ಡಂಪಿಂಗ್‌ ಯಾರ್ಡ್‌ ಆಗುತ್ತಿರುವ ಕೆರೆ, ಕಡಲ ಕಿನಾರೆ

ಗಂಗೊಳ್ಳಿಯಲ್ಲಿ ದಿನೇ ದಿನೇ ಬಿಗಡಾಯಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆ; ಘನ ತ್ಯಾಜ್ಯ ಘಟಕ ಪುನರಾರಂಭಕ್ಕೆ ಆಗ್ರಹ

Team Udayavani, Dec 9, 2019, 5:27 AM IST

0812KDPP2

ಗಂಗೊಳ್ಳಿ: ಇಲ್ಲಿನ ಬೀಚ್‌ ಬಳಿ ಚರ್ಚ್‌ ರಸ್ತೆಗೆ ತಾಗಿಕೊಂಡಿರುವ ಮಡಿವಾಳರ ಕೆರೆ, ಗಂಗೊಳ್ಳಿಯ ಕಡಲ ಕಿನಾರೆಗಳು, ಸೇರಿದಂತೆ ರಸ್ತೆ ಬದಿಯ ಚರಂಡಿಗಳೆಲ್ಲ ಕಸ ಎಸೆಯುವ ಡಂಪಿಂಗ್‌ ಯಾರ್ಡ್‌ಗಳಾಗಿ ಮಾರ್ಪಾಡಾಗುತ್ತಿವೆ. ಇದಕ್ಕೆ ಪ್ರಮುಖ ಕಾರಣ ಗಂಗೊಳ್ಳಿ ಪಂಚಾಯತ್‌ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತಗೊಂಡಿರುವುದು.

ಗಂಗೊಳ್ಳಿ ಗ್ರಾ.ಪಂ.ನಿಂದ 2018ರಲ್ಲಿ ಆರಂಭವಾದ ಘನ ತ್ಯಾಜ್ಯ ವಿಲೇವಾರಿ ಘಟಕ ಕಳೆದ ಕೆಲ ತಿಂಗಳಿನಿಂದ ಸ್ಥಗಿತಗೊಂಡಿರುವುದರಿಂದ ಈಗ ಗ್ರಾಮದಲ್ಲಿ ಕಸ ವಿಲೇವಾರಿಯೇ ದೊಡ್ಡ ಸಮಸ್ಯೆಯಾಗಿದೆ. ಎಲ್ಲೆಂದರಲ್ಲಿ ಕಸ ಎಸೆಯುವ ಬೆಳವಣಿಗೆ ನಡೆಯುತ್ತಿದೆ. ರಸ್ತೆ ಬದಿ, ಕೆರೆ, ಕಸ ಎಸೆಯುವ ಡಂಪಿಂಗ್‌ ಯಾರ್ಡ್‌ಗಳಾಗುತ್ತಿದೆ. ಇದಲ್ಲದೆ ಮೀನುಗಾರಿಕಾ ಪ್ರದೇಶ ವಾಗಿರುವುದರಿಂದ ಕಸ ವಿಲೇವಾರಿ ಇಲ್ಲಿನ ಬಹುದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ.

ತ್ಯಾಜ್ಯದಿಂದ ತುಂಬಿದ ಕೆರೆ
ಮಡಿವಾಳರ ಕೆರೆಯಂತೂ ಈಗ ಕಸ ಎಸೆಯುವ ಡಂಪಿಂಗ್‌ ಯಾಡೇì ಆಗಿ ಬಿಟ್ಟಿದೆ. ಕೆರೆಯ ಸುತ್ತಲೂ ತ್ಯಾಜ್ಯ, ಪ್ಲಾಸ್ಟಿಕ್‌ ತುಂಬಿ ಹೋಗಿವೆ. ಇದು ರಸ್ತೆಯ ಬದಿಯೇ ಇರುವ ಕೆರೆಯಾಗಿರುವುದರಿಂದ ಅಪರಿಚಿತರು ವಾಹನದಲ್ಲಿ ಬಂದು ಕಸ ಎಸೆದು ಹೋಗುತ್ತಿರುವುದು ಕಂಡು ಬರುತ್ತಿದೆ. ಕೆರೆಯ ಸಮೀಪವೇ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿದ್ದು ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಇದೇ ಮಾರ್ಗವಾಗಿ ಶಾಲೆಗೆ ಬರುತ್ತಾರೆ.

ಇನ್ನು ಗಂಗೊಳ್ಳಿಯ ಕಡಲ ಕಿನಾರೆಯುದ್ದಕ್ಕೂ ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಕಸದ ರಾಶಿಯೇ ಕಂಡು ಬರುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರು ಅಸಹ್ಯ ವಾಸನೆಯಿಂದ ಮೂಗು ಮುಚ್ಚಿಕೊಂಡೇ ಇರಬೇಕಾದ ಸ್ಥಿತಿ. ಇನ್ನು ಜಾನುವಾರುಗಳು, ನಾಯಿಗಳೆಲ್ಲ ಇಲ್ಲಿ ಎಸೆಯಲಾದ ಆಹಾರ ತಿನ್ನಲು ಬರುತ್ತಿದ್ದು, ಅದರ ಆರೋಗ್ಯವು ಹದಗೆಡುವ ಸಾಧ್ಯತೆಯೂ ಇದೆ.

ಅತಿದೊಡ್ಡ ಗ್ರಾಮ
ಗಂಗೊಳ್ಳಿಯು ಕುಂದಾಪುರ ತಾಲೂಕಿ ನಲ್ಲಿಯೇ ದೊಡ್ಡ ಗ್ರಾಮವಾಗಿದೆ. 1 ಸಾವಿರ ಎಕರೆ ವಿಸ್ತೀರ್ಣದಲ್ಲಿ 3,041 ಮನೆಗಳಿದ್ದು, 13 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಸುಮಾರು 200 ಕ್ಕೂ ಮಿಕ್ಕಿ ಅಂಗಡಿ ಸೇರಿದಂತೆ ವಾಣಿಜ್ಯ ಮಳಿಗೆಗಳಿವೆ. 850 ಮನೆಗಳಿಂದ ಕಸ ಸಂಗ್ರಹ ಮಾಡುತ್ತಿದ್ದಾಗ ದಿನಕ್ಕೆ 2 ಕ್ವಿಂಟಾಲ್‌ ಕಸ ಸಂಗ್ರಹವಾಗುತ್ತಿತ್ತು. ಈಗ ಇದನ್ನು ಮತ್ತಷ್ಟು ವಿಸ್ತರಿಸಿದರೆ ಇನ್ನೂ ಹೆಚ್ಚು ಕಸ ಸಂಗ್ರಹವಾಗಬಹುದು.

ಶೀಘ್ರ ವಿಲೇವಾರಿ ಘಟಕ ಆರಂಭ
ಕೆರೆಗಳು, ರಸ್ತೆ ಬದಿ, ಬೀಚ್‌ ಬಳಿ ಕಸ ಎಸೆಯದಂತೆ ಈಗಾಗಲೇ ಗ್ರಾಮಸ್ಥರಿಗೆ ಮನವಿ ಮಾಡಿಕೊಳ್ಳಲಾಗಿದೆ. ಇದಲ್ಲದೆ ಪಂಚಾಯತ್‌ ವತಿಯಿಂದಲೇ ಈ ಎಲ್ಲ ಪ್ರದೇಶಗಳಲ್ಲಿ ಎಸೆಯಲಾದ ತ್ಯಾಜ್ಯ ರಾಶಿಯನ್ನು ಕೂಡ ವಿಲೇವಾರಿ ಮಾಡಲಾಗಿದೆ. ಘನ ತ್ಯಾಜ್ಯ ವಿಲೇವಾರಿ ಘಟಕವು ಕಸ ಸಂಗ್ರಹ ವಾಹನ ಹಾಗೂ ಅನುದಾನ ಕೊರತೆಯಿಂದ ಸ್ಥಗಿತಗೊಂಡಿದ್ದು, ಶೀಘ್ರ ಪುನಾರಂಭಗೊಳ್ಳಲಿದೆ. ಪಂಚಾಯತ್‌ ಹಾಗೂ ಒಬ್ಬರು ದಾನಿಗಳ ನೆರವಿನಿಂದ 4 ಲಕ್ಷ ರೂ. ವೆಚ್ಚದಲ್ಲಿ ವಾಹನವೊಂದನ್ನು ಆದಷ್ಟು ಬೇಗ ಖರೀದಿ ಮಾಡಿ ಕಸ ಸಂಗ್ರಹಿಸಲಾಗುವುದು. ಈ ಬಗ್ಗೆ ಜಿ.ಪಂ. ಸಿಇಒ ಅವರ ಗಮನಕ್ಕೂ ತರಲಾಗಿದೆ. ತ್ಯಾಜ್ಯ ವಿಲೇವಾರಿ ತಡೆಯಲು ಕೂಡಲೇ ಸೂಕ್ತ ಕ್ರಮಕೈಗೊಳ್ಳಲಾಗುವುದು.
– ಶ್ರೀನಿವಾಸ ಖಾರ್ವಿ,
ಅಧ್ಯಕ್ಷರು, ಗಂಗೊಳ್ಳಿ ಗ್ರಾ. ಪಂ.

ಸೊಳ್ಳೆ ಉತ್ಪತ್ತಿ ಕೇಂದ್ರ
ಕೆರೆಗಳು, ಕಡಲ ಕಿನಾರೆ, ರಸ್ತೆ ಬದಿಯ ಚರಂಡಿಗಳಲ್ಲಿ ಪ್ಲಾಸ್ಟಿಕ್‌, ಆಹಾರ, ಕೊಳೆತ ತರಕಾರಿ ಮತ್ತಿತರ ವಸ್ತುಗಳನ್ನು ಎಸೆಯುತ್ತಿರುವುದರಿಂದ ಈ ಪ್ರದೇಶಗಳು ಸೊಳ್ಳೆ ಉತ್ಪಾದನಾ ಕೇಂದ್ರಗಳಾಗಿ ಬಿಟ್ಟಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಕೂಡ ಹರಡುವ ಭೀತಿ ಇಲ್ಲಿನ ಗ್ರಾಮಸ್ಥರಲ್ಲಿ ಆವರಿಸಿದೆ.

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.