ವದ್ದಿಕೆರೆ ಗ್ರಾಮದಲ್ಲಿ ಗಡಿ ಉತ್ಸವ
Team Udayavani, Dec 10, 2019, 2:35 PM IST
ಹಿರಿಯೂರು: ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಸ್ಫೂರ್ತಿ ರೂರಲ್ ಆ್ಯಂಡ್ ಅರ್ಬನ್ ಡೆವಲಪ್‌ಮೆಂಟ್ ಆರ್ಗನೈಜೇಷನ್ ಹಿರಿಯೂರು ಸಹಯೋಗದಲ್ಲಿ ಗಡಿ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಅನ್ನಪೂರ್ಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಡಿ ಉತ್ಸವ ಆಯೋಜನೆ ಮಾಡುವುದರಿಂದ ಗಡಿ ಭಾಗದ ಗ್ರಾಮಗಳ ಅಭಿವೃದ್ಧಿಗೆ ಸಹಕಾರಿ. ಗ್ರಾಮೀಣ ಕಲೆಗಳಾದ ಕೋಲಾಟ, ಡೊಳ್ಳು ಕುಣಿತ, ವೀರಗಾಸೆ, ಛದ್ಮವೇಷ, ಬೀದಿ ನಾಟಕದಂತಹ ಕಲೆಗಳು ಇನ್ನೂ ಜೀವಂತವಾಗಿರುವುದಕ್ಕೆ ಗ್ರಾಮೀಣ ಕಲೆಗಳ ಗಟ್ಟಿತನವೇ ಕಾರಣ ಎಂದರು. ಕಂದಾಯಾಧಿಕಾರಿ ಕರಿಯಪ್ಪ ಮಾತನಾಡಿ, ಸಾಂಸ್ಕೃತಿಕ ಕಲೆಗಳ ಅನಾವರಣಕ್ಕೆ ಗಡಿ ಉತ್ಸವಗಳು ಸಹಾಯಕವಾಗಿವೆ. ಕಲೆ ನಾಡಿನ ಇತಿಹಾಸ, ಪರಂಪರೆ, ಸಂಸ್ಕೃತಿಯ ಪ್ರತೀಕ ಎಂದು ತಿಳಿಸಿದರು.
ನಾಡ ಕಚೇರಿ ಉಪ ತಹಶೀಲ್ದಾರ್ ಮಂಜಣ್ಣ, ಗ್ರಾಮದ ಮುಖಂಡರಾದ ಮಹೇಶ್, ಚಂದ್ರಪ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ನಾಗರಾಜ್, ಐಮಂಗಲ ಪಿಎಸ್‌ಐ ಮಲ್ಲಿಕಾರ್ಜುನಯ್ಯ, ಸಾಯಿ ಮೇಘನ ಮಹಿಳಾ ಮಂಡಳಿ ಕಾರ್ಯದರ್ಶಿ ಜಯಂತಿ, ಸ್ಫೂರ್ತಿ ರೂರಲ್ ಆ್ಯಂಡ್ ಅರ್ಬನ್ ಡೆವಲಪ್‌ಮೆಂಟ್ ಆರ್ಗನೈಜೇಷನ್ ಕಾರ್ಯದರ್ಶಿ ನಾಜಿಯಾ ಬೇಗಂ, ಕಾರ್ಯಕ್ರಮ ಸಂಘಟಕಿ ಎಚ್.ಈ. ಚಂದ್ರಮ್ಮ ಉಪಸ್ಥಿತರಿದ್ದರು. ಗಡಿ ಉತ್ಸವದ ಅಂಗವಾಗಿ ಗ್ರಾಮದ ಮುಖ್ಯ ರಸ್ತೆಗಳಲ್ಲಿ ವಿವಿಧ ಕಲಾ ತಂಡಗಳ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.