ಶಿಥಿಲ ಕಟ್ಟಡ ದುರಸ್ತಿಗೆ 15 ಲಕ್ಷ ರೂ.ಬಿಡುಗಡೆ
Team Udayavani, Dec 7, 2019, 12:43 PM IST
ಗೌರಿಬಿದನೂರು: ಚಿಕ್ಕಬಳ್ಳಾಪುರ ಜಿಲ್ಲಾ ಸತ್ರ ನ್ಯಾಯಾಧೀಶ ಅಮರನಾರಾಯಣ ಅವರು ಶಿಥಿಲಗೊಂಡಿರುವ ಗೌರಿಬಿದನೂರು ನ್ಯಾಯಾಲಯದ ಕಟ್ಟಡದ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಕಟ್ಟಡ ಶಿಥಿಲಗೊಂಡಿದ್ದು, ದುರಸ್ತಿಗಾಗಿ ಸರ್ಕಾರದಿಂದ 15 ಲಕ್ಷ ಮಂಜೂರಾಗಿದೆ. ಡಿ.14ರಂದುರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಲಿರುವುದರಿಂದ ಈ ಅವಧಿಯೊಳಗೆ ಕಟ್ಟಡ ಸಂಪೂರ್ಣವಾಗಿ ರಿಪೇರಿ ಮಾಡಿಸ ಬೇಕೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮತ್ತು ನಗರಸಭೆ ಪರಿಸರ ಅಭಿಯಂತರರು ಹಾಗೂ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗೌರಿಬಿದನೂರು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ.ಸಿ.ಗಂಗಯ್ಯ ಮಾತನಾಡಿ, ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಇದ್ದು, ನ್ಯಾಯಾಲಯದ ಕಟ್ಟಡ ಶಿಥಿಲಗೊಂಡಿರುವುದರಿಂದ ತುರ್ತಾಗಿ ದುರಸ್ತಿಯಾಗುವ ಅನಿವಾರ್ಯತೆ ಇದೆ. ತಾವು ಗೌರಿಬಿದನೂರಿಗೆ ಆಗಮಿಸಿ ಖುದ್ದು ಪರಿಶೀಲನೆ ನಡೆಸಬೇಕೆಂದು ಮನವಿ ಮಾಡಲಾಗಿತ್ತು. ನಮ್ಮ ಮನವಿ ಮೇರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸರ್ಕಾರದಿಂದ 15 ಲಕ್ಷ ಬಿಡುಗಡೆಯಾಗಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕಿದೆ ಎಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಲಿಂಗಪ್ಪ, ಇತರೆ ವಕೀಲರು ಹಾಗೂ ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.