ನಾಯಕರ ಪ್ರತಿಷ್ಠೆಗೆ ಬೆಲೆ ತೆತ್ತ ಕಾಂಗ್ರೆಸ್‌


Team Udayavani, Dec 10, 2019, 3:10 AM IST

nayakara

ಬೆಂಗಳೂರು: ಕೂಸು ಹುಟ್ಟುವ ಮುನ್ನ ಕುಲಾವಿ ಎಂಬಂತೆ ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರದ ಪತನದ ಕನಸು ಕಂಡಿದ್ದ ಕಾಂಗ್ರೆಸ್‌ ನಾಯಕರಿಗೆ ಮತದಾರ “ಶಾಕ್‌’ ನೀಡಿದ್ದು, ಪಕ್ಷದ ನಾಯಕರ ನಡುವಿನ ಪ್ರತಿಷ್ಠೆಗೆ ಹೀನಾಯ ಸೋಲು ಕಾಣುವಂತಾಗಿದೆ. ಪಕ್ಷ ಕಳೆದುಕೊಂಡಿದ್ದ 12 ಸ್ಥಾನಗಳ ಪೈಕಿ 2 ಸ್ಥಾನ ಮಾತ್ರ ಗೆದ್ದು ನೈತಿಕ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಲೆಕೊಡುವಂತಾಯಿತು.

ಕಾಂಗ್ರೆಸ್‌ನಲ್ಲಿ ಆರಂಭದಿಂದಲೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕರ ನಡುವೆ ಮುಸುಕಿನ ಗುದ್ದಾಟ ಇದೆ. ಸಿದ್ದರಾಮಯ್ಯ ಮೊದಲ ಏಳು ಕ್ಷೇತ್ರಗಳಿಗೆ ಟಿಕೆಟ್‌ ಹಂಚಿಕೆ ಮಾಡುವ ಸಂದರ್ಭದಲ್ಲಿ ಪಕ್ಷದ ಯಾವುದೇ ನಾಯಕರೊಂದಿಗೆ ಚರ್ಚಿಸದೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಮೂಲ ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಯಿತು.

ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಆದ್ಯತೆ ನೀಡಿದ್ದರಿಂದ ಮೂಲ ಕಾಂಗ್ರೆಸ್ಸಿಗರು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಯಿತು. ವಿಧಾನ ಪರಿಷತ್‌ ಸದಸ್ಯರಾಗಿದ್ದ ನಾರಾಯಣಸ್ವಾಮಿ, ಹಾಲಿ ಶಾಸಕ ಬೈರತಿ ಸುರೇಶ್‌ ಅವರ ಪತ್ನಿ ಪದ್ಮಾವತಿ ಅವರಿಗೆ ಟಿಕೆಟ್‌ ನೀಡಲು ವಿರೋಧವಿದ್ದರೂ ಯಾವುದೇ ನಾಯಕರ ಅಭಿಪ್ರಾಯ ಪಡೆಯದೇ ಆಯ್ಕೆ ಮಾಡಲಾಗಿತ್ತು.

ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ದರಾಮಯ್ಯ ಹಿರಿಯ ನಾಯಕರ ಬಹಿರಂಗ ಆಕ್ರೋಶ ಎದುರಿಸಬೇಕಾಯಿತು. ಟಿಕೆಟ್‌ ಹಂಚಿಕೆ ವಿಷಯದಲ್ಲಿ ಹಿರಿಯ ಕಾಂಗ್ರೆಸ್ಸಿಗರು ಹಾಗೂ ಸಿದ್ದರಾಮಯ್ಯ ನಡುವಿನ ತಿಕ್ಕಾಟ ಸಾರ್ವಜನಿಕವಾಗಿ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಅದು ಉಪ ಚುನಾವಣೆ ಫ‌ಲಿತಾಂಶದ ಮೇಲೂ ಪರಿಣಾಮ ಬೀರುವಂತಾಯಿತು.

ಪ್ರಚಾರಕ್ಕೆ ಬಾರದ ಹಿರಿಯರು: ಸಿದ್ದರಾಮಯ್ಯ ಅವರ ಏಕ ಪಕ್ಷೀಯ ನಿರ್ಧಾರದಿಂದ ಮುನಿಸಿಕೊಂಡಿದ್ದ ಪಕ್ಷದ ಹಿರಿಯ ನಾಯಕರಾದ ಕೆ.ಎಚ್‌.ಮುನಿಯಪ್ಪ, ಬಿ.ಕೆ. ಹರಿಪ್ರಸಾದ್‌, ಎಂ.ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ. ಪರಮೇಶ್ವರ್‌ ಆರಂಭದಲ್ಲಿ ಚುನಾವಣಾ ಪ್ರಚಾರದಿಂದ ಅಂತರ ಕಾಯ್ದುಕೊಂಡು ಕೊನೇ ದಿನಗಳಲ್ಲಿ ಕೆಲವು ದಿನ ಮಾತ್ರ ಬಿ.ಕೆ.ಹರಿಪ್ರಸಾದ್‌, ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್‌ 2-3 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ರವಾನಿಸಿದ್ದು, ಫ‌ಲಿತಾಂಶದ ಮೇಲೂ ಪರಿಣಾಮ ಬೀರುವಂತಾಯಿತು.

ಕೆಲವು ನಾಯಕರು ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದರೂ ಸಿದ್ದರಾಮಯ್ಯ ಅವರ ಮೇಲಿನ ಮುನಿಸಿನಿಂದ ಚುನಾವಣಾ ರಣರಂಗದಿಂದಲೇ ಅಂತರ ಕಾಯ್ದುಕೊಂಡರು. ರಾಮಲಿಂಗಾ ರೆಡ್ಡಿ, ಎಂ.ಬಿ. ಪಾಟೀಲ್‌, ಎಚ್‌.ಕೆ. ಪಾಟೀಲ್‌, ಎಸ್‌.ಆರ್‌.ಪಾಟೀಲ್‌ ಅವರನ್ನು ನಿರ್ದಿಷ್ಠ ಕ್ಷೇತ್ರಗಳಿಗೆ ಮಾತ್ರ ಉಸ್ತುವಾರಿಯನ್ನಾಗಿ ಮಾಡಿದ್ದರಿಂದ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಮಾತ್ರ ಎಲ್ಲ ಕ್ಷೇತ್ರಗಳಿಗೂ ತಿರುಗಾಡುವಂತಾಯಿತು.

ಈ ಬೆಳವಣಿಗೆ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಏಕಾಂಗಿ ಎನ್ನುವ ಭಾವನೆ ಮೂಡುವಂತಾಯಿತು. ಈ ಬೆಳವಣಿಗೆ ಚುನಾವಣೆಯಲ್ಲಿ ಪ್ರಮುಖವಾಗಿ ಎಲ್ಲ ಕ್ಷೇತ್ರಗಳಲ್ಲೂ ಬೇರೆ ಬೇರೆ ಸಮುದಾಯದ ಮತದಾರರನ್ನು ಸೆಳೆಯಲು ಆಯಾ ಸಮುದಾಯದ ನಾಯಕರು ಹೆಚ್ಚಿನ ಶ್ರಮ ಹಾಕಲು ಅವಕಾಶ ದೊರೆಯದಂತಾಯಿತು ಎಂದು ಹೇಳಲಾಗುತ್ತಿದೆ. ನಾಯಕರ ಗೊಂದಲಕಾರಿ ನಡವಳಿಕೆ, ಪಕ್ಷದಲ್ಲಿ ನಾಯಕರ ಪ್ರತಿಷ್ಠೆ, ಮನಸ್ತಾಪ, ಮತದಾನಕ್ಕೂ ಮುಂಚೆಯೇ ಅಧಿಕಾರಕ್ಕಾಗಿ ನಡೆಸಿದ ಪೈಪೋಟಿ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ನ್ನು ರಾಜ್ಯದಲ್ಲಿ ತೀರ ಹೀನಾಯ ಸ್ಥಿತಿಗೆ ತಂದು ನಿಲ್ಲಿಸುವಂತೆ ಮಾಡಿದೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತಿದ್ದರೂ, ನೈತಿಕ ಹೊಣೆಯಿಂದ ಜಾರಿಕೊಂಡಿದ್ದ ದಿನೇಶ್‌ ಗುಂಡೂರಾವ್‌ ಅನಿವಾರ್ಯವಾಗಿ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವಂತೆ ಮಾಡಿದೆ. ಅಲ್ಲದೇ ಜನರು ಅನರ್ಹರನ್ನು ಸೋಲಿಸುತ್ತಾರೆಂಬ ಅತಿಯಾದ ವಿಶ್ವಾಸದಿಂದ ಹಿರಿಯ ನಾಯಕರ ವಿರೋಧದ ನಡುವೆ ಏಕ ಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಂಡ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ತೊರೆಯುವಂತಾಗಿದೆ.

ಸಿದ್ದು ನಾಯಕತ್ವಕ್ಕೆ ಪೆಟ್ಟು: ಫ‌ಲಿತಾಂಶ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದ್ದು ಪಕ್ಷದ ಹಿರಿಯ ನಾಯಕರ ವಿರೋಧದ ನಡುವೆಯೂ ಹೈಕಮಾಂಡ್‌ ಸಿದ್ದರಾಮಯ್ಯ ಅವರ ಎಲ್ಲ ತೀರ್ಮಾನಗಳಿಗೂ ಒಪ್ಪಿಗೆ ನೀಡುವಷ್ಟರ ಮಟ್ಟಿಗೆ ಅವರನ್ನು ಹೈಕಮಾಂಡ್‌ ಬೆಂಬಲಿಸಿತ್ತು. ಆದರೆ, ಈ ಚುನಾವಣಾ ಫ‌ಲಿತಾಂಶ ಅವರ ಏಕಪಕ್ಷೀಯ ನಿರ್ಧಾರಗಳು ಫ‌ಲ ನೀಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದು,

ಮುಂದಿನ ದಿನಗಳಲ್ಲಿ ಯಾವುದೇ ತೀರ್ಮಾನ ತೆಗೆದುಕೊಂಡರೂ, ಪಕ್ಷದ ಹಿರಿಯ ನಾಯಕರ ಅಭಿಪ್ರಾಯಗಳಿಗೆ ಮನ್ನಣೆ ದೊರೆಯುವಂತೆ ಮಾಡಿದೆ. ಉಪ ಚುನಾವಣೆ ಫ‌ಲಿತಾಂಶ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಮೂಲ ಕಾಂಗ್ರೆಸ್‌ ನಾಯಕರ ನಡುವಿನ ಅಂತರ ಹೆಚ್ಚಿಸಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆ ತರುತ್ತಾ ಅಥವಾ ಫ‌ಲಿತಾಂಶದಿಂದ ಪಾಠ ಕಲಿತು ನಾಯಕರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.

ಮುಳುವಾದ ಮೈತ್ರಿ ಪ್ರಸ್ತಾಪ: ಹದಿನೈದು ಕ್ಷೇತ್ರಗಳ ಉಪ ಚುನಾವಣೆಗೆ ಕಾರಣವಾಗಿದ್ದ ಅನರ್ಹ ಶಾಸಕರನ್ನು ಸೋಲಿಸುವ ಗುರಿ ಹೊಂದಿದ್ದ ಕಾಂಗ್ರೆಸ್‌ ನಾಯಕರು ಅವರ ವಿರುದ್ಧ ಅನರ್ಹತೆಯ ಅಸ್ತ್ರವನ್ನು ಪ್ರಮುಖವಾಗಿ ಪ್ರಸ್ತಾಪಿಸದೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಹೆಚ್ಚು ಸ್ಥಾನ ಗೆದ್ದರೆ ಮತ್ತೆ ಮೈತ್ರಿ ಸರ್ಕಾರ ರಚನೆ ಮಾಡುತ್ತೇವೆ ಎನ್ನುವುದನ್ನು ಪ್ರಸ್ತಾಪ ಮಾಡಿದ್ದು ಮತದಾರರಲ್ಲಿ ಗೊಂದಲ ಉಂಟಾಗುವಂತಾಯಿತು. ಅನರ್ಹ ಶಾಸಕರ ಮೇಲೆ ಮತದಾರರಿಗೆ ಆಕ್ರೋಶ ಮೂಡುವಂತೆ ಮಾಡುವ ಬದಲು ಅಧಿಕಾರದ ಕನಸನ್ನು ಜನರ ಮುಂದೆ ಬಿಚ್ಚಿಟ್ಟಿದ್ದು ಮತದಾರ “ಭವಿಷ್ಯದ ಸರ್ಕಾರ’ದ ಬಗ್ಗೆ ಆಲೋಚನೆ ಮಾಡುವಂತೆ ಅವಕಾಶ ಕಲ್ಪಿಸಿದಂತಾಯಿತು ಎಂದು ವಿಶ್ಲೇಷಿಸಲಾಗುತ್ತಿದೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.