ಕನ್ನಡ ಫಲಕ ಹಾಕಿ ಅಂತ ಕಿರುಕುಳ ಕೊಡ್ಬೇಡಿ!
Team Udayavani, Dec 8, 2019, 3:09 AM IST
ಬೆಂಗಳೂರು: “ಕನ್ನಡ ನಾಮಫಲಕ ಅಳವಡಿಸಿಕೊಳ್ಳಿ ಎಂದು ಉದ್ದಿಮೆಗಳಿಗೆ ಕಿರುಕುಳ ನೀಡಬೇಡಿ’ ಎಂದು ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್.ಜನಾರ್ದನ್, ಮೇಯರ್ ಎಂ.ಗೌತಮ್‌ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲ, ನಗರದಲ್ಲಿ ಮೂಲಸೌಕರ್ಯ ಸಮಸ್ಯೆಗಳು ತಾಂಡವವಾಡುತ್ತಿದ್ದು, ಮೊದಲು ಈ ಸಮಸ್ಯೆಗಳನ್ನು ಪರಿಹರಿಸಿ ಎಂದು ನಗರದ ಸಮಸ್ಯೆಗಳನ್ನು ಪಟ್ಟಿ ಮಾಡಿ ಕಳುಹಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ದಿಮೆಗಳು, ವಾಣಿಜ್ಯ ಕಟ್ಟಡಗಳು ಹಾಗೂ ಮಾಲ್‌ಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ಅಳವಡಿಸಿಕೊಳ್ಳಬೇಕು ಎನ್ನುವ ನಿಯಮದ ಹಿನ್ನೆಲೆಯಲ್ಲಿ ಈ ಪತ್ರ ಬರೆದಿರುವ ಅವರು, ಡಾಂಬರೀಕರಣ ಮಾಡಿದ ಒಂದು ವಾರದಲ್ಲಿ ರಸ್ತೆಗಳು ಹಾಳಾಗುವಷ್ಟು ಚೆನ್ನಾಗಿ ಗುತ್ತಿಗೆದಾರರು ಕೆಲಸ ಮಾಡುತ್ತಿದ್ದಾರೆ. ಮಳೆ ಅನಾಹುತಗಳನ್ನು ತಡೆಯಲು ಬಿಬಿಎಂಪಿಗೆ ಆಗುತ್ತಿಲ್ಲ ಮೊದಲು ಈ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿ’ ಎಂದು ವ್ಯಂಗ್ಯವಾಡಿದ್ದಾರೆ.
ಉದ್ದಿಮೆಗಳು ಈಗಾಗಲೇ ಸಾಕಷ್ಟು ಸಮಸ್ಯೆ ಎದುರಿಸುತ್ತಿವೆ. ಇದರ ನಡುವೆ ಉದ್ದಿಮೆಗಳಿಗೆ ಕನ್ನಡ ನಾಮಫಲಕ ಅಳವಡಿಸಿಕೊಳ್ಳುವ ಕಿರುಕುಳ ನೀಡಬೇಡಿ ಎಂದಿದ್ದಾರೆ. ಅಲ್ಲದೆ, ಉದ್ದಿಮೆದಾರರಿಗೆ ಈ ನಿಯಮ ಪಾಲಿಸುವುದಕ್ಕೆ ಸೂಚಿಸುತ್ತೇವೆ. ಆದರೂ ನಗರದಲ್ಲಿ 10 ಲಕ್ಷ ಕೈಗಾರಿಕೋದ್ಯಮಿಗಳು ಹಾಗೂ 20 ಲಕ್ಷ ವ್ಯಾಪಾರೋದ್ಯಮಿಗಳಿದ್ದು, ಈ ನಿಯಮವನ್ನು ಅಳವಡಿಸಿಕೊಳ್ಳಲು 2020ರ ಎಪ್ರಿಲ್30ರ ವರೆಗೆ ಕಾಲಾವಕಾಶ ನೀಡಬೇಕು ಎಂದು ಹೇಳಿದ್ದಾರೆ.
ಮೊದಲು ಈ ಸಮಸ್ಯೆಗಳತ್ತ ನೋಡಿ: ನಗರದ ಕೆಲವು ಸಮಸ್ಯೆಗಳನ್ನು ಪಟ್ಟಿ ಮಾಡಿರುವ ಎಫ್ಕೆಸಿಸಿ ಅಧ್ಯಕ್ಷರು, ಈ ಸಮಸ್ಯೆಗಳತ್ತ ಗಮನ ನೀಡಿ, ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಿ ಎಂದು ಮೇಯರ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ರಸ್ತೆ ಗುಂಡಿಗಳಿಂದ ನಗರದಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ ಘನತ್ಯಾಜ್ಯ ವಿಲೇವಾರಿ ಸಮಸ್ಯೆಯಿಂದ ಸಾಂಕ್ರಾಮಿಕ ರೋಗ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಮಳೆ ಬಂದಾಗ ಉಂಟಾಗುವ ಅನಾಹುತಗಳನ್ನು ತಡೆಯುವಲ್ಲಿ ಬಿಬಿಎಂಪಿ ವಿಫಲವಾಗಿದೆ ಮಳೆ ನೀರು ರಸ್ತೆಗಳಲ್ಲಿನ ಕೊಳಚೆ ನೀರಿನೊಂದಿಗೆ ಸೇರಿಕೊಂಡು ರಸ್ತೆಗಳು ಹೊಂಡವಾಗುತ್ತಿದೆ.
ನಗರದಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪಾಲಿಕೆ ನಿಯಮ ರೂಪಿಸಿದೆ. ಈ ನಿಯವನ್ನು ನಾವು ಪಾಲಿಸುತ್ತಿದ್ದೇವೆ. ಇದರಲ್ಲಿ ಕಿರುಕುಳ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕನ್ನಡ ನಾಮಫಲಕ ಅಳವಡಿಸಿಕೊಳ್ಳಲು ಕಾಲಾವಕಾಶವೂ ನೀಡಲಾಗಿದೆ.
-ವಿಜಯೇಂದ್ರ, ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.