ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ, ಯಾರಿಂದಲೂ ಸಚಿವ ಸ್ಥಾನದ ಬೇಡಿಕೆ ಇಲ್ಲ
Team Udayavani, Dec 10, 2019, 5:31 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ. ಸಮೀಕ್ಷೆ ಮೀರಿ ಬಿಜೆಪಿಗೆ ದೊಡ್ಡ ಗೆಲುವು ಸಿಕ್ಕಿದೆ. ಗೆದ್ದವರಿಗೆ ನಾವು ಮಾತು ಕೊಟ್ಟಂತೆಯೇ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಸಚಿವ ಸ್ಥಾನದ ಬೇಡಿಕೆ, ಬೆದರಿಕೆ ಇಲ್ಲ ಎಂದರು.
ಸಿದ್ಧರಾಮಯ್ಯ ಅವರು ತಮ್ಮ ಜ್ಯೋತಿಷ್ಯಾಲಯದ ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ. ಅವರೇ ವಿರೋಧ ಪಕ್ಷದಲ್ಲಿಯೇ ಮುಂದುವರೆಯಬೇಕು. ಅವರು ಹೋದಲೆಲ್ಲ ಪಕ್ಷ ಇಬ್ಭಾಗ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಮೂರು ಭಾಗ ಮಾಡುವವರೆಗೂ ಅಲ್ಲಿಯೆ ಇರಬೇಕು ಎಂದು ಲೇವಡಿ ಮಾಡಿದರು.
ಸಿದ್ಧರಾಮಯ್ಯ ಬರೀ ಬುರುಡೆ ಬಿಡುತ್ತಾರೆ. ಸಿದ್ಧರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿ ಮನೆಗೆ ಹೋಗುವುದು ಒಳಿತು.
ಈಗಾಗಲೇ ಶರತ್ ಬಚ್ಚೇಗೌಡ ಅವರನ್ನ ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಅವರು ಮಾತೃ ಪಕ್ಷ ಬಿಟ್ಟು ಹೋಗಿದ್ದು ತಾಯಿಗೆ ಅನ್ಯಾಯ ಮಾಡಿದಂತೆ. ಬಿ.ಎನ್. ಬಚ್ಚೇಗೌಡ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಅವರು ಎಲ್ಲಿಯೂ ಪ್ರಚಾರದಲ್ಲಿ ಭಾಗಿಯಾಗಿಲ್ಲ. ನಮ್ಮ ಪಕ್ಷ ಅಶಿಸ್ತನ್ನ ಎಂದೂ ಸಹಿಸಲ್ಲ. ಅವರ ನಡೆಯನ್ನು ಪಕ್ಷದ ವರಿಷ್ಠರು ಗಮನಿಸಿದ್ದಾರೆ. ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈಗ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತವಿದೆ ಪಕ್ಷಕ್ಕೆ ಯಾರನ್ನೂ ಸೇರಿಸಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.