ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಗೆ ಮೊದಲ ಗೆಲುವು; ಅಧಿಕೃತ ಘೋಷಣೆಯಷ್ಟೇ ಬಾಕಿ
Team Udayavani, Dec 9, 2019, 10:14 AM IST
ಉತ್ತರಕನ್ನಡ: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 13 ಮಂದಿ ಅನರ್ಹ ಶಾಸಕರು ಸ್ಪರ್ಧಿಸಿದ್ದ ಕ್ಷೇತ್ರಗಳ ಎತಎಣಿಕೆಯಲ್ಲಿ ಉತ್ತರಕನ್ನಡದ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗು ಬೀರಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎಂದು ವರದಿ ತಿಳಿಸಿದೆ.
ಯಲ್ಲಾಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತಎಣಿಕೆಯ 14 ಸುತ್ತಿನಲ್ಲಿಯೂ ಮುನ್ನಡೆ ಕಾಯ್ದುಕೊಂಡಿದ್ದ ಶಿವರಾಮ್ ಹೆಬ್ಬಾರ್ 27 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡು, ಮೂರನೇ ಸುತ್ತಿನ ಮತಎಣಿಕೆಯಷ್ಟೇ ಬಾಕಿ ಉಳಿದಿದೆ. ಕಾಂಗ್ರೆಸ್ ನ ಭೀಮಣ್ಣ ನಾಯ್ಕ್ ಪರಾಜಯಗೊಂಡಿದ್ದಾರೆ.
ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ನಿಂದ ಭೀಮಣ್ಣ ನಾಯ್ಕ್ ಸ್ಪರ್ಧಿಸಿದ್ದು, ಎ.ಚೈತ್ರಾ ಗೌಡ ಜೆಡಿಎಸ್ ನಿಂದ ಕಣಕ್ಕಿಳಿದಿದ್ದರು. ಅಲ್ಲದೇ ಜೈತುನಾಬಿ ಜಿಗಳೂರು (ಕರ್ನಾಟಕ ರಾಷ್ಟ್ರ ಸಮಿತಿ), ಉತ್ತಮ ಪ್ರಜಾಕೀಯ ಪಕ್ಷದ ಸುನಿಲ್ ಪವಾರ್, ಪಕ್ಷೇತರರಾಗಿ ಚಿದಾನಂದ ಹರಿಜನ, ಮಹೇಶ ಹೆಗಡೆ ಸ್ಪರ್ಧಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.