ಧರ್ಮದ ಆಧಾರದಲ್ಲಿ ಪೌರತ್ವ ನಿರ್ಧರಿಸುವುದು ಸಂವಿಧಾನ ವಿರೋಧಿ: ಸಿದ್ದರಾಮಯ್ಯ ಸಿಡಿಮಿಡಿ
Team Udayavani, Dec 10, 2019, 11:44 AM IST
ಬೆಂಗಳೂರು: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಭಾರಿ ಚರ್ಚೆಯ ನಂತರ ಮಧ್ಯರಾತ್ರಿ ಅಂಗೀಕಾರವಾಗಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಈ ಮಸೂದೆಯನ್ನು ವಿರೋಧಿಸಿದ್ದು, ಧರ್ಮದ ಆಧಾರದಲ್ಲಿ ಪೌರತ್ವ ನಿರ್ಧರಿಸುವುದು ಸಂವಿಧಾನ ವಿರೋಧಿ ಎಂದಿದ್ಧಾರೆ.
ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಅವಸರದಿಂದ ಮಧ್ಯರಾತ್ರಿ ಲೋಕಸಭೆ ಅಂಗೀಕರಿಸಿದ ‘ಪೌರತ್ವ (ತಿದ್ದುಪಡಿ) ಮಸೂದೆ’ ಸಂವಿಧಾನದ ಮೂಲ ಆಶಯಗಳಾದ ಸಮಾನತೆ ಮತ್ತು ಜಾತ್ಯತೀತತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಈ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ ಎಂದಿದ್ದಾರೆ.
ಅವಸರದಿಂದ ಮಧ್ಯರಾತ್ರಿ ಲೋಕಸಭೆ ಅಂಗೀಕರಿಸಿದ ‘ಪೌರತ್ವ (ತಿದ್ದುಪಡಿ) ಮಸೂದೆ’ ಸಂವಿಧಾನದ ಮೂಲ ಆಶಯಗಳಾದ ಸಮಾನತೆ ಮತ್ತು ಜಾತ್ಯತೀತತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಈ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ.#CitizenshipAmendmentBill2019 #CABBill
— Siddaramaiah (@siddaramaiah) December 10, 2019
ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ. ಈ ಮಸೂದೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹತ್ತಿಕ್ಕುವ ದುರುದ್ದೇಶ ಇದೆಯೇ ಹೊರತು ವಲಸೆ ಸಮಸ್ಯೆಯನ್ನು ಪರಿಹರಿಸುವ ಸದುದ್ದೇಶ ಖಂಡಿತ ಇಲ್ಲ.#CitizenshipAmendmentBill2019 #CABBill
— Siddaramaiah (@siddaramaiah) December 10, 2019
ದ್ವಿರಾಷ್ಟ್ರ ಸಿದ್ದಾಂತವನ್ನು ಪ್ರತಿಪಾದಿಸಿದ್ದ ಬಿಜೆಪಿಯ ಮೂಲಪುರುಷರ ಆಶಯವನ್ನು ಕೇಂದ್ರ ಸರ್ಕಾರ ಈಡೇರಿಸಲು ಹೊರಟಿರುವುದು ಸ್ಪಷ್ಟ. ದೇಶ ಒಡೆಯಲು ಹೊರಟಿರುವ ಬಿಜೆಪಿ ಸಂಚಿನ ವಿರುದ್ದ ಜಾತ್ಯತೀತ ಭಾರತ ಸಂಘಟಿತವಾಗಬೇಕು.#CitizenshipAmendmentBill2019#CABBill
— Siddaramaiah (@siddaramaiah) December 10, 2019
ಹೆಚ್ಚುತ್ತಿರುವ ನಿರುದ್ಯೋಗ, ಮುಚ್ಚುತ್ತಿರುವ ಕೈಗಾರಿಕೆಗಳು, ಏರುತ್ತಿರುವ ಸಾಮಗ್ರಿಗಳ ಬೆಲೆ, ಕುಸಿಯುತ್ತಿರುವ ಜಿಡಿಪಿ, ದಿವಾಳಿಯಾಗುತ್ತಿರುವ ಬ್ಯಾಂಕುಗಳ ಸ್ಥಿತಿಯಿಂದ ಜನಮನ ಬೇರೆಡೆ ಸೆಳೆಯಲು ಬಿಜೆಪಿ ಪೌರತ್ವ ಮಸೂದೆಯ ಅಸ್ತ್ರ ಬಳಸಲು ಹೊರಟಿದೆ.#CitizenshipAmendmentBill2019#CABBill
— Siddaramaiah (@siddaramaiah) December 10, 2019
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.