ಸೇವಾ ರಾಜಕಾರಣ ಪವಿತ್ರವಾದದ್ದು
Team Udayavani, Dec 7, 2019, 11:39 AM IST
ಧಾರವಾಡ: ರಾಜಕಾರಣ ಕೆಟ್ಟದ್ದಲ್ಲ, ಇದನ್ನು ವೃತ್ತಿಯಾಗಿ ಸ್ವೀಕರಿಸದೇ ಪ್ರವೃತ್ತಿಯಾಗಿ ಸಮಾಜಸೇವೆಯಾಗಿ ರೂಢಿಸಿಕೊಂಡರೆ ಇದೊಂದು ಪವಿತ್ರ ಕೆಲಸವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಪ್ರಸೆಂಟೇಶನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಕರ್ನಾಟಕ ಸರಕಾರದ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಯುವ ಸಂಸತ್ತು ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ಆಶಯಗಳು ಪೂರ್ಣಗೊಳ್ಳಲು ಮತ್ತು ಪರಿಣಾಮಕಾರಿ ಪ್ರಜಾಪ್ರಭುತ್ವ ರೂಪುಗೊಳ್ಳಲು ಶಾಲಾ–ಕಾಲೇಜು ಹಂತದಲ್ಲಿ ಸಂಘಟಿಸುವ ಸಂಸದೀಯ ಕಲಾಪಗಳ ಅಣಕು ಪ್ರದರ್ಶನ ಹೆಚ್ಚು ಸಹಾಯಕಾರಿ ಆಗುತ್ತದೆ. ಯುವ ಜನತೆಯಲ್ಲಿ ಭಾರತದ ಸಂವಿಧಾನ, ಸಂಸತ್ತು, ಶಾಸನ ಸಭೆ, ಜನಪ್ರತಿನಿಧಿ ಕಾಯ್ದೆ, ಮತದಾನ, ಚುನಾವಣೆ, ಮೂಲಭೂತ ಹಕ್ಕು, ಕರ್ತವ್ಯ, ಸರಕಾರ ರಚನೆ, ಸರಕಾರದ ಆಡಳಿತ ನಿರ್ವಹಣೆ ಮುಂತಾದ ಅಂಶಗಳನ್ನು ಪ್ರಬಂಧ, ಭಾಷಣ, ಆಶುಭಾಷಣ ಮತ್ತು ಅಣುಕು ಪ್ರದರ್ಶನಗಳ ಮೂಲಕ ಮನನ ಮಾಡಿ, ತರಬೇತಿ ನೀಡಬೇಕು ಎಂದು ಹೇಳಿದರು.
ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಮಾತನಾಡಿದರು. ಡಿಡಿಪಿಐ ಗಜಾನನ ಮನ್ನಿಕೇರಿ ಅಧ್ಯಕ್ಷತೆ ವಹಿಸಿದ್ದರು. ಪ್ರಸೆಂಟೇಶನ್ ಬಾಲಕಿಯರ ಪ್ರೌಢಶಾಲೆ ಮುಖ್ಯಾಧ್ಯಾಪಕಿ ಸಿಸ್ಟರ್ ಸ್ಯಾಲಿ ಬಿ.ಎಸ್., ವಿಷಯ ಪರಿವೀಕ್ಷಕರಾದ ಶಿವಲೀಲಾ ಕಳಸಣ್ಣವರ, ಪೂರ್ಣಿಮಾ, ಜಿ.ಆರ್. ಭಟ್, ಶ್ಯಾಮ ಮಲ್ಲನಗೌಡರ ಇದ್ದರು. ತೇಜಸ್ವಿನಿ ಕಾಕಡೆ ತಂಡದವರು ಪ್ರಾರ್ಥಿಸಿದರು. ವಿಷಯ ಪರೀವಿಕ್ಷಕ ಬಿ.ಬಿ. ದುಬ್ಬನಮರಡಿ ಪ್ರಾಸ್ತಾವಿಕ ಮಾತನಾಡಿದರು. ಎನ್.ಬಿ. ಅಮರಗೋಳ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.