ಶಾಸಕ ಲಿಂಬಾವಳಿಗೆ ಬಿಗ್ ರಿಲೀಫ್
Team Udayavani, Dec 11, 2019, 3:04 AM IST
ಬೆಂಗಳೂರು: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಾಸಕರು ಯುವಕನೊಬ್ಬನ ಜತೆ ಸಲಿಂಗ ಕಾಮದಲ್ಲಿ ತೊಡಗಿದ್ದಾರೆಂದು ಹೇಳಲಾದ ವಿಡಿಯೋವೊಂದು ಇತ್ತೀಚೆಗೆ ಎಲ್ಲೆಡೆ ವೈರಲ್ ಆಗಿತ್ತು. ಆದರೆ, ಈ ದೃಶ್ಯಾವಳಿಗಳು ನಕಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ವರದಿ ನೀಡಿದ್ದಾರೆ.
ಶಾಸಕರಿಗೆ ಸಂಬಂಧಿಸಿದ್ದು ಎನ್ನಲಾದ ಹಾಗೂ ವೈರಲ್ ಆದ ವಿಡಿಯೋಗಳ ಫ್ರೆàಮ್ಗಳನ್ನು ಪರಿಶೀಲಿಸಿದಾಗ ಈ ವಿಡಿಯೋ ಅಸಲಿಯಲ್ಲ ಎಂದು ತಿಳಿದು ಬಂದಿದೆ. ಜತೆಗೆ ಈ ವಿಡಿಯೋದಲ್ಲಿರುವ ಅಶ್ಲೀಲತೆ ಬಗ್ಗೆಯೂ ಯಾವುದೇ ಸ್ಪಷ್ಟ ವ್ಯಾಖ್ಯಾನ ಇಲ್ಲದಿರುವುದರಿಂದ ಅದರ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಈ ವಿಡಿಯೋ ಫೈಲ್ ಅಸಲಿ ಅಲ್ಲದಿರುವುದರಿಂದ ಅದರಲ್ಲಿರುವ ವ್ಯಕ್ತಿಗಳ ಬಗ್ಗೆಯೂ ಯಾವುದೇ ಮಾಹಿತಿ ನೀಡಲಾಗಿಲ್ಲ ಎಂದು ಎಫ್ಎಸ್ಎಲ್ ವರದಿಯಲ್ಲಿ ಉಲ್ಲೇಖೀಸಿದೆ.
ವಿಡಿಯೋ ವೈರಲ್ ಸಂಬಂಧ ಗಿರೀಶ್ ಭಾರದ್ವಾಜ್ ಎಂಬವರು ಶಾಸಕ ಅರವಿಂದ ಲಿಂಬಾವಳಿ ಪರವಾಗಿ ಜು. 19ರಂದು ಎಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ವಿಡಿಯೋ ಸಲ್ಲಿಸಿದ್ದರು. ಈ ವಿಡಿಯೋ ಪರಿಶೀಲಿಸಿದ ಎಫ್ಎಸ್ಎಲ್ ಅಧಿಕಾರಿಗಳು ಇದೀಗ ವಿಡಿಯೋ ನಕಲಿ ಎಂದು ದೃಢಪಡಿಸಿ ವರದಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.