ನಕಲಿ ಟಿವಿ ಚಾನೆಲ್‌ಗ‌ಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಜಗದೀಶ್‌ ಎಚ್ಚರಿಕೆ

ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ ಕಾಯಿದೆ: ಜಿಲ್ಲಾ ಮಟ್ಟದ ನಿರ್ವಹಣ ಸಮಿತಿ ಸಭೆ

Team Udayavani, Dec 10, 2019, 11:14 PM IST

ds-36

ಉಡುಪಿ: ಜಿಲ್ಲೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಹಾಗೂ ನಕಲಿ ಟಿವಿ ಚಾನೆಲ್‌ಗ‌ಳ ವಿರುದ್ಧ ಕಠಿನ ಕ್ರಮ ಜರಗಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ ಕಾಯಿದೆಯ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಟಿವಿ ಚಾನೆಲ್‌ಗ‌ಳು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ( ಟ್ರಾಯ್‌)ದ ಅಡಿ ನೋಂದಣಿಯಾಗಿರಬೇಕು. ಆದರೆ, ಇತ್ತೀಚೆಗೆ ಟಿವಿ ಚಾನೆಲ್‌ಗ‌ಳ ಹೆಸರಿನಲ್ಲಿ ಸರಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕರನ್ನು ಬ್ಲಾಕ್‌ವೆುàಲ್‌ ಮಾಡುತ್ತಿರುವ ಕೆಲವು ನಕಲಿ ಚಾನೆಲ್‌ಗ‌ಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಸ್ಥಳೀಯ ಚಾನೆಲ್‌ಗ‌ಳ ದಾಖಲೆ ಪರಿಶೀಲನೆ ನಡೆಸಿ, ನಕಲಿ ಚಾನೆಲ್‌ಗ‌ಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸಲಾಗುವುದು. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅವರು ವಾರ್ತಾ ಇಲಾಖೆಗೆ ಸೂಚಿಸಿದರು.

ಆಪರೇಟರ್‌ಗಳ ನೋಂದಣಿ ಕಡ್ಡಾಯ
ಜಿಲ್ಲೆಯಲ್ಲಿರುವ ಎಲ್ಲ ಕೇಬಲ್‌ ಆಪರೇಟರ್‌ಗಳು ನಿಯಮನುಸಾರ ಪ್ರಧಾನ ಅಂಚೆ ಕಚೇರಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಿರಬೇಕು. ಈ ಕುರಿತು ಅಂಚೆ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು. ನೋಂದಣಿಯಾಗದ ಕೇಬಲ್‌ ಆಪರೇಟರ್‌ಗಳು ಕೂಡಲೇ ತಮ್ಮ ವ್ಯವಹಾರವನ್ನು ಸ್ಥಗಿತಗೊಳಿಸಬೇಕು. ಇಲ್ಲದಿದ್ದರೇ ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಜರಗಿಸಿ, ಸಂಬಂಧಪಟ್ಟ ಕೇಬಲ್‌ ಉಪಕರಣಗಳನ್ನು ವಶಪಡಿಸಿ ಮುಟ್ಟುಗೋಲು ಹಾಕಲಾಗುವುದು ಎಂದು ಅವರು ಎಚ್ಚರಿಸಿದರು.

ಕಠಿನ ಕ್ರಮ
ಟಿವಿಯಲ್ಲಿ ಪ್ರಸಾರವಾಗುವ ಯಾವುದೇ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ ಭಂಗ ಅಥವಾ ಯಾವುದೇ ಸಮುದಾಯಗಳ ಮಧ್ಯೆ ವೈರತ್ವ, ನೋವು ಉಂಟು ಮಾಡಿದರೆ ಸಾರ್ವಜನಿಕರು ದೂರು ನೀಡಬಹುದಾಗಿದೆ. ಸಮಾಜಕ್ಕೆ ಧಕ್ಕೆ ತರುವಂತಹ ಕಾರ್ಯಕ್ರಮ ಮತ್ತು ಆಕ್ಷೇಪಾರ್ಹ ದೃಶ್ಯಪ್ರಸಾರ ಮಾಡುವ ಯಾವುದೇ ಕೇಬಲ್‌ ಆಪರೇಟರ್‌ ಅಥವಾ ಚಾನೆಲ್‌ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು. ಇ-ಪೇಪರ್‌ ಹಾಗೂ ಮೊಬೈಲ್‌ ಲಿಂಕ್‌ ಮೂಲಕ ಸುದ್ದಿಗಳನ್ನು ಕಳುಹಿಸುವ ಮಾಧ್ಯಮಗಳು ನೋಂದಣಿಯಾಗಬೇಕಿದೆ. ಅನಧಿಕೃತವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಮಾಧ್ಯಮಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.

ಶೀಘ್ರದಲ್ಲೇ ಪರಿಶೀಲನೆ
ಸಮಿತಿಯ ಕಾರ್ಯದರ್ಶಿ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್‌ ಶಾ ಮಾತನಾಡಿ, ಸ್ಥಳೀಯ ಮಟ್ಟದಲ್ಲಿ ಕೇಬಲ್‌ ಟಿವಿ ಚಾನೆಲ್‌ಗ‌ಳ ಕಾರ್ಯಕ್ರಮದ ಮೇಲೆ ನಿಗಾ ಇಡಲು, ಅನಪೇಕ್ಷಿತ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಹಾಗೂ ಕೇಬಲ್‌ ಆಪರೇಟರ್‌ಗಳ ಸೇವೆಯ ಬಗ್ಗೆ ಸಾರ್ವಜನಿಕರಿಂದ ದೂರು ಸ್ವೀಕರಿಸಲು ಇಲಾಖೆಯಲ್ಲಿ ದೂರು ಕೋಶ ಇದೆ. ಉಡುಪಿ ಜಿಲ್ಲೆಯಲ್ಲಿ ಕೇಬಲ್‌ ಆಪರೇಟರ್‌ಗಳು ನೋಂದಣಿಗೊಂಡಿರುವ ಬಗ್ಗೆ ಅಂಚೆ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಕೇಬಲ್‌ ನಿರ್ವಹಣಾ ಸಮಿತಿ ಸದಸ್ಯರಾದ ಡಾ| ವಿರೂಪಾಕ್ಷ ದೇವರಮನೆ, ಶೃತಿ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

ದೂರು ನೀಡಿ
ಕೇಬಲ್‌ ಆಪರೇಟರ್‌ಗಳು ಗ್ರಾಹಕರಿಂದ ನಿಗದಿತ ದರವನ್ನಷ್ಟೇ ಪಡೆಯಬೇಕು. ಅದಕ್ಕಿಂತ ಹೆಚ್ಚು ವಸೂಲಿ ಮಾಡಿದ್ದಲ್ಲಿ ಸಾರ್ವಜನಿಕರು ದೂರು ನೀಡಬಹುದು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ದೂರು ಕೋಶ ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲಾ ವಾರ್ತಾ ಇಲಾಖೆ ಕಚೇರಿಗೆ ಲಿಖೀತವಾಗಿಯೂ, ಇಮೇಲ್‌ ([email protected]) ಮೂಲಕವೂ ದೂರು ನೀಡಬಹುದು. ಗ್ರಾಹಕರಿಂದ ಪಡೆಯುವ ಮಾಸಿಕ ಶುಲ್ಕಕ್ಕೆ ರಶೀದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

Pathanamthitta: 44 people arrested in the case of asault of a Dalit girl

Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ

I will welcome anyone from North Karnataka to become the Chief Minister: S.R. Patil

Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ

7-tender-coconut

Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Team India: Cannot stay with wife in foreign series: BCCI’s strict rule

Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!

sand 1

Mangaluru – ಕಾರ್ಕಳಕ್ಕೆ ಅಕ್ರಮ ಮರಳು ಸಾಗಾಟ

Cyber ​​Crime: ಅತಿ ಆಸೆಯೇ ಈ ದುಃಖಕ್ಕೆ ಪರಮ ಮೂಲ Cyber ​​Crime: ಅತಿ ಆಸೆಯೇ ಈ ದುಃಖಕ್ಕೆ ಪರಮ ಮೂಲ

Cyber ​​Crime: ಅತಿ ಆಸೆಯೇ ಈ ದುಃಖಕ್ಕೆ ಪರಮ ಮೂಲ

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Brahmavar ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ

Brahmavar ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

9-hospete

Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ

8-1

Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ

Pathanamthitta: 44 people arrested in the case of asault of a Dalit girl

Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ

I will welcome anyone from North Karnataka to become the Chief Minister: S.R. Patil

Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ

7-tender-coconut

Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.