ರಸ್ತೆ ದುರವಸ್ಥೆ: ಅಧಿಕಾರಿಗಳ ವಿರುದ್ಧ ಗರಂ
Team Udayavani, Dec 6, 2019, 11:04 AM IST
ಹುಬ್ಬಳ್ಳಿ: ತಾಲೂಕಿನಾದ್ಯಂತ ಮಳೆಗೆ ಎಲ್ಲ ರಸ್ತೆಗಳು ಹಾಳಾಗಿದ್ದು, ಸಮರ್ಪಕ ದುರಸ್ತಿ ಕಾರ್ಯ ಕೈಗೊಳ್ಳದ ಬಗ್ಗೆ ತಾಪಂ ಸದಸ್ಯರು ಪಕ್ಷಭೇದ ಮರೆತು ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರು, ರಸ್ತೆ ದುರಸ್ತಿಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕೆಂದು ಒತ್ತಾಯಿಸಿದರು. ರಸ್ತೆ ದುರಸ್ತಿ ಕಡೆಗೆ ಅಧಿಕಾರಿಗಳು ಗಮನ ಹರಿಸದ ಪರಿಣಾಮ ಹದಗೆಟ್ಟಿದ್ದರಿಂದ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದ್ದು, ಕೂಡಲೇ ದುರಸ್ತಿ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನೀವೇ ಜವಾಬ್ದಾರಿ: ಅದರಗುಂಚಿ ಗ್ರಾಮದಲ್ಲಿ ಜಿಎಂಪಿಎಸ್ ಶಾಲೆಯಲ್ಲಿ ಎರಡು ಕೊಠಡಿ ನಿಮಾರ್ಣಕ್ಕೆ ಗುಂಡಿ ತೋಡಿ ಹಾಗೇ ಬಿಟ್ಟಿದ್ದಾರೆ. ಈ ಹಿಂದೆ ಕೊಠಡಿಗಳ ಅಳತೆ ಸರಿ ಇಲ್ಲ ಎಂದು ಮುಖೋಪಾಧ್ಯಾಯರು ತಡೆ ಮಾಡಿದ್ದಾರೆ ಎಂದು ಅಧಿಕಾರಿಗಳು ಸಬೂಬು ಹೇಳಿದರು. ಆಗ ಪ್ರತಿಕ್ರಿಯಿಸಿದ ತಾಪಂ ಉಪಾಧ್ಯಕ್ಷ ಗುರುಪಾದಪ್ಪ ಕಮಡೊಳ್ಳಿ, ಅಷ್ಟು ಚಿಕ್ಕ ಕೊಠಡಿಯಲ್ಲಿ ಮಕ್ಕಳು ಅಧ್ಯಯನ ಮಾಡಲು ಸಾಧ್ಯವೇ.
ಶಾಲೆಯ ಆವರಣದಲ್ಲಿ ಏನಾದರೂ ಅವಘಡಗಳು ಸಂಭವಿಸಿದರೇ ಅದಕ್ಕೆ ನೀವೇ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಗುಂಡಳ್ಳಿ, ಈಗಾಗಲೇ ಮುಖೋಪಾಧ್ಯಾಯರು ತಡೆ ನೀಡಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಯ ಗಮನಕ್ಕೆ ತರಲಾಗಿದೆ. ಅಳತೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ಕೂಡಲೇ ಕೆಲಸ ಆರಂಭಿಸುವುದಾಗಿ ಹೇಳಿದರು. ಕುಡಿವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧೀನದ ಎಲ್ಲ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪರಿಶೀಲನೆ ನಡೆಸಬೇಕು. ಎಲ್ಲೂ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳನ್ನು ಸದಸ್ಯ ಫಕೀರಪ್ಪ ಚಾಕಲಬ್ಬಿ ಒತ್ತಾಯಿಸಿದರು.
ಗ್ರಾಮೀಣ ಶಿಕ್ಷಣ ಇಲಾಖೆ: ಮಳೆಯಿಂದಾಗಿ ಶಾಲಾ ಕಟ್ಟಡಗಳು ಹಾನಿಗೀಡಾಗಿದ್ದು, ದುರಸ್ತಿ ಬಗ್ಗೆ ವರದಿ ಸಲ್ಲಿಸಲಾಗಿದೆ. ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಹರ ಹಾಗೂ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ ಹೇಳಿದರು. ಗ್ರಾಮೀಣ ಭಾಗದ 69 ಶಾಲೆಗಳಿಗೆ 2 ಲಕ್ಷ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
3 ವರ್ಷದ ವರದಿಗೆ ಒತ್ತಾಯ: ತಾಲೂಕಿನಲ್ಲಿ ಭೂಸೇನಾ ನಿಗಮದಿಂದ ಕೈಗೊಂಡ ಕಾಮಗಾರಿ ಮಾಹಿತಿ ನೀಡುವಂತೆ ಕೆಲ ಸದಸ್ಯರು ಒತ್ತಾಯಿಸಿದರು. ಹಳೇ ಕಾಮಗಾರಿ ಹಾಗೂ ಮುಕ್ತಾಯವಾದ ಕಾಮಗಾರಿ ಕುರಿತು ಮಾಹಿತಿ ತಂದಿಲ್ಲ. ಸದ್ಯ ಕೆಲಸ ನಡೆಯುತ್ತಿರುವ ಕಾಮಗಾರಿ ಕುರಿತು ಮಾಹಿತಿ ನೀಡಬಹುದು ಎಂದು ಅಧಿಕಾರಿ ಲಕ್ಷ್ಮಣ ನಾಯ್ಕ ಹೇಳಿದಾಗ, ಸದಸ್ಯರು ಸುತಾರಾಂ ಒಪ್ಪಲಿಲ್ಲ.
ಭೂಸೇನಾ ನಿಗಮದ ಕಾಮಗಾರಿ ಕುರಿತು ಒಳ್ಳೆಯ ಅಭಿಪ್ರಾಯಗಳಿಲ್ಲ, ಇಲಾಖೆಯಿಂದ ಕಳೆದ ಮೂರು ವರ್ಷಗಳಲ್ಲಿ ಕೈಗೊಂಡ ಕಾಮಗಾರಿಗಳ ಹಾಗೂ ಮುಕ್ತಾಯಗೊಂಡ ಕಾಮಗಾರಿಗಳ ಸಂಪೂರ್ಣ ವರದಿ ನೀಡಬೇಕು ಎಂದು ಸದಸ್ಯ ಫರ್ವೇಜ್ ಬ್ಯಾಹಟ್ಟಿ ಒತ್ತಾಯಿಸಿದಾಗ, ಎಲ್ಲ ಸದಸ್ಯರು ಸಹಮತ ವ್ಯಕ್ತಪಡಿಸಿದರು. ತಾಪಂ ಅಧ್ಯಕ್ಷೆ ಚನ್ನಮ್ಮ ಗೋರ್ಲ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯರು, ಇಒ ಎಂ.ಎಂ. ಸವದತ್ತಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಿ.ಎಚ್. ಅದರಗುಂಚಿ ನಿರೂಪಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.