“2020ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ವಸತಿ ಭಾಗ್ಯ’
Team Udayavani, Dec 10, 2019, 7:53 PM IST
ಕಾಸರಗೋಡು: 2020ನೇ ಇಸವಿಯ ಡಿಸೆಂಬರ್ ತಿಂಗಳಲ್ಲಿ ಮನೆ ಯಿಲ್ಲದ ಎಲ್ಲರಿಗೂ ವಸತಿ ಭಾಗ್ಯ ಒದಗಲಿದೆ ಎಂದು ಸ್ಥಳೀಯಾಡಳಿತ ಸಚಿವ ಎ.ಸಿ. ಮೊಯ್ದಿನ್ ಭರವಸೆ ನೀಡಿದರು.
ವೆಸ್ಟ್ ಏಳೇರಿ ಪಂಚಾಯತ್ನಲ್ಲಿ ನಡೆದ ಸಮಾರಂಭದಲ್ಲಿ ಲೈಫ್ ಮಿಷನ್ ಯೋಜನೆ ಪ್ರಕಾರ ನಿರ್ಮಿಸಿರುವ ವಸತಿ ಗಳ ಕೀಲಿಕೈ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎರಡು ವರ್ಷಗಳ ಅವ ಧಿಯಲ್ಲಿ 320 ಮನೆಗಳನ್ನು ನಿರ್ಮಿಸುವ ಮೂಲಕ ವೆಸ್ಟ್ ಏಳೇರಿ ಗ್ರಾಮ ಪಂಚಾಯತ್ ಇತರರಿಗೆ ಮಾದರಿಯಾಗಿದೆ. ಈ ಯೋಜನೆಯ ಮೊದಲ ಹಂತದಲ್ಲಿ 54 ಸಾವಿರ ಮಂದಿ ಸದಸ್ಯರಾಗಿದ್ದರು. ಎರಡನೇ ಹಂತದಲ್ಲಿ ಇವರ ಸಂಖ್ಯೆ 1.37 ಲಕ್ಷವಾಗಿ ಹೆಚ್ಚಳಗೊಂಡಿತ್ತು. ರಾಜ್ಯದ 50 ಕ್ಕೂ ಅ ಧಿಕ ಪ್ರದೇಶಗಳಲ್ಲಿ ನೂರಾರು ವಸತಿ ಸಮುಚ್ಚಯಗಳನ್ನು ನಿರ್ಮಿಸಿ ನೀಡುವ ಯೋಜನೆ ಮೂರನೇ ಹಂತವಾಗಿ ನಡೆಯುತ್ತಿದೆ. ಹೆಚ್ಚುವರಿಯಾಗಿ 200 ಪ್ರದೇಶಗಳನ್ನು ಈ ನಿಟ್ಟಿನಲ್ಲಿ ಆಯ್ಕೆ ಮಾಡಲಾಗಿದೆ ಎಂದವರು ತಿಳಿಸಿದರು.
ಸಭೆಯಲ್ಲಿ ತ್ರಿಕ್ಕರಿಪುರ ಶಾಸಕ ಎಂ. ರಾಜಗೋಪಾಲನ್ ಅಧ್ಯಕ್ಷತೆ ವಹಿಸಿದ್ದರು. ಪರಪ್ಪ ಬ್ಲಾಕ್ ಪಂಚಾಯತ್ ಅಧ್ಯಕ್ಷ ಪಿ.ರಾಜನ್, ವೆಸ್ಟ್ ಏಳೇರಿ ಗ್ರಾಮ ಪಂಚಾಯತ್ ಉಪಾದ್ಯಕ್ಷ ಟಿ.ಕೆ. ಸುಕುಮಾರನ್, ಖಾದಿ ಮಂಡಳಿಯ ಮಾಜಿ ಅಧ್ಯಕ್ಷ ಎಂ.ವಿ.ಬಾಲಕೃಷ್ಣನ್, ಲೈಫ್ ಮಿಷನ್ ಜಿಲ್ಲಾ ಸಂಚಾಲಕ ಎಂ.ವತ್ಸಲನ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.