“ಸೋತವರಿಗೆ ಸಚಿವ ಸ್ಥಾನ ಹೈಕಮಾಂಡ್‌ಗೆ ಬಿಟ್ಟಿದ್ದು’
Team Udayavani, Dec 8, 2019, 3:00 AM IST
ಬೆಂಗಳೂರು: ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ ಕಾಲೋನಿ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.
ರಾಜೀನಾಮೆ ನೀಡಿದ ಶಾಸಕರಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ. ಉಪ ಚುನಾವಣೆಯಲ್ಲಿ ಗೆದ್ದವರು ಸಚಿವರಾಗುವುದು ನಿಶ್ಚಿತ. ಸೋತವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದರು. ಸ್ಥಿರ ಹಾಗೂ ಅಭಿವೃದ್ಧಿ ಪರ ಸರ್ಕಾರಕ್ಕಾಗಿ ರಾಜ್ಯದ ಜನರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಉಪಚುನಾವಣೆ ಫಲಿತಾಂಶದಲ್ಲಿ ನಮಗೆ ಹೆಚ್ಚಿನ ಸ್ಥಾನ ಬರಲಿದೆ ಎಂಬ ವಿಶ್ವಾಸವೂ ಇದೆ.
15 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಕನಿಷ್ಠ 12 ಕ್ಷೇತ್ರವಾದರೂ ಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ ಎಂದರು. ವಿರೋಧ ಪಕ್ಷದವರು ಏನೇ ಅಪಪ್ರಚಾರ ಮಾಡಿದರೂ ಮತದಾರರು ಬಿಜೆಪಿಗೆ ಒಲವು ತೋರಿಸಿದ್ದಾರೆ. ಸುಸ್ಥಿರ ಹಾಗೂ ಅಭಿವೃದ್ಧಿ ಪರ ಸರ್ಕಾರವನ್ನು ಜನರು ಬಯಸಿದ್ದಾರೆ. ಉಪಚುನಾವಣೆ ಫಲಿತಾಂಶ ನಮಗೆ ಇನ್ನಷ್ಟು ಶಕ್ತಿ ಹಾಗೂ ಧೈರ್ಯ ತುಂಬಲಿದೆ. ಮುಂದಿನ ಮೂರೂವರೆ ವರ್ಷಗಳ ಅವಧಿಗೆ ಬಿಜೆಪಿ ಸರ್ಕಾರ ಅಧಿಕಾರ ನಡೆಸಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.