ಕಟಾವಿಗೆ ಬಂದ ಭತ್ತ, ಇನ್ನೂ ತೆರೆಯದ ಖರೀದಿ ಕೇಂದ್ರ

Team Udayavani, Dec 11, 2019, 3:00 AM IST

katavige

ಯಳಂದೂರು: ತಾಲೂಕಿನಲ್ಲಿ ಭತ್ತ ಕಟಾವು ಕಾರ್ಯವು ಆರಂಭವಾಗುತ್ತಿದೆ. ಈ ಬಾರಿ ಉತ್ತಮ ಮಳೆ ಹಾಗೂ ಕಬಿನಿ ಕಾಲುವೆಯಲ್ಲಿ ನೀರು ಹರಿದಿರುವುದರಿಂದ ಬಂಪರ್‌ ಬೆಳೆಯೂ ಬಂದಿದೆ. ಭತ್ತಕ್ಕೆ ಬೆಂಬಲ ಬೆಲೆ ನೀಡುವ ಉದ್ದೇಶದಿಂದ ಖರೀದಿ ಕೇಂದ್ರ ತೆರೆಯಬೇಕೆಂಬ ನಿಯಮವಿದೆ. ಆದರೆ ರೈತರಿಗೆ ಅನುಕೂಲವನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರವು ತಕ್ಷಣ ಮುಂದಾಗಬೇಕಾಗಿದೆ.

3500 ಹೆಕ್ಟೇರ್‌ನಲ್ಲಿ ಭತ್ತ: ತಾಲೂಕಿನಲ್ಲಿ 3500 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಭತ್ತವನ್ನು ಬೆಳೆದಿದ್ದಾರೆ. ಈಗಾಗಲೇ ಭತ್ತ ಹಣ್ಣಾಗಿದ್ದು ಕಟಾವಿಗೆ ಬಂದಿದೆ. ಇಲ್ಲಿನ ರೈತರು ಈ ಬಾರಿ ಐಆರ್‌-64, ಬಿಪಿಟಿ, ಎಂಟಿಯು-1010, ಜಯ ಭತ್ತದ ತಳಿಗಳನ್ನು ಬೆಳೆದಿದ್ದಾರೆ. ಅದರಲ್ಲೂ ಐಆರ್‌-64 ತಳಿ ಹೆಚ್ಚಾಗಿ ಬೆಳೆದಿದ್ದು ಹಾಗೂ ಮುಸುಕಿನ ಜೋಳವನ್ನು ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ, ರಾಗಿಯನ್ನು 150 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗಿದ್ದು ಈಗಾಗಲೇ ಇದರ ಕಟಾವು ಕಾರ್ಯ ಪ್ರಾರಂಭವಾಗಿದೆ.

ತಾಲೂಕು ಮಟ್ಟದಲ್ಲಿ ಖರೀದಿ ಕೇಂದ್ರ ತೆರೆಯಬೇಕು: ಸರ್ಕಾರವು ಭತ್ತಕ್ಕೆ ಬೆಂಬಲ ಬೆಲೆಯನ್ನು ನಿಗದಿ ಮಾಡಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ತಾಲೂಕು ಮಟ್ಟದಲ್ಲಿ ಖರೀದಿ ಕೇಂದ್ರವನ್ನು ಆರಂಭಿಸಬೇಕಿದೆ. ಆದರೆ ಈ ಕಾರ್ಯ ಇನ್ನೂ ತಾಲೂಕಿನಲ್ಲಿ ಆಗಿಲ್ಲ.

ಯಳಂದೂರಿನಲ್ಲಿ ಖರೀದಿ ಕೇಂದ್ರ ಬೇಕು: ಕಳೆದ ವರ್ಷ ಭತ್ತದ ಖರೀದಿ ಕೇಂದ್ರವನ್ನು ಸಮೀಪದ ಸಂತೆಮರಹಳ್ಳಿಯ ಎಪಿಎಂಸಿ ಕೇಂದ್ರದಲ್ಲಿ ಖರೀದಿ ಕೇಂದ್ರ ತೆರೆದಿತ್ತು. ಇದರಿಂದ ರೈತರಿಗೆ ತೀವ್ರ ತೊಂದರೆಯಾಗಿತ್ತು. ಇದಕ್ಕೆ ವಿರೋಧವೂ ವ್ಯಕ್ತವಾಗಿತ್ತು. ಯಳಂದೂರು ತಾಲೂಕಿನಲ್ಲಿ ಹೆಚ್ಚು ಭತ್ತ ಬೆಳೆಯುವ ಪ್ರದೇಶವನ್ನು ಬಿಟ್ಟು ದೂರದ ಸಂತೆಮರಹಳ್ಳಿ ಕ್ಷೇತ್ರದಲ್ಲಿ ತೆರೆದಿತ್ತು ಪ್ರತಿಭಟನೆಗೂ ಕಾರಣವಾಗಿತ್ತು.

ಇಲ್ಲಿಗೆ ಸಾಗಣೆ ವೆಚ್ಚವೂ ಅಧಿಕವಾಗುತ್ತದೆ. ಜೊತೆಗೆ ಹೆಚ್ಚಿನ ಪರಿಶ್ರಮವೂ ಇರುತ್ತದೆ ಎಂಬ ಕಾರಣವೊಡ್ಡಿ ಹೆಚ್ಚಿನ ರೈತರು ಭತ್ತವನ್ನು ಗದ್ದೆಗಳಲ್ಲಿ ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಾರಿ ಹೀಗೆ ಆಗಬಾರದು ಖರೀದಿ ಕೇಂದ್ರವನ್ನು ಯಳಂದೂರು ಪಟ್ಟಣದಲ್ಲೇ ತೆರೆಯಬೇಕು ಎಂಬುದು ಇಲ್ಲಿನ ರೈತ ಮುಖಂಡ ಮಹಾದೇವಸ್ವಾಮಿ, ಸಿದ್ದಲಿಂಗಸ್ವಾಮಿ ಹಾಗೂ ಇತರರ ಆಗ್ರಹವಾಗಿದೆ.

ತಾಲೂಕಿನಲ್ಲಿ ಡಿಸೆಂಬರ್‌ ತಿಂಗಳಲ್ಲಿ ಕಟಾವು ಕಾರ್ಯ ಪ್ರಾರಂಭವಾಗುತ್ತಿದೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖರೀದಿ ಕೇಂದ್ರ ಹಾಗೂ ಬೆಂಬಲ ಬೆಲೆ ನೀಡುವ ನಿಟ್ಟಿನಲ್ಲಿ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ. ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದು, ಆದೇಶ ಬಂದ ತಕ್ಷಣ ಖರೀದಿ ಕೇಂದ್ರ ತೆರೆಯಲಾಗುವುದು.
-ವೆಂಕಟರಂಗಶೆಟ್ಟಿ, ಕೃಷಿ ಅಧಿಕಾರಿ, ಯಳಂದೂರು

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.