ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಅವಶ್ಯ
ರೈತರು ವಿನೂತನ ಆವಿಷ್ಕಾರಗಳ ಮಾಹಿತಿ ಪಡೆದು ಸದುಪಯೋಗ ಪಡೆಯಲಿ: ಪಸಾರ್ಗಿ
Team Udayavani, Dec 6, 2019, 12:39 PM IST
ಬೀದರ: ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಬೇಕು ಎಂದು ದುಬಲಗುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಮರ ಪಸಾರ್ಗಿ ಸಲಹೆ ನೀಡಿದರು.
ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎಸ್ಸಿ (ತೋಟಗಾರಿಕೆ) ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಬೀದರ ರೈತರು ತೋಟಗಾರಿಕೆ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ತೋಟಗಾರಿಕೆ ಆಧುನಿಕ ತಂತ್ರಜ್ಞಾನಗಳ ವಿನೂತನ ಆವಿಷ್ಕಾರಗಳ ಕುರಿತು ಮಾಹಿತಿ ಪಡೆದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ಪ್ರಗತಿಪರ ರೈತ ಶಿವರಾಜ ಗಂಗಶೆಟ್ಟಿ ಮಾತನಾಡಿ, ಗ್ರಾಮೀಣ ಭಾಗದ ರೈತರಲ್ಲಿ ಆಧುನಿಕ ತಂತ್ರಜ್ಞಾನಗಳ ಮಾಹಿತಿ ಕೊರತೆ ಇದ್ದು, ಈ ಶಿಬಿರದ ಮೂಲಕ ವಿದ್ಯಾರ್ಥಿಗಳಿಂದ ಆಧುನಿಕ ಯಂತ್ರೋಪಕರಣದ ಮಾಹಿತಿ ಪಡೆದು ಉತ್ತಮ ಇಳುವರಿ ಪಡೆಯಬೇಕು ಎಂದು ಕರೆ ನೀಡಿದರು.
ಅಶೋಕ ಕುಮಾರ ಚಳಕಾಪೂರೆ ಮಾತನಾಡಿ, ವೈಜ್ಞಾನಿಕ ಕಾಲದಲ್ಲಿ ರೈತರು ಕೇವಲ ಕೃಷಿ ಬೆಳೆಗಳನ್ನು ಅವಲಂಬಿಸದೇ ದೀರ್ಘಕಾಲಿಕ ಆದಾಯ ತರುವ ತೋಟಗಾರಿಕೆ ಬೆಳೆಗಳನ್ನು ಬೆಳೆಯಬೇಕೆಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ|ರವಿಂದ್ರ ಮುಲಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಬಗ್ಗೆ ಅರಿವು ಮೂಡಿಸುವುದು ಮತ್ತು ಪರಿಣಿತ ರೈತರಿಂದ ತಾಂತ್ರಿಕ ಮಾಹಿತಿ ಪಡೆದು ಮಾರ್ಗದರ್ಶಕರಾಗಬೇಕೆಂದು ಕಿವಿ ಮಾತು ಹೇಳಿದರು.
ಕೃಷಿಯಲ್ಲಿ ರೈತರು ಅನುಭವಿಸುವ ಸಮಸ್ಯೆಗಳು ಮತ್ತು ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುವುದರ ಜೊತೆಗೆ ತೋಟಗಾರಿಕೆ ಬೆಳೆಗಳಲ್ಲಿ ಒಳ್ಳೆಯ ತಳಿಗಳನ್ನು ಉಪಯೋಗಿಸಬೇಕು. ಮೋಹಕ ಬಲೆ ಬಳಸಬೇಕು, ಪ್ಲಾಸ್ಟಿಕ್ ಮಲಿcಂಗ್, ಹಸಿರು ಮನೆ, ನೆರಳು ಮನೆ ಅಳವಡಿಸಿಕೊಂಡು ಹೆಚ್ಚು ಲಾಭ ಪಡೆಯಬಹುದು ಎಂದು ರೈತರಿಗೆ ಸಲಹೆ ನೀಡಿದರು.
ಭಾರತದ ಮೊದಲ ರಾಷ್ಟ್ರಪತಿ ಡಾ|ರಾಜೇಂದ್ರ ಪ್ರಸಾದ ಅವರ ಜನ್ಮದಿನದ ಅಂಗವಾಗಿ ಕೃಷಿ ಶಿಕ್ಷಣ ದಿನ ಆಚರಿಸಲಾಗುತ್ತದೆ. ಇವರು ಸ್ವತಂತ್ರ ಭಾರತದ ಮೊದಲ ಕೇಂದ್ರ ಕೃಷಿ ಮಂತ್ರಿಯಾಗಿದ್ದರು ಎಂದು ವಿವರಿಸಿದರು.
ಗ್ರಾಪಂ ಸದಸ್ಯರಾದ ಮಾಣಿಕರಾವ್ ಭೋಲಾ, ಶಾಂತಪ್ಪಾ ಪಸಾರ್ಗಿ, ರೈತ ಸಂಪರ್ಕ ಕೇಂದ್ರ ಅಧಿಕಾರಿಗಳಾದ ಗೋವಿಂದ, ರಾಕೇಶ ಸಾಗರ ಮತ್ತು ಶಿಬಿರದ ಸಂಯೋಜಕರಾದ ಡಾ| ಶಶಿಕಲಾ ರೂಳಿ, ಡಾ| ಧನಂಜಯ ಪಿ., ಡಾ| ಕಾವಳೆ ನಾಗೇಂದ್ರ, ಸಹಾಯಕ ಪ್ರಾಧ್ಯಾಪಕ ಸುನಿಲ ವಾಡಿ, ರೈತರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಶ್ವನಾಥ ಪ್ರಾಸ್ತಾವಿಕ ವರದಿ ಮಂಡಿಸಿದರು. ನರೇನ ಮತ್ತು ಸ್ವೇತಾ ಬೆಂಕಿ ನಿರೂಪಿಸಿದರು. ಶಾಂಭವಿ ಸ್ವಾಗತಿಸಿದರು. ದಾಮದೀಪ ವಂದಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
MUST WATCH
ಹೊಸ ಸೇರ್ಪಡೆ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.