ಸಿಎಂ ಅದಿತ್ಯನಾಥ್ ಭೇಟಿ ನೀಡುವವರೆಗೂ ಅಂತ್ಯಸಂಸ್ಕಾರ ಮಾಡಲ್ಲ: ಉನ್ನಾವ್ ಸಂತ್ರಸ್ತೆಯ ಕುಟುಂಬ
Team Udayavani, Dec 8, 2019, 1:00 PM IST
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಭೇಟಿ ನೀಡುವವರೆಗೂ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಶನಿವಾರ ಸಂಜೆ ಸಂತ್ರಸ್ತೆಯ ಮೃತದೇಹ ಉನ್ನಾವೋ ಗ್ರಾಮವನ್ನು ತಲುಪಿದ್ದು , ಇಂದು ಅಂತ್ಯಸಂಸ್ಕಾರ ನೆರವೇರಿಸಬೇಕಿತ್ತು. ಆದರೇ ಮುಖ್ಯಮಂತ್ರಿ ಭೇಟಿ ನೀಡುವವರೆಗೂ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವುದಿಲ್ಲವೆಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.
ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದರು. ಆ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟದ ಸಚಿವರು ಸಂತ್ರಸ್ತೆಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದರು.ಈ ವೇಳೆ ಗ್ರಾಮಾದ್ಯಂತ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಮಾತ್ರವಲ್ಲದೆ ಸರ್ಕಾರದ ವತಿಯಿಂದ 25 ಲಕ್ಷ ರೂ ಪರಿಹಾರ ಹಾಗೂ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಡುವ ಕುರಿತು ಭರವಸೆ ಮಾತನಾಡಿದ್ದರು.
ಅತ್ಯಾಚಾರ ನಡೆಸಿ ಆ ಬಳಿಕ ಬೆಂಕಿ ಹಚ್ಚಿ ಕೊಲೆಗೈದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗುವ ಭರವಸೆಯನ್ನು ಯೋಗಿ ಆದಿತ್ಯನಾಥ್ ನೀಡಿದ ಬಳಿಕವೇ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.