ಮದ್ದೂರು-ಕೊಪ್ಪ ರಸ್ತೆ ಅಭಿವೃದ್ಧಿಗೆ ಆಗ್ರಹ
Team Udayavani, Dec 6, 2019, 4:12 PM IST
ಮದ್ದೂರು: ಮದ್ದೂರು–ಕೊಪ್ಪ ಮಾರ್ಗದ ರಸ್ತೆ ಅಭಿವೃದ್ಧಿಗೊಳಿಸುವಂತೆ ಒತ್ತಾಯಿಸಿ ಕರುನಾಡ ಸೇನಾನಿಗಳ ವೇದಿಕೆ ಕಾರ್ಯಕರ್ತರು ಅರಣ್ಯಾಧಿಕಾರಿ ನಂದಿನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ತಾಲೂಕಿನ ಕೊಪ್ಪ ಗ್ರಾಮದಲ್ಲಿರುವ ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಕಚೇರಿಗೆ ತೆರಳಿದ ಸಂಘಟನೆ ಪದಾಧಿಕಾರಿಗಳು ಸಂಬಂಧಿಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಮದ್ದೂರು–ಕೊಪ್ಪ ಮುಖ್ಯರಸ್ತೆಯಲ್ಲಿ ಒಣಗಿರುವ ಮರ ತೆರವುಗೊಳಿಸುವ ಜತೆಗೆ ವಾಹನ ಸಂಚಾರಕ್ಕೆ ತೊಡಕುಂಟುಮಾಡುತ್ತಿರುವ ಮರದ ರೆಂಬೆಗಳನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಆಗ್ರಹಿಸಿದರು. ಕಳೆದ ಹಲವು ದಿನಗಳಿಂದಲೂ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಸವಾರರು ಸಂಚರಿಸಲು ಹರಸಾಹಸ
ಪಡಬೇಕಾದ ಸ್ಥಿತಿ ಬಂದೊದಗಿದೆ. ಕೊಪ್ಪದಿಂದ ಚಾಪುರದೊಡ್ಡಿ ಗ್ರಾಮದವರೆಗೂ ಗುಂಡಿಗಳು ಹಾಗೂ ರಸ್ತೆ ಕಿತ್ತು ನಿಂತಿದ್ದರೂಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸದೆ ಮೌನಕ್ಕೆ ಶರಣಾಗಿರುವುದಾಗಿ ಆರೋಪಿಸಿದರು.
ಕೊಪ್ಪ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುವ ಹಾಗೂ ಇನ್ನಿತರೆ ವಾಹನಗಳು ಪ್ರತಿನಿತ್ಯ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಯದ ವಾತಾವರಣದಲ್ಲೇ ಶಾಲೆಗೆ ತೆರಳ ಬೇಕಾದ ಅನಿವಾರ್ಯತೆ ಎದುರಾಗಿದ್ದು ರಾತ್ರಿ ವೇಳೆ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಹಲವಾರು ಅಪಘಾತಗಳಿಂದ ಮೃತಪಟ್ಟಿರುವ ಉದಾಹರಣೆಗಳು ಸಾಕಷ್ಟಿವೆ.
ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಅಗಲೀಕರಣ ಕೈಗೊಂಡಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ತಾತ್ಕಾಲಿಕವಾಗಿ ಕಾಮಗಾರಿ ಕೈಗೊಂಡು ವಾಹನ ಸವಾರರಿಗೆ ಹಾಗೂ ಸ್ಥಳೀಯ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಬೇಕಾಗಿದೆ. 15 ದಿನದೊಳಗಾಗಿ ರಸ್ತೆ ಕಾಮಗಾರಿಗೆ ಮುಂದಾಗದಿದ್ದಲ್ಲಿ ಇಲಾಖೆ ಎದುರು ನಿರಂತರ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದಿದ್ದಾರೆ.
ಈ ವೇಳೆ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಬಿವುಲ್ಲಾ, ತಾಲೂಕು ಅಧ್ಯಕ್ಷ ಆದರ್ಶಗೌಡ, ಉಪಾಧ್ಯಕ್ಷ ಮೆಹಬೂಬು, ಎನ್.ಟಿ. ಪುಟ್ಟಸ್ವಾಮಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.