ಉನ್ನಾವ್ ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ, ಮನೆ ನಿರ್ಮಾಣ: ಯೋಗಿ ಅದಿತ್ಯನಾಥ್
Team Udayavani, Dec 8, 2019, 8:07 AM IST
ಲಕ್ನೋ: ದೆಹಲಿಯ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ 25 ಲಕ್ಷ ರೂ . ಪರಿಹಾರ ನೀಡಿದೆ . ಮಾತ್ರವಲ್ಲದೆ ಪ್ರಕರಣದ ತ್ವರಿತ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಶನಿವಾರ ಸಂಜೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಸಚಿವ ಸ್ವಾಮಿ ಪ್ರಸಾದ ಮೌರ್ಯ ಭೇಟಿ ನೀಡಿ “ ಸಂತ್ರಸ್ತೆಗೆ ಶೀಘ್ರವೇ ನ್ಯಾಯಾ ದೊರಕಿಸಿಕೊಡಲಾಗುವುದು. ಇದಕ್ಕಾಗಿ ತ್ವರಿತ ವಿಚಾರಣಾ ನ್ಯಾಯಾಲಯವನ್ನು ಸ್ಥಾಪಿಸಲು ಯೋಗಿ ಅದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಮಾತ್ರವಲ್ಲದೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಕುಟುಂಬಕ್ಕೆ 25 ಲಕ್ಷ ರೂ. ನೀಡಲಾಗುವುದು ಎಂದರು.
ಜೊತೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ಸಂತ್ರಸ್ತೆ ಕುಟುಂಬಕ್ಕೆ ಮನೆಯೊಂದನ್ನು ನಿರ್ಮಿಸಿಕೊಡಲಾಗುವುದು ಎಂದರು. ಸಂತ್ರಸ್ತೆಯ ಮನೆಗೆ ಪ್ರಿಯಾಂಕ ಗಾಂಧಿ, ಉತ್ತರ ಪ್ರದೇಶ ರಾಜ್ಯ ಸಚಿವ ಕಮಲ್ ರಾಣಿ ವರುಣ್ ಮುಂತಾದ ಅನೇಕರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಿಯಾಂಕ ಗಾಂಧಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಂತ್ರಸ್ತೆಗೆ ನಾವು ನ್ಯಾಯಾ ಕೊಡಿಸಲಾಗಲಿಲ್ಲ. ಇದು ನಮ್ಮೆಲ್ಲರ ವೈಫಲ್ಯ, ನಾವು ಕೂಡ ಇದರಲ್ಲಿ ತಪ್ಪಿತಸ್ಥರು , ಸಂತ್ರಸ್ತೆಗೆ ಶೀಘ್ರವಾಗಿ ನ್ಯಾಯಾ ಕೊಡಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.