ಮಹಿಳೆಯರ ಸುರಕ್ಷತೆಗೆ ಓಬವ್ವ ಪಡೆ ರಚನೆ
Team Udayavani, Dec 10, 2019, 12:45 PM IST
ರಾಯಚೂರು: ಜಿಲ್ಲೆಯಲ್ಲಿ ಮಹಿಳೆ ಮತ್ತು ವಿದ್ಯಾರ್ಥಿನಿಯರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಇಲಾಖೆ ಓಬವ್ವ ಪಡೆಯನ್ನು ರಚಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ಚಾಲನೆ ನೀಡಿದರು.
ಮಹಿಳೆಯರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಪಡೆಯನ್ನು ರಚಿಸಲಾಗಿದೆ. ಕರಾಟೆ ತರಬೇತಿ ಹೊಂದಿರುವ ಸಿಬ್ಬಂದಿ ಒಳಗೊಂಡ ಈ ಪಡೆ ಮಹಿಳೆಯರ ರಕ್ಷಣೆಗಾಗಿ ಸಂಚರಿಸಲಿದೆ. ಇದರಲ್ಲಿ ತರಬೇತಿ ಪಡೆದ ಮಹಿಳಾ ಪೊಲೀಸರಿರುತ್ತಾರೆ. ಓಬವ್ವ ಪಡೆಯನ್ನು ಎರಡು ತಂಡಗಳನ್ನಾಗಿ ವಿಂಗಡಿಸಿದ್ದು, ವಿಶೇಷ ವಾಹನದಲ್ಲಿ ನಗರಾದ್ಯಂತ ಪೆಟ್ರೋಲಿಂಗ್ ನಡೆಸಿ ಕರ್ತವ್ಯ ನಿರ್ವಹಿಸಲಿದೆ. ಸಿಬ್ಬಂದಿಗೆ ತರಬೇತುದಾರರಿಂದ ಕರಾಟೆ, ಯುಎಸಿ ಮಹತ್ವದ ತರಬೇತಿ ನೀಡಲಾಗಿದೆ. ಮಹಿಳೆಯರಿಗೆ ಮಾನಸಿಕ ಸ್ಥೈರ್ಯ, ಧೈರ್ಯ ತುಂಬಲು ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗಿದೆ. ಮಹಿಳಾ ಸಿಬ್ಬಂದಿ ಸನ್ನದ್ಧರಾಗಿದ್ದು, ಪೆಟ್ರೋಲಿಂಗ್ ಮಾಡಲು ಅಣಿಯಾಗಿದ್ದಾರೆ.
ತಂಡಕ್ಕೆ ಪ್ರತ್ಯೇಕ ಸಮವಸ್ತ್ರ ಸೌಲಭ್ಯ ಕಲ್ಪಿಸಲಾಗಿದೆ. ಮಹಿಳಾ ಎಎಸ್‌ಐ ಉಸ್ತುವಾರಿಯಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುವರು. ಮಹಿಳೆಯರ ಮೇಲೆ ಯಾರಾದರೂ ದೌರ್ಜನ್ಯ, ತೊಂದರೆ ನೀಡಿದಲ್ಲಿ 94808 03800 ಈ ಸಂಖ್ಯೆಗೆ ಕರೆ ಮಾಡಿ ವಿವರ ನೀಡಿದಲ್ಲಿ, ಓಬವ್ವ ಪಡೆ ಸಂಬಂಧಿಸಿದ ಸ್ಥಳಕ್ಕೆ ಧಾವಿಸಿ ಸಮಸ್ಯೆ ನಿವಾರಣೆಗೆ ಒತ್ತು ನೀಡಲಿದೆ.
ಚಾಲನೆ ನೀಡಿದ ಬಳಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ, ಮಹಿಳಾ ಸುರಕ್ಷಾ ವಾಹನವು ಬೆಳಗ್ಗೆ 8ರಿಂದ ರಾತ್ರಿ 10ರವರೆಗೆ ಕಾರ್ಯ ನಿರ್ವಹಿಸಲಿದ್ದು, ನಗರದ ಎಲ್ಲ ಕಾಲೇಜ್, ವಿದ್ಯಾರ್ಥಿನಿಯರ ವಸತಿಗೃಹಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಮಾರ್ಕೆಟ್, ಇತರೆ ಪ್ರದೇಶಗಳಲ್ಲಿ ನಿರಂತರ ಗಸ್ತು ಮಾಡಲಾಗುತ್ತದೆ. ಸುಖಾಸುಮ್ಮನೆ ತೊಂದರೆ ಕೊಡುವುದು, ನಿಂದಿಸುವುದು, ಕಿರುಕುಳ ನೀಡುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ನಗರದ ಮಹಿಳೆಯರು, ವಿದ್ಯಾರ್ಥಿನಿಯರ ಸುಭದ್ರತೆ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಇಲಾಖೆ ರೂಪಿಸಿರುವ ಓಬವ್ವ ಪಡೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಎಎಸ್ಪಿ ಶ್ರೀಹರಿಬಾಬು, ಡಿವೈಎಸ್ಪಿ ಶೀಲವಂತ, ಪಿಎಸ್‌ಐಗಳಾದ ಉಮೇಶ ಕಾಂಬಳೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.