ಸೌದಿ : ಮಹಿಳೆಯರು ಮತ್ತು ಪುರುಷರಿಗಿದ್ದ ಪ್ರತ್ಯೇಕ ಪ್ರವೇಶ ದ್ವಾರ ನಿಯಮ ನಿರ್ಬಂಧ ತೆರವು


Team Udayavani, Dec 10, 2019, 10:09 PM IST

Saudi-10-12

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಿಯಾದ್‌ (ಸೌದಿ ಅರೇಬಿಯ): ತನ್ನ ಹಳೆಯ ಪದ್ಧತಿಗಳನ್ನು ಬದಲಾಯಿಸಿಕೊಂಡು ಸುಧಾರಣಾವಾದದತ್ತ ಮುಂದುವರಿಯುತ್ತಿರುವ ಸೌದಿ ಅರೇಬಿಯಾದಲ್ಲಿ ಮತ್ತೊಂದು ಮಹತ್ವದ ಬದಲಾವಣೆ ಹೊರಬಿದ್ದಿದೆ. ಇಲ್ಲಿನ ರೆಸ್ಟೋರೆಂಟ್ ಗಳಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಇದ್ದ ಪ್ರತ್ಯೇಕ ಪ್ರವೇಶ ದ್ವಾರ ಮತ್ತು ಆಸನ ವ್ಯವಸ್ಥೆಯನ್ನು ಇಲ್ಲಿನ ಆಡಳಿತ ಬದಲಾಯಿಸಿ ಇದೀಗ ಆದೇಶ ಹೊರಡಿಸಿದೆ. ಇಲ್ಲಿನ ನಗರ ಹಾಗೂ ಗ್ರಾಮೀಣ ವ್ಯವಹಾರಗಳ ಸಚಿವಾಲಯ ತನ್ನ ಟ್ವಿಟ್ಟರ್ ಪ್ರಕಟನೆಯ ಮೂಲಕ ಈ ನಿರ್ಬಂಧ ತೆರವು ವಿಚಾರವನ್ನು ಇತ್ತೀಚೆಗಷ್ಟೇ ಪ್ರಕಟಿಸಿದೆ.

ಈ ಹಿಂದೆ ಇಲ್ಲಿನ ರೆಸ್ಟೋರೆಂಟ್ ಗಳಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಪ್ರವೇಶ ದ್ವಾರಗಳಿದ್ದವು ಮತ್ತು ಇಲ್ಲಿಗೆ ಬರುವವರು ಒಂದೇ ಕುಟುಂಬದ ಸದಸ್ಯರಾಗಿದ್ದರೂ ಎಲ್ಲರೂ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕಿತ್ತು. ಪರಸ್ಪರ ಸಂಬಂಧಿಕರಲ್ಲದ ಪುರುಷ ಮತ್ತು ಮಹಿಳೆ ಸಾರ್ವಜನಿಕ ಸ್ಥಳಗಳಲ್ಲಿ ಜೊತೆಯಾಗಿರುವುದಕ್ಕೂ ಸೌದಿ ಅರೇಬಿಯಾದಲ್ಲಿ ನಿರ್ಬಂಧ ಇತ್ತು.

ಸುಧಾರಣಾವಾದಿ ದೊರೆ ಎಂದೇ ಕರೆಯಿಸಿಕೊಳ್ಳುತ್ತಿರುವ ಇಲ್ಲಿನ ದೊರೆ ಮಹಮ್ಮದ್ ಬಿನ್ ಸಲ್ಮಾನ್ ಸೌದಿ ಅರೇಬಿಯಾದ ಅರಸನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಹಲವಾರು ಮಹತ್ವದ ಸಾಮಾಜಿಕ ಬದಲಾವಣೆಗಳನ್ನು ತಂದಿದ್ದಾರೆ. ಸಲ್ಮಾನ್ ಅವರು ಜೂನ್ 2017ರಂದು ಸೌದಿ ದೊರೆಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪ್ರತ್ಯೇಕ ಪ್ರವೇಶ ದ್ವಾರಗಳ ನಿಯಮವನ್ನು ತೆಗೆದುಹಾಕಿರುವುದು ಮಾತ್ರವಲ್ಲದೇ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆಯ ನಿಯಮವನ್ನೂ ಸಹ ಇದೀಗ ಸಡಿಲಿಸಲಾಗಿದೆ.

ಈ ನಿರ್ಬಂಧವನ್ನು ಈ ಹಿಂದೆಯೇ ತರವುಗೊಳಿಸಲಾಗಿದ್ದರೂ ಹಲವಾರು ರೆಸ್ಟೋರೆಂಟ್ ಗಳು, ಕೆಫೆಗಳು ಇದನ್ನು ಅನುಷ್ಠಾನಗೊಳಿಸಿರಲಿಲ್ಲ. ಈಗಲೂ ಸಹ ಈ ನಿರ್ಬಂಧವನ್ನು ಪಾಲಿಸುವುದು ಕಡ್ಡಾಯವೇನಲ್ಲ. ಆದರೆ ಸುಧಾರಣೆಯ ಭಾಗವಾಗಿ ಇವುಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಸೌದಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.