ಪೊಲೀಸರಿಗೆ ಬೆಂಬಲಿಸಿ ವಿದ್ಯಾರ್ಥಿಗಳ ವಿಜಯೋತ್ಸವ


Team Udayavani, Dec 8, 2019, 3:00 AM IST

poliarige

ಚಾಮರಾಜನಗರ: ತೆಲಂಗಾಣದಲ್ಲಿ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಅಮಾನವೀಯವಾಗಿ ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಅಲ್ಲಿನ ಪೋಲಿಸರು ಎನ್‌ಕೌಂಟರ್‌ ಮಾಡಿರುವುದನ್ನು ಬೆಂಬಲಿಸಿ, ಪೊಲೀಸರಿಗೆ ನೈತಿಕ ಸ್ಥೈರ್ಯ ತುಂಬುವ ಸಲುವಾಗಿ ನಗರದ ವಿದ್ಯಾ ವಿಕಾಸ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿಜಯೋತ್ಸವ ಆಚರಣೆ ಮಾಡಿ, ಸಿಹಿ, ಹಂಚಿ ಸಂಭ್ರಮಿಸಿದರು.

ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಕಾಲೇಜಿನ ಅವರಣದಲ್ಲಿ ವಿದ್ಯಾರ್ಥಿಗಳು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಯುವಶಕ್ತಿ ಪರಿಷತ್‌ನ ಸಹಯೋಗದಲ್ಲಿ ಸಮಾವೇಶಗೊಂಡರು. ಆತ್ಯಾಚಾರ ಆರೋಪಿಗಳನ್ನು ಕೊಂದಿರುವ ಪೊಲೀಸರಿಗೆ ನಮ್ಮ ಬೆಂಬಲ, ಪೊಲೀಸ್‌ ಅಧಿಕಾರಿಗಳ ಕಾರ್ಯಕ್ಕೆ ಜಯವಾಗಲಿ, ಅತ್ಯಾಚಾರಿಗಳಿಗೆ ಶಿಕ್ಷೆಯಾಗಲಿ, ಕನ್ನಡಿಗ ಪೊಲೀಸ್‌ ಅಧಿಕಾರಿ ವಿಶ್ವನಾಥ್‌ ಸಜ್ಜನ ಅವರಿಗೆ ಜಯವಾಗಲಿ ಎಂಬಿತ್ಯಾದಿ ಘೋಷಣೆ ಕೂಗಿದರು. ಬಳಿಕ ಸಿಹಿ ಹಂಚಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿ ಮುಖ್ಯ ಸಂಚಾಲಕಿ ರಾಜಯೋಗಿನಿ ಬಿ.ಕೆ. ದಾನೇಶ್ವರಿ, ಪಶುವೈದ್ಯೆಯನ್ನು ನಾಲ್ವರು ಯುವಕರು ಅಮಾನುಷವಾಗಿ ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದರು. ಇವರು ಮಾಡಿದ ಕರ್ಮಕ್ಕೆ ಭಗವಂತನೇ ಶಿಕ್ಷೆ ವಿಧಿಸಿದ್ದಾನೆ. ಪೊಲೀಸ್‌ ಅಧಿಕಾರಿಗಳ ಮೂಲಕ ಅವರು ಪಾಪದ ಕೆಲಸಕ್ಕೆ ತಕ್ಕ ಶಿಕ್ಷೆಯನ್ನು ನೀಡುವಂತೆ ಪ್ರೇರಣೆ ನೀಡಿದ್ದಾನೆ. ಇಂಥ ಕೃತ್ಯಗಳು ನಿಲ್ಲಬೇಕು. ಮನುಷ್ಯ ಕುಲದಲ್ಲಿ ಹುಟ್ಟಿರುವ ನಾವೆಲ್ಲರು ಶಾಂತಿ ಸಹಬಾಳ್ವೆ ಹಾಗೂ ಪರಸ್ಪರ ಸಹೋದರತ್ವದಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಮಹಿಳೆಯ ಮೇಲಿನ ಅತ್ಯಾಚಾರ ಸಮಾಜವೇ ತಲೆತಗ್ಗಿಸುವಂತಹ ವಿಚಾರವಾಗಿದೆ. ಕಳೆದ 8 ದಿನಗಳ ಹಿಂದೆ ಈ ಕೃತ್ಯವನ್ನು ನೋಡಿ, ಕೇಳಿ ಮನಸ್ಸಿಗೆ ಬಹಳ ಬೇಸರವಾಗಿತ್ತು. ಅದರೆ, ಇಂದು ಪೊಲೀಸರು ಮಾಡಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಪಾಪಿಗಳು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸಮಾಧಾನ ತಂದಿದೆ. ಇಂಥ ಪ್ರಕರಣಗಳಿಗೆ ತಕ್ಕ ಉತ್ತರ ನೀಡಬೇಕು ಎಂದರು.

ಯುವಶಕ್ತಿ ಪರಿಷತ್‌ನ ಅಧ್ಯಕ್ಷ ಎಲ್‌. ಸುರೇಶ್‌ ಮಾತನಾಡಿ, ಕನ್ನಡಿಗ ಪೊಲೀಸ್‌ ಅಧಿಕಾರಿ ವಿಶ್ವನಾಥ್‌ ಸಜ್ಜನರ್‌ ಸಾಹಸದ ಕೆಲಸ ಮಾಡಿದ್ದಾರೆ. ನಾಲ್ವರು ಕ್ರೂರಿಗಳು ಪೊಲೀಸರಿಂದ ತಪ್ಪಿಸಿಕೊಂಡು ಮತ್ತೆ ತಮ್ಮ ಚಾಳಿಯನ್ನು ಮುಂದುವರಿಸಲು ಹೊಂಚು ಹೋಗುತ್ತಿದ್ದರು. ಇವರು ತಪ್ಪಿಸಿಕೊಳ್ಳದಂತೆ ಎನ್‌ಕೌಂಟರ್‌ ಮಾಡಿ ಕೊಂದಿರುವ ಪೊಲೀಸರ ಸಾಹಸದ ಕೆಲಸವನ್ನು ಇಡೀ ಪ್ರಪಂಚವೇ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಎಸ್‌.ಎನ್‌. ಗೌಡ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣಕುಮಾರ್‌, ಉಪನ್ಯಾಸಕರಾದ ರಾಜೇಶ್ವರಿ, ಕುಸುಮಾ, ಕುಮಾರಿ, ಅನುರಾಜ್‌, ಓಂ ಶಾಂತಿ ಬಿ.ಕೆ. ಆರಾಧ್ಯ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.