ಲಕ್ಷಾಂತರ ರೂ. ಸಾಮಗ್ರಿ ಬೆಂಕಿಗಾಹುತಿ
Team Udayavani, Dec 10, 2019, 10:38 AM IST
ಹುಬ್ಬಳ್ಳಿ: ಗೋಕುಲ ರಸ್ತೆಯ ಅಕ್ಷಯ ಸೆಂಟರ್‌ನಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಹಾಗೂ ಸುರೇಶ ಶೇಜವಾಡಕರ ಮಾಲೀಕತ್ವದ ಬಹುಮಹಡಿ ಕಟ್ಟಡದಲ್ಲಿ ರವಿವಾರ ನಡುರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ಉಪಕರಣಗಳು ಸುಟ್ಟು ಹಾನಿಯಾಗಿದೆ.
ಜ್ಯೋತಿ ಎನ್. ಛಬ್ಬಿ ಎಂಬುವರಿಗೆ ಸೇರಿದ ಛಬ್ಬಿ ಅಕ್ಷಯ ಕಾರ್ನರ್ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ ಉಂಟಾಗಿ ಅಂದಾಜು 25-30 ಲಕ್ಷ ರೂ. ಮೌಲ್ಯದ ವಿದ್ಯುತ್ ಉಪಕರಣ, ಪೀಠೊಪಕರಣ ಸೇರಿದಂತೆ ಇನ್ನಿತರೆ ಸಾಮಗ್ರಿಗಳು ಸುಟ್ಟು ಹಾನಿಯಾಗಿದೆ. ಬೆಂಕಿಯು ಕಟ್ಟಡದ ತುಂಬೆಲ್ಲ ಆವರಿಸಿದ್ದರಿಂದ ಮೊಬೈಲ್ ಶೋರೂಮ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ವಿವಿಧ ಇಲೆಕ್ಟ್ರಾನಿಕ್ಸ್ ಉಪಕರಣಗಳ ಮಳಿಗೆಗಳಿಗೆ ವ್ಯಾಪಿಸಿ ಹಾನಿಯಾಗಿದೆ. ಸ್ಥಳಕ್ಕೆ ಗೋಕುಲ ರಸ್ತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಡಿಎಫ್‌ಒ ವಿನಾಯಕ ಕಲ್ಲಗುಟ್ಕರ ನೇತೃತ್ವದಲ್ಲಿ ಸಿಬ್ಬಂದಿ ಆಗಮಿಸಿ ಸುಮಾರು ಎರಡು ತಾಸುಗಳ ಕಾಲ ಕಾರ್ಯಾಚರಣೆ ನಡೆಸಿ ಅಗ್ನಿಶಮನಗೊಳಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.