಲು ಹರಸಾಹಸ ಪಡುತ್ತಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದ ನಡುವೆ 300 ಮೀಟರ್ ಅಂತರವಿದೆ. ಹೀಗಾಗಿ, ರೈಲು ನಿಲ್ದಾಣದ ಗೇಟ್-3ರಲ್ಲಿ ಬಸ್ ಸಂಚಾರ ಸೇವೆ ಕಲ್ಪಿಸಲು ಬಿಎಂಟಿಸಿ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
ರೈಲು ನಿಲ್ದಾಣದ ಗೇಟ್-3ರ ಮಾರ್ಗವಾಗಿ ಬಿಎಂಟಿಸಿ ಬಸ್‌ಗಳ ಸಂಚಾ ಪ್ರಾರಂಭಿಸುವ ಸಂಬಂಧ ಬಿಎಂಟಿಸಿ ಮತ್ತು ರೈಲ್ವೆ ಇಲಾಖೆ ಒಪ್ಪಂದ ಮಾಡಿಕೊಂಡಿದ್ದು,ಎರಡು ಇಲಾಖೆಗಳ ಸಹಭಾಗಿತ್ವದಲ್ಲಿ ಈ ಯೋಜನೆ ಅನುಷ್ಠಾನವಾಗುತ್ತಿದೆ.
ಈ ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರನ್ನು ನೋಡಿಕೊಂಡು ಆಯಾಮಾರ್ಗದಲ್ಲಿ ಬಸ್ ಸಂಚಾರ ಪ್ರಾರಂಭಿಸಲು ಬಿಎಂಟಿಸಿ ಮುಂದಾಗಿದೆ. ಶೀಘ್ರದಲ್ಲೇ ಈ ಮಾರ್ಗದಲ್ಲಿ ಬಸ್‌ಗಳ ಸಂಚಾರ ಪ್ರಾರಂಭವಾಗಲಿದ್ದು, ಪ್ರಾರಂಭಿಕ ಹಂತದಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಒಂದು ಬಸ್ ಈ ಮಾರ್ಗದಲ್ಲಿ ಸಂಚರಿಸಲಿದೆ. ಬಸ್ ಸಂಚಾರ ಯಾವ ಮಾರ್ಗಗಳಲ್ಲಿ ಪ್ರಾರಂಭಿಸಬೇಕು ಎನ್ನುವ ಸಂಬಂಧ ರೈಲ್ವೆ ಇಲಾಖೆಯ ವೇಳಪಟ್ಟಿ ಹಾಗೂ ಪ್ರಯಾಣಿಕರು ಇಲ್ಲಿಂದ ಯಾವ ಮಾರ್ಗದಲ್ಲಿ ಹೆಚ್ಚು ಸಂಚಾರ ಮಾಡುತ್ತಾರೆ ಎನ್ನುವ ಬಗ್ಗೆ ಬಿಎಂಟಿಸಿ ಮಾಹಿತಿ ಕಲೆಹಾಕಿದೆ. ಈ ಮೂಲಕ ಇನ್ನು ಮುಂದೆ ಪ್ರಯಾಣಿಕರ ಬಳಿಗೇ ಬಿಎಂಟಿಸಿ ಬಸ್ ಬರಲಿದೆ!
ಸಾರ್ವಜನಿಕರಿಗೆ ಮಾಹಿತಿ: ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎರಡೂ ಇಲಾಖೆಗಳು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಪ್ರಯಾಣಿಕರಿಗೆ ಪ್ಲಾಟ್‌ಫಾರಂ ಹಾಗೂ ಸಾರಿಗೆ ಸೇವೆಯ ಬಗ್ಗೆ ಮಾಹಿತಿ ನೀಡುವುದಕ್ಕೆ ಹತ್ತು ಜನ ಸಾರಿಗೆ ಸೇವಕರನ್ನು ನೇಮಕ ಮಾಡಲಾಗಿದೆ. ಈ ಸಂಚಾರ ಸೇವಕರು ರೈಲು ನಿಲ್ದಾಣದ ಒಳಭಾಗದಲ್ಲಿ ಸಂಚಾರ ಸೇವೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಈ ಮಾರ್ಗದಲ್ಲಿ ಬಸ್‌ಗಳ ವೇಳಾಪಟ್ಟಿ ನಾಮಫಲಕ ಅಳವಡಿಸುವುದಕ್ಕೆ ಬಿಎಂಟಿಸಿ ಮುಂದಾಗಿದೆ. ಅಲ್ಲದೆ, ಈ ಭಾಗದಲ್ಲಿ ಬಸ್‌ಗಳ ಆಗಮನ ಹಾಗೂ ನಿರ್ಗಮನ ಸುಗಮವಾಗಿಸುವುದಕ್ಕಾಗಿ ಪಾಳಿ ಪ್ರಕಾರ ಸಂಚಾರ ಸಹಾಯಕರನ್ನು ನೇಮಿಸಲಾಗುತ್ತಿದೆ.
ಖಾಸಗಿ ವಾಹನಗಳಿಗೆ ನಿರ್ಭಂದ: ರೈಲು ನಿಲ್ದಾಣದ ಗೇಟ್-3ರ ಬಳಿ ಈಗ ಖಾಸಗಿ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ. ಬಸ್ ಸಂಚಾರ ಸೇವೆಯನ್ನು ಪ್ರಾರಂಭಿಸುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಆಟೋ ರಿಕ್ಷಾ, ಬೈಕ್ ಹಾಗೂ ಕಾರು ಸೇರಿದಂತೆ ಎಲ್ಲ ರೀತಿಯ ಖಾಸಗಿ ವಾಹನಗಳನ್ನು ನಿರ್ಭಂದಿಸಲಾಗಿದೆ.
ಮತ್ತಷ್ಟು ಸಿದ್ಧತೆ ಅವಶ್ಯ : ಗೇಟ್-3ರಲ್ಲಿನ ಉದ್ದೇಶಿತ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯಗಳನ್ನು ರೈಲ್ವೆ ಇಲಾಖೆ ಇನ್ನಷ್ಟೇ ಅಳವಡಿಸಬೇಕಿದೆ. ಪ್ರಯಾಣಿಕರಿಗೆ ಕುರ್ಚಿ ವ್ಯವಸ್ಥೆ ಹಾಗೂ ಮಳೆ, ಬಿಸಿಲಿನಿಂದ ರಕ್ಷಣೆಗೆ ತಂಗುದಾಣ ನಿರ್ಮಾಣ ಹಾಗೂ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡುವ ಅವಶ್ಯಕತೆ ಇದೆ.
ಸಾರ್ವಜನಿಕರಿಗೆ ಅನುಕೂಲ: ಉದ್ದೇಶಿತ ಬಸ್‌ನಿಲ್ದಾಣದಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಇನ್ನು ರೈಲು ನಿಲ್ದಾಣದ ಗೇಟ್-1ರಲ್ಲಿನ ಕೆಲವು ಟ್ಯಾಕ್ಸಿ ಹಾಗೂ ಆಟೋಗಳು ಚಾಲಕರು ದುಬಾರಿ ಮೊತ್ತ ಪಡೆಯುತ್ತಿರುವ ಆರೋಪ ಇದೆ. ಅಲ್ಲದೆ, ಈ ಮಾರ್ಗದಲ್ಲಿ ಬಿಎಂಟಿಸಿ ಬಸ್ ಪರಿಚಯಿಸಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರು ಸೇವೆ ಬಳಸಿದರೆ, ಬಿಎಂಟಿಸಿ ಆದಾಯ ಹೆಚ್ಚಾಗುವ ಸಾಧ್ಯತೆಯೂ ಇದೆ.
-ಹಿತೇಶ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.