ವಲಸೆ ಮಕ್ಕಳ ಶಿಕ್ಷಣ: ಹೊಸ ನೀತಿಗೆ ಸರ್ಕಾರ ಅನುಮೋದನೆ
Team Udayavani, Dec 11, 2019, 3:00 AM IST
ಬೆಂಗಳೂರು: ಶಾಲಾ ಶಿಕ್ಷಣದಿಂದ ಹೊರಗುಳಿದ ಮಕ್ಕಳನ್ನು ಪುನರ್ ಶಾಲೆಗೆ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಲಸಿಗ ಮಕ್ಕಳ ಹಾಗೂ ವಲಸಿಗ ಕೂಲಿಕಾರರ ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ನೀತಿ-2019ಕ್ಕೆ ಅನುಮೋದನೆ ನೀಡಿದೆ.
ಶಾಲೆಯಿಂದ ಹೊರಗುಳಿದ 6ರಿಂದ 14 ವರ್ಷ ವಯಸ್ಸಿನ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವುದು ಸರ್ಕಾರದ ಕರ್ತವ್ಯ. ಸಂವಿಧಾನದ 21(ಎ)ಕಲಂ ಪ್ರಕಾರ 6ರಿಂದ 14 ವರ್ಷದ ಎಲ್ಲಾ ಮಕ್ಕಳು ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕು. ಈ ಹಿನ್ನೆಲೆ ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅನೇಕ ಪ್ರಯತ್ನ ನಡೆ ಸುತ್ತಿದೆ. ಇಷ್ಟಾದರೂ ವಲಸಿಗ ಮಕ್ಕಳ ಹಾಗೂ ವಲಸಿಗ ಕೂಲಿಕಾರರ ಮಕ್ಕಳು ಶಿಕ್ಷಣದಿಂದ ವಂಚಿತ ರಾಗುತ್ತಿರುವುದು ಇಲಾಖೆ ಗಮನಕ್ಕೆ ಬರುತ್ತಲೇ ಇದೆ.
ಷರತ್ತುಗಳು: ವಲಸೆ ಮಕ್ಕಳ ಶಿಕ್ಷಣಕ್ಕಾಗಿ ನಿರ್ದೇಶಿಸಿರುವ ಎಲ್ಲಾ ಕ್ರಮಗಳು ಮತ್ತು ಕಾರ್ಯತಂತ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕರು ಜಾರಿಗೆಯಾಗುವಂತೆ ಕ್ರಮವಹಿಸಬೇಕು. ವಲಸಿಗ ಮಕ್ಕಳು ಮತ್ತು ವಲಸಿಗ ಕೂಲಿಕಾರರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು. ಈ ನೀತಿಯ ವಿವರಗಳನ್ನು ಜಿಲ್ಲೆ, ತಾಲೂಕು, ಕ್ಲಸ್ಟರ್ ಹಾಗೂ ಶಾಲಾ ಹಂತಕ್ಕೆ ತಲುಪುವಂತೆ ಕ್ರಮವಹಿಸಬೇಕು.
ಮಕ್ಕಳ ಪ್ರಾಥಮಿಕ ಶಿಕ್ಷಣ ಸಾರ್ವತ್ರೀಕರಣಕ್ಕೆ ಬೇರೆ ಇಲಾಖೆಗಳ ಸಹಕಾರ ಪಡೆಯಬೇಕು. ಮೇಲ್ವಿಚಾರಣ ಸಮಿತಿ ಪ್ರತಿ 3ತಿಂಗಳಿಗೆ ಸಭೆ ಸೇರಿ ಶಾಲಾ ಶಿಕ್ಷಣ ವಂಚಿತ ಮಕ್ಕಳಿಗೆ ಶಿಕ್ಷಣ ದೊರಕಿಸುವ ಬಗ್ಗೆ ಪ್ರಗತಿ ಪರಿಶೀಲಿಸಬೇಕು. ಕಾಲಕಾಲಕ್ಕೆ ರಾಜ್ಯ ಸಮಗ್ರ ಶಿಕ್ಷಣದ ಯೋಜನಾ ನಿರ್ದೇಶಕರು ವಲಸೆ ಮಕ್ಕಳ ಮೂಲಭೂತ ಶಿಕ್ಷಣದ ಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಒಪ್ಪಿಸಬೇಕು. ನ್ಯಾಯಲಯಕ್ಕೂ ಇದರ ವರದಿ ಸಲ್ಲಿಸಬೇಕು ಎಂದು ಸರ್ಕಾರ ಷರತ್ತು ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.