ಆರಂಭಗೊಳ್ಳದ ಸರಕಾರಿ ಬೆಂಬಲ ಬೆಲೆ ಭತ್ತ ಖರೀದಿ ಕೇಂದ್ರ
ರೈತರ ಮನವಿಗೆ ಸರಕಾರದ ಸ್ಪಂದನೆ ಇಲ್ಲ
Team Udayavani, Dec 8, 2019, 5:26 AM IST
ಕೋಟ: ಮುಂಗಾರು ಕಟಾವು ಪೂರ್ಣಗೊಂಡು ಹಿಂಗಾರು ಬಿತ್ತನೆ ಆರಂಭವಾದರೂ ಸರಕಾರದ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕೇಂದ್ರಗಳಿನ್ನೂ ಆರಂಭವಾಗಿಲ್ಲ. ಸಾಮಾನ್ಯ ವರ್ಗದ ಭತ್ತ ಕ್ವಿಂಟಾಲ್‌ಗೆ 1,815 ರೂ. ಮತ್ತು ಎ ಗ್ರೇಡ್‌ಗೆ 1,835 ರೂ. ಬೆಂಬಲ ಬೆಲೆಯನ್ನು ಸರಕಾರ ನಿಗದಿಪಡಿಸಿದೆ. ಭತ್ತವನ್ನು ಖಾಸಗಿ ಮಿಲ್‌ಗಳು ಕಡಿಮೆ ಬೆಲೆಗೆ ಖರೀದಿಸುತ್ತವೆ. ಆದ್ದರಿಂದ ಜಿಲ್ಲೆಯ ಹಲವು ಕಡೆ ಸರಕಾರವೇ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಿ ಬೆಲೆ ಸ್ಥಿರವಾಗುವಂತೆ ಮಾಡಬೇಕು ಎನ್ನುವುದು ರೈತರ ಬೇಡಿಕೆ. ಆದರಂತೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಕೃಷಿ ಮಾರುಕಟ್ಟೆ, ಜಿಲ್ಲಾ ಆಹಾರ ನಿಗಮದ ಮೂಲಕ ಬೆಂಬಲ ಬೆಲೆ ಕೇಂದ್ರ ತೆರೆಯುವಂತೆ ಸರಕಾರಕ್ಕೆ ತಿಂಗಳ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು. ಅದಿನ್ನೂ ಈಡೇರಿಲ್ಲ.
ಊಟಕ್ಕಿಲ್ಲದ ಉಪ್ಪಿನಕಾಯಿ
ಪ್ರತಿ ತಾಲೂಕಿನಲ್ಲೂ ಗೋದಾಮು ಸ್ಥಾಪಿಸಿ ಖರೀದಿ ಕೇಂದ್ರ ತೆರೆಯಬೇಕು. ಆಗ ಖಾಸಗಿಯವರು ಬೆಲೆ ಹೆಚ್ಚಳ ಮಾಡುತ್ತಾರೆ. ಇದರಿಂದ ಪ್ರಯೋಜನ ವಾಗುತ್ತದೆ ಎನ್ನುವುದು ರೈತರ ವಾದ. ಆದರೆ ಈ ಬಗ್ಗೆ ಸರಕಾರ ಸರಿಯಾಗಿ ಸ್ಪಂದಿಸಿಲ್ಲ. ಹೀಗಾಗಿ ಹೆಚ್ಚಿನ ರೈತರು ಫಸಲನ್ನು ಈಗಾಗಲೇ ಖಾಸಗಿಯವರಿಗೆ ಮಾರಾಟ ಮಾಡಿದ್ದಾರೆ. ಮುಂದೆ ಸರಕಾರ ಬೆಂಬಲ ಬೆಲೆ ಕೇಂದ್ರ ಆರಂಭಿಸಿದರೂ ಅದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗುತ್ತದೆ. ದ.ಕ. ಜಿಲ್ಲೆಯಲ್ಲಿ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ರೈತರಿಂದ ಬೇಡಿಕೆ ಇಲ್ಲದ ಕಾರಣ ಮನವಿ ಸಲ್ಲಿಕೆಯಾಗಿರಲಿಲ್ಲ.
ಕರಾವಳಿ ರೈತರ ಮೇಲೆ ಯಾಕಿಷ್ಟು ತಾತ್ಸಾರ?
ಕರಾವಳಿಯ ರೈತರ ಸಮಸ್ಯೆಗಳ ಬಗ್ಗೆ ಸರಕಾರಕ್ಕೆ ಕಾಳಜಿ ಇಲ್ಲ. ಇಲ್ಲಿಯ ಜನಪ್ರತಿನಿಧಿಗಳು ರೈತರ ಧ್ವನಿಯನ್ನು ಸರಕಾರಕ್ಕೆ ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ. ಇದೇ ಕಾರಣಕ್ಕೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆ, ವಾರಾಹಿ ಮುಂತಾದ ರೈತಪರ ಯೋಜನೆಗಳು ಹಳ್ಳ ಹಿಡಿದಿವೆ. ಈ ಬಾರಿ ಜಿಲ್ಲಾಡಳಿತವು ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಸರಕಾರ ಗಂಭೀರವಾಗಿ ಪರಿಗಣಿಸದಿರುವುದು ದುರಂತ ಎಂದು ಕೋಟ ಭತ್ತ ಬೇಸಾಯಗಾರ ಮೋಹನ್ ಕುಮಾರ್ ಹೇಳುತ್ತಾರೆ.
ನಿಯಮದಂತೆ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಶೀಘ್ರ ಅನುಮತಿ ಸಿಗುವ ಭರವಸೆ ಇದ್ದು, ಅನಂತರ ಮುಂದಿನ ಪ್ರಕ್ರಿಯೆ ನಡೆಯಲಿದೆ.
– ಭಾರತಿ, ಎಪಿಎಂಸಿ ಕಾರ್ಯದರ್ಶಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.