ಅಂಗನವಾಡಿ ನೌಕರರಿಂದ ಬೃಹತ್ ಪ್ರತಿಭಟನೆ
Team Udayavani, Dec 6, 2019, 11:30 AM IST
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಕಾರ್ಯಕರ್ತೆಯರು ಪ್ರತಿಭಟನಾ ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಮನವಿ ಸಲ್ಲಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಾತೃಪೂರ್ಣಯೋಜನೆ ಯಶಸ್ವಿಗೊಳಿಸಲುಹೆಚ್ಚುವರಿ ಸಹಾಯಕಿಯರನ್ನು ನೀಡಬೇಕು. 1995ರಿಂದ ಪ್ರಾರಂಭವಾಗಿರುವ ಎಲ್ಲ ಯೋಜನೆಗಳಲ್ಲಿ ಆಯ್ಕೆಯಾಗಿರುವ ಕಾರ್ಯಕರ್ತೆಯರು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದಾರೆ. ಅನೇಕರು ಪದವೀಧರರು ಆಗಿರುವುದರಿಂದ ಅವರಿಗೆ ತರಬೇತಿ ನೀಡಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ–ಯುಕೆಜಿ ಆರಂಭಿಸಬೇಕು. ಐಸಿಡಿಎಸ್‌ನ ಆರು ಉದ್ದೇಶಗಳಿಗೆ ಬಿಟ್ಟು ಉಳಿದ ಯಾವುದೇ ಕೆಲಸವನ್ನು ಅಂಗನವಾಡಿ ನೌಕರರಿಂದ ಕಡ್ಡಾಯವಾಗಿ ಮಾಡಿಸಬಾರದು ಎಂದು ಆಗ್ರಹಿಸಿದರು.
ಈಗಿರುವ ನಿವೃತ್ತಿ ಸೌಲಭ್ಯ ಬದಲಾಯಿಸಿ ಎಸ್ ಐಸಿ ಆಧಾರಿತ ಪಿಂಚಣಿ ನೀಡಬೇಕು. ಸೇವಾ ಜೇಷ್ಠತೆಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು. ಮೇಲ್ವಿಚಾರಕಿ ಆಗಿ ಮುಂಬಡ್ತಿ ಹೊಂದುವ ಹುದ್ದೆಗಳನ್ನು ಸಂಪೂರ್ಣವಾಗಿ ಅಂಗನವಾಡಿ ನೌಕರರಿಗೆ ನೀಡಬೇಕು. ಅಂಗನವಾಡಿ ಸಹಾಯಕಿ ಕಾರ್ಯಕರ್ತೆಯಾಗಿ ಮುಂಬಡ್ತಿ ಪಡೆಯಲು ಇರುವ ವಯಸ್ಸಿನ, ಭೌಗೋಳಿಕ ವಿಸ್ತೀರ್ಣದ ಮಿತಿ ಸಡಿಲಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು. ಐದು ವರ್ಷ ಪೂರೈಸಿದ ಮೇಲ್ವಿಚಾರಕಿಯರನ್ನು ಕಡ್ಡಾಯ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘದ ಗೌರವಾಧ್ಯಕ್ಷ ಜಿ.ಎಂ. ಜೈನೇಖಾನ ಮಾತನಾಡಿ, ಪ್ರಧಾನಿ ಮೋದಿ ಬೇಟಿ ಬಚಾವೋ ಬೇಟಿ ಪಡಾವೋ ರೂಪಿಸಿದ್ದಾರೆ. ಆದರೆ ಅಂಗನವಾಡಿಯಲ್ಲಿ ಕೆಲಸ ನಿರ್ವಹಿಸುವ ಬೇಟಿಗಳ ಬಗ್ಗೆ ಏಕೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಎಲ್ಲ ಸರ್ಕಾರಿ ಇಲಾಖೆಗಳನ್ನು ಖಾಸಗೀಕರಣ ಮಾಡಿ ದೇಶ ದಿವಾಳಿ ಮಾಡಲು ಹೊರಟಿದ್ದಾರೆ.ಕೇವಲ ಬಂಡವಾಳಶಾಹಿಗಳನ್ನು ಬೆಳೆಸುವ ಉದ್ದೇಶ ಹೊಂದಿರುವ ಮೋದಿಗೆ ದೇಶದಲ್ಲಿ ದುಡಿಯುತ್ತಿರುವ ಜನರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಾ ಹುಲಿ ಹಾಗೂ ಸಿದ್ದರಾಮಯ್ಯರನ್ನು ಟಗರು ಎಂದು ವೈಭವೀಕರಿಸಲಾಗುತ್ತಿದೆ. ಹುಲಿ–ಟಗರಿನ ಕಾಳಗದ ಮಧ್ಯೆ ದೇವೇಗೌಡ, ಕುಮಾರಸ್ವಾಮಿ ಅಂಪೈರಿಂಗ್ ಮಾಡುತ್ತಿದ್ದಾರೆ. ಯಾರು ಬರುತ್ತಾರೋ ಅವರೊಂದಿಗೆ ಸೇರಿ ಸರ್ಕಾರ ರಚಿಸಲು ತಂತ್ರ ರೂಪಿಸುತ್ತಿದ್ದಾರೆ. ಎಲ್ಲ ನಾಯಕರು ಚುನಾವಣೆ ಜಪ ಮಾಡುತ್ತಿದ್ದಾರೆ. ಆದರೆ ಯಾರೊಬ್ಬರೂ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಹೋಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳನ್ನು ಕರೆಯಿಸಿ ಕುಂದುಕೊರತೆ ಆಲಿಸಲಾಗುವುದು. ಸಮಸ್ಯೆಗಳ ಬಗ್ಗೆ ಸರ್ಕಾರದಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಸಿಐಟಿಯು ಮುಖಂಡ ವಿ.ಪಿ. ಕುಲಕರ್ಣಿ, ಅಧ್ಯಕ್ಷೆ ದೊಡ್ಡವ್ವ ಪೂಜಾರಿ, ಗೋದಾವರಿ ರಾಜಾಪುರ, ಸರಸ್ವತಿ ಮಾಳಶೆಟ್ಟಿ, ವಿದ್ಯಾ ಕಮ್ಮಾರ, ಪಾರ್ವತಿ ಸಾಲಿಮಠ, ಮುನಿರಾ ಮುಲ್ಲಾ ಸೇರಿದಂತೆ ಗದಗ, ಬಾಗಲಕೋಟೆ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.