ಜಾರ್ಖಂಡ್ ವಿಧಾನಸಭೆ ಚುನಾವಣೆ; ಮತಗಟ್ಟೆ ಬಳಿ ಗುಂಪು ನಿಯಂತ್ರಿಸಲು ಗುಂಡಿನ ದಾಳಿ, ಓರ್ವ ಸಾವು
Team Udayavani, Dec 7, 2019, 3:19 PM IST
ಜಾರ್ಖಂಡ್: ಜಾರ್ಖಂಡ್ ನ ಸಿಸಾಯ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಗುಂಪೊಂದು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಸಂದರ್ಭದಲ್ಲಿ ಗುಂಪನ್ನು ನಿಯಂತ್ರಿಸಲು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಗ್ರಾಮಸ್ಥ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಮತದಾನ ನಡೆಯುತ್ತಿದ್ದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ ಘಟನೆಯಲ್ಲಿ ಇಬ್ಬರು ಕಾನ್ಸ್ ಟೇಬಲ್, ಪತ್ರಕರ್ತ, ಸಿಸಾಯ್ ಪೊಲೀಸ್ ಠಾಣಾಧಿಕಾರಿ ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದರು. ಗುಮ್ಲಾ ಜಿಲ್ಲೆಯ ಬಧ್ನಿ ಗ್ರಾಮದ ಬೂತ್ ನಂಬರ್ 36ರಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತಗಟ್ಟೆಯಲ್ಲಿ ಕರ್ತವ್ಯ ನಿರತರಾಗಿದ್ದ ಆರ್ ಪಿಎಫ್ (ರಾಪಿಡ್ ಪ್ರೊಟೆಕ್ಸನ್ ಫೋರ್ಸ್) ಸಿಬ್ಬಂದಿಯ ಕೈಯಲ್ಲಿದ್ದ ರೈಫಲ್ ಅನ್ನು ಕಸಿಯಲು ಗ್ರಾಮಸ್ಥರು ಯತ್ನಿಸಿದ್ದರು. ಗುಂಪನ್ನು ನಿಯಂತ್ರಿಸಲು ಗುಂಡಿನ ದಾಳಿ ನಡೆಸಲು ಆದೇಶ ನೀಡಲಾಗಿದ್ದು, ಈ ವೇಳೆ ಒಬ್ಬರು ಗ್ರಾಮಸ್ಥರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದು, ರಾಂಚಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಾರ್ಖಂಡ್ ಮುಖ್ಯ ಚುನಾವಣಾಧಿಕಾರಿ ವಿನಯ್ ಚೌಬೆ ಮಾಹಿತಿ ನೀಡಿದ್ದಾರೆ. ಈ ಬೂತ್ ನಲ್ಲಿ ಮತದಾನ ಸ್ಥಗಿತಗೊಳಿಸಲಾಗಿದೆ. ಈ ಬೂತ್ ಮರು ಮತದಾನ ನಡೆಯಲಿದ್ದು, ದಿನಾಂಕವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.